ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜಕಾಲುವೆ ಒತ್ತುವರಿ ತೆರವು: ಸಿಎಜಿ ವರದಿ ಜಾರಿಗೆ ಸಮಿತಿ ರಚನೆಗೆ ಹೈಕೋರ್ಟ್ ಆದೇಶ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಸೆ.19: ಬೆಂಗಳೂರು ನಗರದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಲು ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಸರಿಯಾಗಿ ಮಾಡದಿರುವುದೇ ಕಾರಣ ಎಂದು ಹೈಕೋರ್ಟ್ ಬಿಬಿಎಂಪಿ ವಿರುದ್ಧ ಗುಡುಗಿದೆ. ಅಲ್ಲದೆ, ರಾಜಕಾಲುವೆ ಒತ್ತುವರಿ ಕುರಿತಾದ ಸಿಎಜಿ ವರದಿ ಜಾರಿಗೊಳಿಸುವಂತೆ ನ್ಯಾಯಾಲಯ ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಅಲ್ಲದೆ, 2021 ರ ಸೆಪ್ಟೆಂಬರ್ ನಲ್ಲೇ ಸಿಎಜಿ ವರದಿ ನೀಡಿದ್ದರೂ ಕ್ರಮ ಕೈಗೊಂಡಿಲ್ಲ‌. ಸಿಎಜಿ ವರದಿ ಜಾರಿಗೆ ಬಿಬಿಎಂಪಿ ಕ್ರಮ ತೃಪ್ತಿಕರವಾಗಿಲ್ಲ ಎಂದು ಹೇಳಿರುವ ನ್ಯಾಯಪೀಠ, ಸಿಎಜಿ ವರದಿ ಜಾರಿಗೆ 3 ಅಧಿಕಾರಿಗಳ ಸಮಿತಿ ರಚಿಸಲು ಸೂಚನೆ ನೀಡಿದೆ. ಆ ಸಮಿತಿ ಸಿಎಜಿ ವರದಿ ಜಾರಿ ಬಗ್ಗೆ ನಿಗಾ ವಹಿಸಬೇಕು ಎಂದು ಆದೇಶ ನೀಡಿದೆ.

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ: ಸಿಎಜಿ ವರದಿ ನೀಡಲು ಹೈಕೋರ್ಟ್ ನಿರ್ದೇಶನಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ: ಸಿಎಜಿ ವರದಿ ನೀಡಲು ಹೈಕೋರ್ಟ್ ನಿರ್ದೇಶನ

ಬೆಂಗಳೂರಿನ ರಸ್ತೆ ದುಸ್ಥಿತಿ ಬಗ್ಗೆ ಕೋರಮಂಗಲದ ವಿಜಯ್ ಮೆನನ್ ಸಲ್ಲಿಸಿದ್ದ ಪಿಐಎಲ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತು.

ಬಿಬಿಎಂಪಿ ರಸ್ತೆ ಗುಂಡಿ ಮುಚ್ಚುವುದು, ರಾಜಕಾಲುವೆ ಒತ್ತುವರಿ ತೆರವು ಕುರಿತು ಸಲ್ಲಿಸಿದ್ದ ವರದಿಯನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ಈ ಆದೇಶ ಮಾಡಿತು. ತಜ್ಞರ ಸಮಿತಿ 15 ದಿನಗಳಿಗೊಮ್ಮೆ ಹೈಕೋರ್ಟ್ ಗೆ ವರದಿ ಸಲ್ಲಿಸಲು ಸೂಚನೆ ನೀಡಿತು.

Removal of encroachment of storm water drains: HC asked BBMP to oversee Raja Kaluve encroachments

ಇನ್ನೂ 602 ಒತ್ತುವರಿ ತೆರವು: 2626 ರಾಜಕಾಲುವೆ ಒತ್ತುವರಿ ಪೈಕಿ 2024 ತೆರವುಗೊಳಿಸಲಾಗಿದೆ, ಆದರೆ 602 ಒತ್ತುವರಿ ತೆರವು ಬಾಕಿ ಇದೆ ಎಂದು ಬಿಬಿಎಂಪಿ ಪ್ರಮಾಣಪತ್ರದಲ್ಲಿ ತಿಳಿಸಿದೆ.

ಒತ್ತುವರಿ ತೆರವು ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ, ಎಲ್ಲ ಒತ್ತುವರಿ ತೆರವುಗೊಳಿಸಿ 15 ದಿನಕ್ಕೊಮ್ಮೆ ವರದಿ ಸಲ್ಲಿಸಬೇಕು. ಹೈಕೋರ್ಟ್ ಆದೇಶ ಪಾಲಿಸದಿದ್ದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿತು.

ಜೊತೆಗೆ ರಾಜಕಾಲುವೆ ಒತ್ತುವರಿ ತೆರವು ವಿಚಾರ ಈ ವಿಭಾಗೀಯಪೀಠದ ಮುಂದಿರುವುದರಿಂದ ಬೇರೆ ಯಾವ ನ್ಯಾಯಾಲಯಗಳು, ಸಂಸ್ಥೆಗಳು ಈ ಬಗ್ಗೆ ಪ್ರತ್ಯೇಕ ವಿಚಾರಣೆ ನಡೆಸುವಂತೆ, ಈ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ ಎಂದು ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಸೆ.30 ಕ್ಕೆ ಮುಂದೂಡಿತು. ಅಷ್ಟರಲ್ಲಿ ಎಲ್ಲ ಪ್ರಗತಿ ವರದಿಗಳನ್ನು ಸಲ್ಲಿಸುವಂತೆ ಆದೇಶ ನೀಡಿತು.

