ಯಶವಂತಪುರ ಸೇರಿದಂತೆ ಇತರೆ ಕಸ ವಿಲೇವಾರಿ ಘಟಕಗಳ ಸ್ಥಳಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು ಅಕ್ಟೋಬರ್ 10: ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಜಲಸಂಪನ್ಮೂಲ, ಅರಣ್ಯ ಇಲಾಖೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಸಮನ್ವಯ ಸಭೆ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಕಂದಾಯ ಹಾಗೂ ಅರಣ್ಯ ಇಲಾಖೆಗಳ ಜತೆ ಚರ್ಚಿಸಿ, ಪರ್ಯಾಯ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

"ಬೆಂಗಳೂರು ಅಪಾರವಾಗಿ ಬೆಳೆದ ಪರಿಣಾಮ ಕಸವಿಲೇವಾರಿ ಘಟಕಗಳು ನಗರದ ಹೃದಯ ಭಾಗಕ್ಕೆ ಬಂದಿವೆ. ಈ ಘಟಕಗಳ ಸುತ್ತಮುತ್ತ ನಾಲ್ಕೈದು ಕಿ.ಮೀ. ವರೆಗೆ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಬ್ಯಾಟರಾಯಣಪುರ ಶಾಸಕ, ಸಚಿವ ಕೃಷ್ಣಬೈರೇಗೌಡ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತಿತರರು ಅವರು ಕಸ ವಿಲೇವಾರಿ ಘಟಕ ಸ್ಥಳಾಂತರದ ವಿಚಾರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ನಾನು ಕೂಡ ಖುದ್ದು ಸ್ಥಳ ಪರಿಶೀಲನೆ ನಡೆಸಿದ್ದೆ. ಮುಂದಿನ ದಿನಗಳಲ್ಲಿ ಜನರಿಗೆ ಕಸದ ವಾಸನೆ ಬರಬಾರದು ಎಂಬ ಉದ್ದೇಶದಿಂದ ನಗರದ ಹೊರವಲಯಕ್ಕೆ ಈ ಘಟಕಗಳ ಸ್ಥಳಾಂತರಕ್ಕೆ ನಿರ್ಧರಿಸಿದ್ದೇವೆ" ಎಂದು ತಿಳಿಸಿದರು.
"ಇದಕ್ಕಾಗಿ ನಗರದ ನಾಲ್ಕೂ ಮೂಲೆಗಳಲ್ಲಿ ಅರಣ್ಯ ಪ್ರದೇಶದ ಗಡಿ ಭಾಗಗಳಲ್ಲಿ 100 ಎಕರೆ ಜಾಗ ನೀಡಿ ಎಂದು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಮನವಿ ಮಾಡಿದ್ದು, ಸರ್ವೇ ಮಾಡಿದ ಬಳಿಕ ಜಾಗ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ನಾವು ಅರಣ್ಯ ಇಲಾಖೆಗೆ ಪರ್ಯಾಯ ಜಾಗ ನೀಡುತ್ತೇವೆ. ಅಥವಾ ಖರೀದಿ ಮಾಡುತ್ತೇವೆ ಎಂದು ತಿಳಿಸಿದರು.
