ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಹುಮತವಿಲ್ಲದಿದ್ದರೂ ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನ: ರೇಣುಕಾಚಾರ್ಯ

|
Google Oneindia Kannada News

ಬೆಂಗಳೂರು, ಜುಲೈ 23: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಸರ್ಕಾರಕ್ಕೆ ಬಹುಮತವಿಲ್ಲದಿದ್ದರೂ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕಎಂಪಿ ರೇಣುಕಾಚಾರ್ಯ ಆರೋಪಿಸಿದ್ದಾರೆ.

ಮಂಗಳವಾರ ರೆಸಾರ್ಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಬಹುಮತವೇ ಇಲ್ಲ ಆದರೂ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ವಿಶ್ವಾಸಮತ ಯಾಚನೆ ಮಾಡಿದ್ದರೆ ಮರ್ಯಾದಿ ಉಳಿಯುತ್ತದೆ.

ಸಿಎಂ ಕುಮಾರಸ್ವಾಮಿಗೆ ಆಣೆ ಪ್ರಮಾಣ ಸವಾಲೆಸೆದ ಎಂಪಿ ರೇಣುಕಾಚಾರ್ಯಸಿಎಂ ಕುಮಾರಸ್ವಾಮಿಗೆ ಆಣೆ ಪ್ರಮಾಣ ಸವಾಲೆಸೆದ ಎಂಪಿ ರೇಣುಕಾಚಾರ್ಯ

ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಗೌರವವಿದೆ. ಅವರು ಸಮ್ಮಿಶ್ರ ಸರ್ಕಾರದ ಪರವಾಗಿ ನಿಲ್ಲಬಾರದು. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರ ಕೈಯನ್ನು ಕಟ್ಟಿ ಹಾಕಿದೆ. ಸರ್ಕಾರ ಉಳಿಯುವುದು ಸಿದ್ದರಾಮಯ್ಯ ಅವರಿಗೂ ಇಷ್ಟವಿಲ್ಲ ಎಂದರು.

Renukacharya criticised HDK that without majority government is running

ಡಾ. ಪರಮೇಶ್ವರ ಕೂಡ ಸಿಎಂ ಕುಮಾರಸ್ವಾಮಿ ಅವರ ಅಣತಿಯಂತೆ ಆಡುತ್ತಿದ್ದಾರೆ. ಸಿಎಂ ಮಾತು ಕೇಳಿ ವಚನಭ್ರಷ್ಟರಾಗುತ್ತಿದ್ದಾರೆ, ಇದರಿಂದ ಸಿದ್ದರಾಮಯ್ಯ ಹಾಗೂ ಪಕ್ಷಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದರು.

ಇಂದು ಸುಪ್ರೀಂಕೋರ್ಟ್‌ನಲ್ಲಿ ಅತೃಪ್ತ ಶಾಸಕರ ಅರ್ಜಿ ವಿಚಾರಣೆ ನಡೆಯುತ್ತಿದೆ. ಆರ್ ಶಂಕರ್ ಅರ್ಜಿ ಆರನೆಯದಾಗಿ ವಿಚಾರಣೆ ನಡೆಸಲಾಗುತ್ತದೆ. ಹಾಗೆಯೇ ಇಂದೆಯೇ ವಿಶ್ವಾಸಮತ ಯಾಚನೆ ಮಾಡಬೇಕು ಸಂಜೆ 4 ಗಂಟೆಯವ ಒಳಗೆ ಕಲಾಪ ಮುಗಿಯಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

English summary
Former minister Renukacharya alleged that Even without having majority HD kumarasway running the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X