ರಸ್ತೆ ಗುಂಡಿ ಮುಚ್ಚಲು ಕ್ರಮ: ಇದೇ ವೇಳೆ ನ್ಯಾಯಾಲಯ ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ ಉಪರಸ್ತೆಗಳನ್ನು ಮುಚ್ಚಲು ಹಾಗೂ ದುರಸ್ತಿ ಮಾಡಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠ ವಿವರಿಸಿದೆ.

ಪ್ರಮುಖ ರಸ್ತೆಗಳಲ್ಲಿ 2010 ರಸ್ತೆಗುಂಡಿಗಳನ್ನು ಗುರುತಿಸಿದ್ದು, ಈಗಾಗಲೇ ಎಲ್ಲ ಗುಂಡಿಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿದೆ. ಇನ್ನೂ 221 ಗುಂಡಿಗಳು ಮುಚ್ಚಬೇಕಾಗಿದೆ. ಮುಂದಿನ ಹತ್ತು ದಿನದಲ್ಲಿ ಮುಚ್ಚಲಾಗುವುದು ಎಂದು ಬಿಬಿಎಂಪಿ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು.

ಅಲ್ಲದೆ, ನಗರದ 472 ಕಿಲೋಮೀಟರ್ ಇತರೆ ಉಪ ರಸ್ತೆಗಳಿವೆ. ಇವುಗಳಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತಿದೆ, 2023ರ ಜನವರಿ 31ರೊಳಗೆ ಆ ರಸ್ತೆಗಳನ್ನು ದುರಸ್ತಿಗೊಳಿಸಲಾಗುವುದು ಎಂದು ವಿವರಿಸಿದರು.

Removal of encroachment of storm water drains: HC asked BBMP to oversee Raja Kaluve encroachments

ಆನಂತರ ಹೊಸದಾಗಿ ಪಾಲಿಕೆಗೆ ಸೇರ್ಪಡೆಯಾಗಿರುವ ಪ್ರದೇಶಗಳಲ್ಲಿನ ರಸ್ತೆಗೆ ಡಾಂಬರೀಕರಣ ಮತ್ತು ಉನ್ನತೀಕರಣ ಕಾರ್ಯವನ್ನು 2023ರ ಮಾ.31ರೊಳಗೆ ಮಾಡಲಾಗುವುದು. ಅದಕ್ಕಾಗಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ಪಾಲಿಕೆ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಎಷ್ಟು ಗುಂಡಿಗಳಿವೆ ಎಂದು ಪ್ರಶ್ನಿಸಿತು. ಈ ವೇಳೆ ಬಿಬಿಎಂಪಿ ಪರ ದೂರು ನೀಡಲು ವ್ಯವಸ್ಥೆ: ಇದೇ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಸಾರ್ವಜನಿಕರ ಅಹವಾಲು ಆಲಿಸಲು ನ್ಯಾಯಾಲಯದ ನಿರ್ದೇಶದನಂತೆ ದೂರು ನೀಡುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ಪಾಲಿಕೆ ತಿಳಿಸಿದೆ.

ಆನಂತರ ನ್ಯಾಯಾಲಯ ಹಾಗಿದ್ದರೆ ದೂರು ನೀಡಲು ಪ್ರಾರಂಭಿಸಿರುವ ವೆಬ್ ಸೈಟ್ ಕುರಿತು ಹೆಚ್ಚಿನ ಪ್ರಚಾರ ನೀಡಬೇಕು. ಅಲ್ಲದೆ, ಸಾರ್ವಜನಿರು ನೀಡುವ ರಸ್ತೆಗುಂಡಿಗಳ ಕುರಿತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಲಭ್ಯವಾಗುವಂತೆ ಮಾಡಬೇಕು. ಜತೆಗೆ, ಅದನ್ನು ಸರಿ ಪಡಿಸಿರುವ ಫೋಟೋ ಸಮೇತ ಅಪ್ಲೋಡ್ ಮಾಡಬೇಕು ಎಂದು ಪೀಠ ಸೂಚನೆ ನೀಡಿತು.

ಅಲ್ಲದೆ, ಬೆಂಗಳೂರು ನಗರಲ್ಲಿ ಗುಂಡಿ ರಹಿತ ರಸ್ತೆಗಳನ್ನು ಬಯಸುವುದು ಸಾರ್ವಜನಿಕರ ಹಕ್ಕು ಅದನ್ನು ನೀಡುವುದು ಪಾಲಿಕೆ ಕರ್ತವ್ಯವಾಗಿದೆ ಎಂದು ನ್ಯಾಯಪೀಕ್ಕೆ ನಿರ್ದೇಶನ ನೀಡಿತು.

English summary
Removal of encroachment of storm water drains: HC asked BBMP to setup committee to oversee the removal of encroachments
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X