ಫುಟ್‌ಪಾತ್ ಒತ್ತುವರಿ ತೆರವು; ಬಿಬಿಎಂಪಿಯ ವಿಶೇಷ ಕಾರ್ಯಾಚರಣೆ

ಬೆಂಗಳೂರು, ಫೆಬ್ರವರಿ 09: ಬೆಂಗಳೂರು ಮಹಾನಗರದಲ್ಲಿನ ಪಾದಚಾರಿ ಮಾರ್ಗದ ಒತ್ತುವರಿ ತೆರವಿಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ಬಿಬಿಎಂಪಿ ವ್ಯಾಪ್ತಿಯ 609.89 ಕಿ. ಮೀ. ಮತ್ತು 734.45 ಕಿ. ಮೀ. ಉಪ ಮುಖ್ಯರಸ್ತೆಗಳ ಪಾದಚಾರಿ ಮಾರ್ಗದ ಮೇಲೆ ಶಾಶ್ವತ ಹಾಗೂ ಉಪ ಶಾಶ್ವತ ನಿರ್ಮಾಣಗಳನ್ನು ಅನುಮತಿಸುವುದಿಲ್ಲ. ಪಾದಚಾರಿ ಮಾರ್ಗಗಳ ಒತ್ತುವರಿ ಗುರುತಿಸಿ, ತೆರವುಗೊಳಿಸಲು ಕಾಲಕಾಲಕ್ಕೆ ವಿಶೇಷ ಕಾರ್ಯಚರಣೆ ಮಾಡಲಾಗುವುದು. ಈ ಕಾರ್ಯಚರಣೆಗೆ ಅಗತ್ಯವಾದ ಭದ್ರತೆ ಕಲ್ಪಿಸಲು ಪೊಲೀಸ್ ಇಲಾಖೆ ಸಮ್ಮತಿಸಿದೆ ಎಂದೂ ಹೇಳಿದೆ.

Removal Of Encroachment Of Footpath BBMP Will Take Up Special Drive

ತ್ಯಾಗರಾಜ ನಗದರಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸುವಂತೆ ಕೋರಿ ಸ್ಥಳೀಯ ನಿವಾಸಿ ಪ್ರಶಾಂತ್ ರಾವ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ಮುಖ್ಯ ನ್ಯಾಯಮೂರ್ತಿ ಪಿ. ಎಸ್. ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ. ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ವಿಚಾರಣೆ ನಡೆಸಿತು.

ಆಗ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ, ವಸತಿ ಪ್ರದೇಶದಲ್ಲಿ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ಮಳಿಗೆಗಳನ್ನು ಇಟ್ಟುಕೊಂಡು ಒತ್ತುವರಿ ಮಾಡಿರುವುದು ಕಂಡುಬಂದಿದೆ.

ಈ ಕುರಿತು ಸರ್ವೇ ನಡೆಸಿ ಆ ರಸ್ತೆಗಳಲ್ಲಿ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಸರ್ವೇ ನಡೆಸಲು ನಗರ ವ್ಯಾಪಾರ ಸಮಿತಿ ರಚಿಸಲಾಗುವುದು. ಆ ಸಮಿತಿಯು ಪಾದಚಾರಿ ಮಾರ್ಗದ ಮೇಲಿನ ಬೀದಿ ಬದಿ ವ್ಯಾಪಾರಗಳನ್ನು ತೆರವುಗೊಳಿಸುವ ಹಾಗೂ ಜೀವನಾಧಾರ ತೊಂದರೆಯಾಗದಂತೆ ವ್ಯಾಪಾರ ವಲಯ ಗುರುತಿಸಿ, ಅಲ್ಲಿ ಅವರು ತಮ್ಮ ಸರಕು ಮಾರಾಟ ಮಾಡುವ ವ್ಯವಸ್ಥೆ ಒದಗಿಸಲಿದೆ ಎಂದು ಹೇಳಿದ್ದಾರೆ.

ಎಚ್ಚರಿಕೆ ನೀಡಿದ್ದ ಬಿಬಿಎಂಪಿ: ಹಿಂದಿನ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸದ ಬಿಬಿಎಂಪಿ ಕ್ರಮವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಬಿಬಿಎಂಪಿ ಕ್ರಮಗಳನ್ನು ಕೈಗೊಳ್ಳದಿದ್ದರೆ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ತೆರವು ಕಾರ್ಯ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.

ಬಿಬಿಎಂಪಿ ಜನರಿಂದ ತೆರಿಗೆ ಸಂಗ್ರಹ ಮಾಡುತ್ತದೆ. ಸರಿಯಾದ ರಸ್ತೆ, ಪಾದಚಾರಿ ಮಾರ್ಗಗಳಿಗಾಗಿ ತೆರಿಗೆ ಪಾವತಿಸಲಾಗುತ್ತಿದೆ. ಆದರೆ, ಪಾಲಿಕೆ ಪಾದಚಾರಿ ಮಾರ್ಗಗಳ ಸುಧಾರಣೆಗೆ ಎಂದಿಗೂ ಮುಂದಾಗುತ್ತಿಲ್ಲ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಪಾದಚಾರಿ ಮಾರ್ಗ ಒತ್ತುವರಿ ಕುರಿತಂತೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಎಲ್ಲ ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸುವ ಸಂಬಂಧ ಆದೇಶವನ್ನು ನೀಡಲಾಗುವುದು. ಈ ಪ್ರಕ್ರಿಯೆ ಯಾರ ವಿರುದ್ಧವೂ ಅಲ್ಲ. ಸಾರ್ವಜನಿಕರಿಗೆ ಸಹಕಾರಿಯಾಗುವುದಕ್ಕಾಗಿ ಮಾತ್ರ ಎಂದು ಪೀಠ ಹೇಳಿತ್ತು.

ಪ್ರಕರಣ ಸಂಬಂಧ ವಿವರಣೆ ನೀಡುವುದಕ್ಕಾಗಿ ಮುಂದಿನ ವಿಚಾರಣೆ ವೇಳೆ ಪಾಲಿಕೆ ಮುಖ್ಯ ಆಯುಕ್ತರು ಖುದ್ದು ಹಾಜರಿರಬೇಕು ಎಂದು ನಿರ್ದೇಶನ ನೀಡಿತ್ತು. ಕೆಲವು ಮಂದಿ ಪಾದಚಾರಿ ಮಾರ್ಗವನ್ನು ವಾಹನ ನಿಲುಗಡೆ ಸ್ಥಳವಾಗಿ ಮಾಡಿಕೊಂಡಿದ್ದಾರೆ. ತಕ್ಷಣ ಎಲ್ಲ ಪಾದಚಾರಿ ಮಾರ್ಗದ ಒತ್ತುವರಿ ತೆರವು ಮಾಡಬೇಕು. ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದ ಕೋರ್ಟ್ ವಿಚಾರಣೆಯನ್ನು ಮುಂದೂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+