Darshan: ದರ್ಶನ್ ಪ್ರಕರಣದ ತನಿಖಾಧಿಕಾರಿ ದಿಢೀರ್ ಬದಲಾವಣೆ
ಬೆಂಗಳೂರು, ಜೂನ್ 13: ಕನ್ನಡ ಚಿತ್ರರಂಗದ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ದಿಢೀರ್ ಬದಲಾವಣೆ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯನ್ನು ಇಂದಿನಿಂದ ಬದಲಾವಣೆ ಮಾಡಲಾಗಿದ್ದು, ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇಷ್ಟು ದಿನ ಕಾಮಾಕ್ಷಿಪಾಳ್ಯ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಪ್ರಕರಣದ ತನಿಖೆ ನಡೆಸುತ್ತಿದ್ದು, ಇಂದಿನಿಂದ ಎಸಿಪಿ ಚಂದನ್ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರಿಯಲಿದೆ.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸಿ.ಕೆ ಅಚ್ಚುಕಟ್ಟು ಠಾಣೆಯಿಂದ ಗಿರೀಶ್ ನಾಯ್ಕ್ ಅವರನ್ನು ಕಾಮಾಕ್ಷಿಪಾಳ್ಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಎರಡು ದಿನಗಳ ಹಿಂದೆ ಪುನಃ ವಾಪಸ್ ತಮ್ಮ ಠಾಣೆಗಳಿಗೆ ಹೋಗಲು ಆದೇಶ ಬಂದಿದ್ದು, ಈ ಮಧ್ಯೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜವಾಬ್ದಾರಿ ಇವರ ಹೆಗಲಿಗೆ ಬಿದ್ದಿತ್ತು.
ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್, ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಒಟ್ಟು 14 ಜನರನ್ನು ಬಂಧಿಸಿ ಕೇಸ್‌ಅನ್ನು ಸಮರ್ಥವಾಗಿ ನಡೆಸುತ್ತಿದ್ದರು. ಇದೀಗ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಠಾಣೆಗೆ ವಾಪಸ್ ಹಿನ್ನಲೆಯಲ್ಲಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇನ್ನುಮುಂದೆ ಎಸಿಪಿ ಚಂದನ್ ನೇತೃತ್ವದಲ್ಲಿ ಮತ್ತಷ್ಟು ತನಿಖೆ ಚುರುಕುಗೊಳ್ಳುವ ಸಾಧ್ಯತೆ ಇದೆ.












Click it and Unblock the Notifications