5 ಎಕರೆಗಿಂತ ಹೆಚ್ಚಿನ ಭೂ ಒತ್ತುವರಿ ತೆರವಿಗೆ ಆದ್ಯತೆ ನೀಡಿ

ಬೆಂಗಳೂರು, ನ. 21: ರಾಜ್ಯದಲ್ಲಿ ಐದು ಎಕರೆಗಿಂತ ಹೆಚ್ಚು ಒತ್ತುವರಿಗೊಂಡ ಭೂಮಿ ತೆರವಿಗೆ ಆದ್ಯತೆ ನೀಡಬೇಕೆಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. [ಭೂ ಒತ್ತುವರಿ ತೆರವು ಮಾಡಿ: ಆಪ್ ಪತ್ರ]

ನಮ್ಮ ಬೆಂಗಳೂರು ಪ್ರತಿಷ್ಠಾನವು ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾ. ಡಿ.ಎಚ್ ವಘೇಲಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. [ಒತ್ತುವರಿ: ವರದಿ ಕೇಳಿದ ರಾಜ್ಯಪಾಲ]

court

ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳುವಾಗ ಐದು ಎಕರೆಗಿಂತ ಹೆಚ್ಚು ವಿಸ್ತೀರ್ಣದ ಭೂಮಿಗೆ ಆದ್ಯತೆ ನೀಡಬೇಕು. ಕರ್ನಾಟಕ ರಾಜ್ಯ ಸಾರ್ವಜನಿಕ ಜಮೀನು (ಕೆಪಿಎಲ್‌ಸಿ) ಗಳ ಒತ್ತುವರಿ ತೆರವು ನಡೆಸಿದ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕೆಂದು ಸರ್ಕಾರಕ್ಕೆ ಸೂಚಿಸಿದೆ. [ಭೂ ಇಕ್ಕಟ್ಟಿನಲ್ಲಿ ದಿನೇಶ್ ಗುಂಡೂರಾವ್]

ಒತ್ತುವರಿ ಆಗಿರುವ ಸರ್ಕಾರಿ ಭೂಮಿ ತೆರವುಗೊಳಿಸಲು ಸರ್ಕಾರ ಸೂಚಿಸಬೇಕು. ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣಿಯನ್ ಅವರ ವರದಿ ಜಾರಿಗೊಳಿಸಬೇಕೆಂದು ಕೋರಿ ನಮ್ಮ ಬೆಂಗಳೂರು ಪ್ರತಿಷ್ಠಾನವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿತ್ತು. [ದಿನೇಶ್ ರಾಜೀನಾಮೆಗೆ ಬಿಜೆಪಿ ಪಟ್ಟು]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+