ತಿಪ್ಪಗೊಂಡನಹಳ್ಳಿ ಬಫರ್ ಜೋನ್ ಪುನರ್ ನಿಗದಿ:
"ತಿಪ್ಪಗೊಂಡನಹಳ್ಳಿ ನೀರು ಸ್ವಚ್ಛತೆ ಕಾಪಾಡಲು ನಾವು ಆ ಭಾಗದ ಶಾಸಕರ ಜೊತೆ ಚರ್ಚೆ ಮಾಡಿದ್ದೇವೆ. ಮುಂದಿನ ಒಂದೂವರೆ ವರ್ಷಗಳಲ್ಲಿ ನೀರನ್ನು ತರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈ ನೀರಿಗೆ ಯಾವುದೇ ಕೊಳಚೆ ನೀರು ಸೇರದಂತೆ ನೋಡಿಕೊಳ್ಳಬೇಕು. ಇಲ್ಲಿನ ಬಫರ್ ಜೋನ್ ಅಂತರ ಕಡಿಮೆ ವಿಚಾರವಾಗಿ 2017ರಲ್ಲಿ ಹಾಗೂ 2021ರಲ್ಲಿ ಸರ್ಕಾರ ಆದೇಶವಾಗಿದ್ದರೂ ನಗರಾಭಿವೃದ್ಧಿ ಇಲಾಖೆ ಮೂಲಕ ಜಾರಿ ಆಗದೆ ಯಾರಿಗೂ ಪ್ಲಾನ್ ಸ್ಯಾಂಕ್ಷನ್ ಮಾಡುತ್ತಿಲ್ಲ. ಇದರಿಂದಾಗಿ ಕಾನೂನು ಬಾಹೀರವಾಗಿ ಮನೆ, ಕಟ್ಟಡಗಳ ನಿರ್ಮಾಣವಾಗಿದೆ. ಈ ಭಾಗದಲ್ಲಿ ಕಟ್ಟುನಿಟ್ಟಾಗಿ ಕಾನೂನು ಜಾರಿ ಮೂಲಕ ನಿರ್ಮಾಣಕ್ಕೆ ಅವಕಾಶ ನೀಡಲಾಗುವುದು" ಎಂದು ತಿಳಿಸಿದರು.
"ನೆಲಮಂಗಲ, ಡಾಬಸ್ ಪೇಟೆ, ಶಿವಗಂಗೆ ಸೇರಿದಂತೆ ಅನೇಕ ಕಡೆಗಳಲ್ಲಿ ಪ್ಲಾನ್ ಗಳಿಗೆ ಅನುಮತಿ ನೀಡುತ್ತಿಲ್ಲ ಎಂದು ಜನ ಗಲಾಟೆ ಮಾಡುತ್ತಿದ್ದಾರೆ. ಕಳೆದ ಸರ್ಕಾರ ತಂದಿರುವ ಕಾನೂನನ್ನೇ ಜಾರಿ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದು, ನಗರಾಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕಾನೂನು ತಂಡ ಒಟ್ಟಾಗಿ ಕೂತು ಚರ್ಚೆ ಮಾಡಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲಾಗುವುದು" ಎಂದರು.
"ತಿಪ್ಪಗೊಂಡನಹಳ್ಳಿಯಲ್ಲಿ 300 ಎಕರೆ ಹಾಗೂ ಹೆಸರಘಟ್ಟದಲ್ಲಿ 100 ಎಕರೆ ಜಮೀನು ಇದ್ದು, ಇಲ್ಲಿ ಬಿಡಬ್ಲ್ಯೂಎಸ್ಎಸ್ ಬಿಗೆ ಸ್ವಂತ ಸೌರ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದೇವೆ. ಇವರು ಈಗ ಯುನಿಟ್ ಗೆ 6 ರೂ.ನಂತೆ ಸಾವಿರ ಕೋಟಿಯಷ್ಟು ಬಿಲ್ ಕಟ್ಟುತ್ತಿದ್ದಾರೆ. ಸೌರ ವಿದ್ಯುತ್ ಘಟಕದಿಂದ ಯುನಿಟ್ ಗೆ 4 ರೂ.ನಂತೆ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಬಹುದು. ಇದರಿಂದ ನಮ್ಮ ಜಮೀನನ್ನು ಒತ್ತುವರಿಯಿಂದ ಕಾಪಾಡಿಕೊಳ್ಳಬಹುದು, ಸೌರ ವಿದ್ಯುತ್ ಕೂಡ ಉತ್ಪಾದಿಸಬಹುದು. ಈ ವಿಷಯವನ್ನು ಮಾಲೀನ್ಯ ನಿಯಂತ್ರಣ ಮಂಡಳಿಗೆ ತಿಳಿಸಿದ್ದು, ಪರಿಶೀಲನೆ ಮಾಡಲಿದೆ" ಎಂದು ತಿಳಿಸಿದರು.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications