ನವೀಕರಣಗೊಂಡ ಬೆಂಗಳೂರು ಟೌನ್‌ಹಾಲ್ ಹೇಗಿದೆ?
ಬೆಂಗಳೂರು, ಏ. 9 : ನವೀಕರಣಗೊಂಡ ಬೆಂಗಳೂರಿನ ಟೌನ್‌ಹಾಲ್ ಬುಧವಾರ ಉದ್ಘಾಟನೆಗೊಂಡಿದೆ. ನೂತನ ವೇದಿಕೆ, ಹವಾನಿಯಂತ್ರಿತ ವ್ಯವಸ್ಥೆ, ವಿದ್ಯುತ್ ಮತ್ತು ಬೆಳಕಿನ ವ್ಯವಸ್ಥೆ, ಅತ್ಯಾಧುನಿಕ ಆಸನ ಮುಂತಾದ ವ್ಯವಸ್ಥೆಗಳನ್ನು ಹೊಸದಾಗಿ ಆಳವಡಿಸಲಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತ್ ಕುಮಾರ್, ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಬಿಬಿಎಂಪಿ ಮೇಯರ್ ಎನ್.ಶಾಂತಕುಮಾರಿ ಸೇರಿದಂತೆ ಹಲವು ನಾಯಕರು ಬುಧವಾರ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟೌನ್‌ಹಾಲ್ ನವೀಕರಣ ಕಾಮಗಾರಿಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ ಇಂಡಿಯಾ ಲಿ. ತಯಾರಿಸಿದ್ದ ವಿಸ್ತ್ರತ ಯೋಜನಾ ವರದಿ ಆಧಾರದ ಮೇಲೆ ಮಾಡಲಾಗಿದ್ದು, 5 ಕೋಟಿ ರೂ. ವೆಚ್ಚ ಮಾಡಲಾಗಿದೆ. ಗುತ್ತಿಗೆ ನೀಡಿದ್ದ ಸಂಸ್ಥೆಯೇ ಐದು ವರ್ಷಗಳ ಕಾಲ ಉಚಿತವಾಗಿ ನಿರ್ವಹಣೆ ಮಾಡಲಿದೆ. [ಮೂರು ತಿಂಗಳ ಕಾಲ ಬೆಂಗಳೂರಿನ ಟೌನ್ ಹಾಲ್ ಬಂದ್]
ನವೀಕರಣಗೊಂಡ ಟೌನ್‌ಹಾಲ್‌ನಲ್ಲಿ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಪ್ಲಾಸ್ಟಿಕ್ ನಿಷೇಧಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಮೇಯರ್ ಎನ್.ಶಾಂತಕುಮಾರಿ ಹೇಳಿದ್ದಾರೆ. ಮತ್ತಷ್ಟು ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಎರಡನೇ ಹಂತದ ನವೀಕರಣ ಕಾರ್ಯವನ್ನು ಕೈಗೊಳ್ಳುವ ಪ್ರಸ್ತಾಪವೂ ಇದೆ ಎಂದು ಮೇಯರ್ ತಿಳಿಸಿದ್ದಾರೆ.

ನವೀಕರಣಗೊಂಡ ಟೌನ್‌ಹಾಲ್ ಉದ್ಘಾಟನೆ
2014ರ ಸೆಪ್ಟೆಂಬರ್‌ನಿಂದ ನವೀಕರಣ ಕಾರ್ಯಕ್ಕಾಗಿ ಬಂದ್ ಮಾಡಲಾಗಿದ್ದ ಬೆಂಗಳೂರಿನ ಟೌನ್‌ಹಾಲ್‌ಅನ್ನು ಬುಧವಾರ ಉದ್ಘಾಟನೆ ಮಾಡಲಾಗಿದೆ. 5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ವ್ಯವಸ್ಥೆಗಳನ್ನು ಟೌನ್‌ಹಾಲ್‌ನಲ್ಲಿ ಅಳವಡಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನವೀಕರಣ ಕಾಮಗಾರಿಯನ್ನು ಕೈಗೊಂಡಿತ್ತು.

ಯಾವ-ಯಾವ ಸೌಲಭ್ಯಗಳಿವೆ?
ಧ್ವನಿ ವರ್ಧಕ, ಪಾಲ್ ಸೀಲಿಂಗ್, ವೇದಿಕೆ ನಿರ್ಮಾಣ, ಹವಾನಿಯಂತ್ರಣ ವ್ಯವಸ್ಥೆ, ಹೊಸ ಆಸನ ವ್ಯವಸ್ಥೆ, ನೂತನ ಶೌಚಾಲಯ ನಿರ್ಮಾಣ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ನವೀಕರಣದ ಗುತ್ತಿಗೆ ಪಡೆದಿದ್ದ ಸಂಸ್ಥೆಯೇ ಎಲ್ಲಾ ಸೌಲಭ್ಯಗಳ ನಿರ್ವಹಣೆಯನ್ನು ಐದು ವರ್ಷಗಳ ಅವಧಿಗೆ ಉಚಿತವಾಗಿ ಮಾಡಲಿದೆ.

5 ಕೋಟಿ ವೆಚ್ಚದಲ್ಲಿ ನವೀಕರಣ
ಟೌನ್‌ಹಾಲ್ ನವೀಕರಣ ಕಾಮಗಾರಿಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ ಇಂಡಿಯಾ ಲಿ. ತಯಾರಿಸಿದ್ದ ವಿಸ್ತ್ರತ ಯೋಜನಾ ವರದಿ ಆಧಾರದ ಮೇಲೆ ಮಾಡಲಾಗಿದ್ದು, 5 ಕೋಟಿ ರೂ. ವೆಚ್ಚ ಮಾಡಲಾಗಿದೆ. 6 ಕೋಟಿ ವೆಚ್ಚದಲ್ಲಿ ಎರಡನೇ ಹಂತದ ಆಧುನೀಕರಣ ಕಾಮಗಾರಿಯನ್ನು ನಡೆಸುವ ಉದ್ದೇಶವನ್ನು ಬಿಬಿಎಂಪಿ ಹೊಂದಿದೆ.

ಟೌನ್‌ಹಾಲ್‌ನಲ್ಲಿ ಪ್ಲಾಸ್ಟಿಕ್ ನಿಷೇಧ
ನವೀಕರಣಗೊಂಡ ಟೌನ್‌ಹಾಲ್‌ನಲ್ಲಿ ಕುಷನ್ ಆಸನಗಳನ್ನು ನಿರ್ಮಿಸಲಾಗಿದ್ದು, ಕಿಡಿಗೇಡಿಗಳನ್ನು ಅದಕ್ಕೆ ಹಾನಿ ಮಾಡಬಾರದು ಎಂದು ಮೇಯರ್ ಎನ್.ಶಾಂತಕುಮಾರಿ ಮನವಿ ಮಾಡಿದ್ದಾರೆ. ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಟೌನ್‌ಹಾಲ್‌ವೊಳಗೆ ಪ್ಲಾಸ್ಟಿಕ್ ನಿಷೇಧಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮೇಯರ್ ಹೇಳಿದ್ದಾರೆ.

ಪುಟ್ಟಣ್ಣ ಚೆಟ್ಟಿ ಪ್ರತಿಮೆ ಸ್ಥಾಪನೆ
ಟೌನ್‌ಹಾಲ್ ಮುಂಭಾಗದಲ್ಲಿ ಪುಟ್ಟಣ್ಣ ಚೆಟ್ಟಿ ಅವರ ಪ್ರತಿಮೆ ಸ್ಥಾಪನೆ ಮಾಡುವ ಉದ್ದೇಶವಿದೆ. ಈ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಬೆಂಗಳೂರು ನಗರಸಭೆ ಅಧ್ಯಕ್ಷರಾಗಿದ್ದ ಪುಟ್ಟಣ್ಣ ಚೆಟ್ಟಿ ಅವರ ಹೆಸರಿನಲ್ಲಿ ನಿರ್ಮಿಸಿದ ಸರ್.ಪುಟ್ಟಣ್ಣ ಚೆಟ್ಟಿ ಪುರಭವನ ಟೌನ್ ಎಂದು ಪ್ರಸಿದ್ಧಿ ಪಡೆದಿದೆ.

ಬಾಡಿಗೆ ದರ ಶೀಘ್ರದಲ್ಲೇ ಹೆಚ್ಚಳ?
ನವೀಕರಣಗೊಂಡ ಟೌನ್‌ಹಾಲ್‌ನ ದಿನದ ಬಾಡಿಗೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಮೊದಲು 10 ಸಾವಿರ ರೂ. ಬಾಡಿಗೆ ಪಡೆಯಲಾಗುತ್ತಿತ್ತು. ಈಗ ಹೊಸ ವ್ಯವಸ್ಥೆ ಅಳವಡಿಸಿರುವುದರಿಂದ ಬಾಡಿಗೆ ಹೆಚ್ಚಾಗಲಿದೆ. ಈ ಕುರಿತು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ ಪಡೆಯಬೇಕಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications