Darshan Thoogudeepa: ದರ್ಶನ್‌ಗೆ ಹೊಸ ಸಂಕಷ್ಟ: ಸರ್ಕಾರದ ಈ ಕ್ರಮದಿಂದ ಮತ್ತೆ ಜೈಲು ಸೇರುವ ಆತಂಕ!

ರೇಣುಕಾಸ್ವಾಮಿ ಕೊಲೆ ಆರೋಪಿ ಹಾಗೂ ನಟ ದರ್ಶನ್‌ಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಶಾಕ್‌ ಕೊಟ್ಟಿದೆ. ನಟ ದರ್ಶನ್‌ಗೆ ಇದೀಗ ಜಾಮೀನು ಸಿಕ್ಕಿದ್ದು, ಹೊಸ ಜೀವನ ಕಟ್ಟಿಕೊಳ್ಳುವ ಹಾಗೂ ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಯೋಚನೆ ನಡೆದಿದೆ. ಈ ಸಂಬಂಧ ಅವರು ಈಗಾಗಲೇ ಸಿದ್ಧತೆ ಸಹ ಮಾಡಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲೇ ನಟ ದರ್ಶನ್‌ಗೆ ದೊಡ್ಡ ಸಂಕಷ್ಟ ಎದುರಾಗಿದೆ. ದರ್ಶನ್‌ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಕೇಸ್‌ನ 7 ಜನ ಆರೋಪಿಗಳಿಗೆ ಶಾಕ್‌ ಕೊಟ್ಟಿದೆ. ದರ್ಶನ್‌ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಧಿಕೃತ ಆದೇಶ ಕೊಟ್ಟಿದೆ.

ರಾಜ್ಯದಲ್ಲಿ ಸಚಿವ ಪ್ರಿಯಾಂಕಾ ಖರ್ಗೆ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಬಿಜೆಪಿ ಪಕ್ಷದ ನಾಯಕರು ಕಾಂಗ್ರೆಸ್‌ನ ಮೇಲೆ ಮುಗಿಬಿದ್ದಿದ್ದಾರೆ. ರಾಜ್ಯ ಸರ್ಕಾರಕ್ಕೆ ಈ ಪ್ರಕರಣ ಮುಜುಗರವನ್ನು ಉಂಟು ಮಾಡಿದೆ. ಇದರ ನಡುವೆ ರಾಜ್ಯದಲ್ಲಿ ಮತ್ತೊಂದ ಪ್ರಮುಖ ಬೆಳವಣಿಗೆ ಆಗಿದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಇದ್ದ ಡಿಬಾಸ್‌ ