ರಾಜಕಾಲುವೆ ಒತ್ತುವರಿ ತೆರವು: ಹಿಂದಿನ ಆದೇಶ ಪಾಲನೆಗೆ ಹೈಕೋರ್ಟ್ ಕಟ್ಟಾಜ್ಞೆ
ಬೆಂಗಳೂರು, ಅ.20: ನಗರದಲ್ಲಿನ ರಾಜಕಾಲುವೆಯ ಒತ್ತುವರಿಯನ್ನು ನಿಗದಿತ ಕಾಲಮಿತಿಯಲ್ಲಿ ತೆರವುಗೊಳಿಸಲು ಈ ಹಿಂದೆ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೈಕೋರ್ಟ್, ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶನ ನೀಡಿದೆ.
ಬೆಂಗಳೂರಿನ ಕೆರೆಗಳ ಸಂರಕ್ಷಣೆ ಹಾಗೂ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವ ಸಂಬಂಧ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ಪೀಠ ಗುರುವಾರ ನಡೆಸಿತು.
ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಸೂಚಿಸಿ 2022ರ ಸೆ.12ರಂದು ನ್ಯಾಯಾಲಯ ಆದೇಶ ಹೊರಡಿಸಿದೆ. ಆ ಆದೇಶವನ್ನು ಸರ್ಕಾರ ಮತ್ತು ಬಿಬಿಎಂಪಿ ಸೇರಿದಂತೆ ಸಂಬಂಧಪಟ್ಟ ಎಲ್ಲ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಪರಿಗಣಿಸಬೇಕು. ರಾಜಕಾಲುವೆ ತೆರವಿಗೆ ತಕ್ಷಣವೇ ಕ್ರಮ ಕೈಗೊಂಡು ವಸ್ತುಸ್ಥಿತಿ ವರದಿ ಸಲ್ಲಿಸಬೇಕು. ಜೊತಗೆ, ರಾಜಕಾಲುವೆ ಮತ್ತು ಮಳೆ ನೀರು ಕಾಲುವೆಗೆ ಯಾವುದೇ ರೀತಿ ತಾಜ್ಯ ಸುರಿಯುವುದನ್ನು ತಡೆಗಟ್ಟಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ನಿರ್ದೇಶಿಸಿದೆ.
14 ಒತ್ತುವರಿ ತೆರವು: ಈ ಮಧ್ಯೆ, ನಗರದ ವೃಷಭಾವತಿ ನದಿ ಜಲಾನಯನ ಪ್ರದೇಶದ ಒಟ್ಟು 14 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ತ್ಯಾಜ್ಯ ಹಾಗೂ ರಾಸಾಯನಿಕ ಸೇರ್ಪಡೆಯಿಂದ ಮಲಿನಗೊಂಡಿರುವ ವೃಷಭಾವತಿ ನದಿ ಸಂರಕ್ಷಣೆಗೆ ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಳೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆ ನಡೆಸಿತು.
ಬಿಬಿಎಂಪಿ ಪರ ವಕೀಲರು, ಬಿಬಿಎಂಪಿಯ ರಾಜಕಾಲುವೆ ವಿಭಾಗದ ಮುಖ್ಯ ಇಂಜಿನಿಯರ್ ಎಂ. ಲೋಕೇಶ್ ಅನುಪಾಲನಾ ವರದಿಯನ್ನು ಫೋಟೋ ಸಹಿತ ದಾಖಲೆಗಳೊಂದಿಗೆ ನ್ಯಾಯಪೀಠಕ್ಕೆ ಸಲ್ಲಿಸಿದರು. ಅದನ್ನು ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ಮೂರು ವಾರ ಮುಂದೂಡಿತು.
ಅನುಪಾಲನಾ ವರದಿ ಸಲ್ಲಿಕೆ: ಅದರಂತೆ ಅನುಪಾಲನಾ ವರದಿ ಸಲ್ಲಿಸಿರುವ ಬಿಬಿಎಂಪಿ, ಹೈಕೋರ್ಟ್ ನಿರ್ದೇಶದನಂತೆ ವೃಷಭಾವತಿ ನದಿ ಜಲಾಯನ ಪ್ರದೇಶದ ಸರ್ವೇ ನಡೆಸಲಾಗಿದೆ. ಸರ್ವೇ ಇಲಾಖೆಯ ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿರುವ ಒತ್ತುವರಿ ಪ್ರದೇಶಗಳಲ್ಲಿದ್ದ ಹಲವು ಒತ್ತುವರಿದಾರರಿಗೆ ನೋಟಿಸ್ ನೀಡಿ, ಒತ್ತುವರಿ ತೆರವುಗೊಳಿಸಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಅವಧಿ ಮೀರಿದರೂ ತೆರವು ಮಾಡದ ಹಿನ್ನೆಲೆಯಲ್ಲಿ (ಆರ್‌ಆರ್ ನಗರ ಹಾಗೂ ದಾಸರಹಳ್ಳಿ ವಲಯಗಳಲ್ಲಿ) ಸೆ.3 ಹಾಗೂ ಸೆ.15ರಂದು ಪೊಲೀಸ್ ಭದ್ರತೆಯೊಂದಿಗೆ ತೆರವುಗೊಳಿಸಲಾಗಿದೆ. ಈವರೆಗೆ ಒಟ್ಟು 14 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬಾಕಿ ಒತ್ತುವರಿಗಳ ತೆರವಿಗಾಗಿ ಭೂದಾಖಲೆಗಳ ಉಪ ನಿರ್ದೇಶಕರಿಗೆ (ಡಿಡಿಎಲ್‌ಆರ್) ಸೆ.13ರಂದು ಪತ್ರ ಬರೆದಿರುವ ಬಿಬಿಎಂಪಿ, ನದಿ ಪ್ರದೇಶದಲ್ಲಾಗಿರುವ ಒತ್ತುವರಿಗಳನ್ನು ತೋರಿಸುವ ನಕ್ಷೆ ಒದಗಿಸುವಂತೆ ಹಾಗೂ ಬಿಬಿಎಂಪಿ ಅಧಿಕಾರಿಗಳ ಸಮ್ಮುಖದಲ್ಲೇ ಒತ್ತುವರಿಯಾಗಿರುವ ಭಾಗಗಳನ್ನು ಭೌತಿಕವಾಗಿ ಗುರುತಿಸುವಂತೆ ಕೋರಿದೆ. ಅಲ್ಲದೆ, ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಬೆಂಗಳೂರು ಉತ್ತರದ ಎಡಿಎಲ್‌ಆರ್ ಪಾಲಿಕೆಗೆ ಸೆ.28ರಂದು ಪತ್ರ ಬರೆದು, ಬಿಬಿಎಂಪಿ ಅಧಿಕಾರಿಗಳಿಗೆ ಸಹಕರಿಸಲು ಮೂವರು ಸರ್ವೇಯರ್‌ಗಳನ್ನು ನಿಯೋಜಿಸುವುದಾಗಿ ತಿಳಿಸಿತ್ತು.
ಜತೆಗೆ, ತಹಸೀಲ್ದಾರರು ನಕ್ಷೆ ಮತ್ತಿತರ ದಾಖಲೆಗಳನ್ನು ಪರಿಶೀಲಿಸುತ್ತಿರುವುದಾಗಿ ಹೇಳಿತ್ತು. ಆದರೆ, ಈವರೆಗೂ ಸರ್ವೇಯರ್‌ಗಳು ಸಮೀಕ್ಷೆ ನಡೆಸುವುದಕ್ಕಾಗಿ ಹಾಜರಾಗಿಲ್ಲ. ಆದ್ದರಿಂದ, ಅ.14ರಂದು ಡಿಡಿಎಲ್‌ಆರ್‌ಗೆ ಜ್ಞಾಪನಾ ಪತ್ರ ಕಳುಹಿಸಲಾಗಿದೆ ಎಂದು ಪಾಲಿಕೆ ಅನುಪಾಲನಾ ವರದಿಯಲ್ಲಿ ಹೇಳಿದೆ.
ಪ್ರಕರಣದ ಹಿನ್ನೆಲೆ: ಅರ್ಜಿಯನ್ನು ಕಳೆದ ಜು.28ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಸರ್ವೇ ಇಲಾಖೆ ನಡೆಸಿರುವ ಸಮೀಕ್ಷೆಯ ಪ್ರಕಾರ ವೃಷಭಾವತಿ ಉಪ ನದಿಗಳ ನಾಲೆಯ ಒಟ್ಟು 17 ಎಕರೆ 25 ಗುಂಟೆ ಹಾಗೂ ನದಿ ಜಲಾಯನ ಪ್ರದೇಶಗಳಲ್ಲಿ 10 ಎಕರೆ 25 ಗುಂಟೆ ಜಾಗ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿದೆ. ಈ ಒತ್ತುವರಿಯನ್ನು ಬಿಬಿಎಂಪಿಯ ಸಂಬಂಧಪಟ್ಟ ಸಹಾಯಕ ಕಾರ್ಯಕಾರಿ ಇಂಜಿನಿಯರ್‌ಗಳು ಸೆ.30ರೊಳಗೆ ತೆರವುಗೊಳಿಸಿ, ಅ.೧೧ರೊಳಗೆ ಈ ಆದೇಶದ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿತ್ತು.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications