ಹಿರಿಯ ನಟ ಎಚ್‌.ಜಿ. ಸೋಮಶೇಖರ ರಾವ್ ವಿಧಿವಶ

ಬೆಂಗಳೂರು, ನ. 3: ಹಿರಿಯ ನಟ, ರಂಗಭೂಮಿ ಕಲಾವಿದ ಎಚ್‌.ಜಿ. ಸೋಮಶೇಖರ ರಾವ್ ಅವರು ಮಂಗಳವಾರ(ನ.3) ದಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸೋಮಶೇಖರ ರಾವ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಜಯನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಆದರೆ, ಚಿಕಿತ್ಸೆ ಕೊಡಿಸುವುದಕ್ಕೂ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. 86 ವರ್ಷ ವಯಸ್ಸಿನ ಸೋಮಶೇಖರ್ ರಾವ್ ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ವರ್ಗ, ಅಭಿಮಾನಿಗಳನ್ನು ಅಗಲಿದ್ದಾರೆ.

ಬೆಂಗಳೂರಿನ ಶ್ರೀನಗರದಲ್ಲಿರುವ ಅವರ ಸ್ವಗೃಹದಲ್ಲಿ ಮೃತರ ಅಂತಿಮ ದರ್ಶನ ಪಡೆದುಕೊಳ್ಳಬಹುದು. ಇಂದು ಸಂಜೆ 4 ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬದವರು ಹೇಳಿದ್ದಾರೆ.

Renowned Actor, theatre person, writer H.G Somashekara Rao passes away

ಹಿರಿಯ ನಟ ದತ್ತಣ್ಣ (ದತ್ತಾತ್ರೇಯ) ಅವರ ಸಹೋದರರಾದ ಸೋಮಶೇಖರ ರಾವ್ ಅವರು ಕೆನರಾ ಬ್ಯಾಂಕ್‌ನ ಉದ್ಯೋಗಿಯಾಗಿದ್ದರು. ಮಿಂಚಿನ ಓಟ, ಮಿಥಿಲೆಯ ಸೀತೆಯರು, ಸಾವಿತ್ರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹರಕೆಯ ಕುರಿ ಚಿತ್ರಕ್ಕಾಗಿ ರಾಜ್ಯ ಪೋಷಕ ನಟ ಪ್ರಶಸ್ತಿ ಪಡೆದುಕೊಂಡಿದ್ದರು. ರಂಗಭೂಮಿಯಲ್ಲಿ ಹಲವು ಪ್ರಯೋಗಗಳಿಗೆ ಪ್ರೋತ್ಸಾಹ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+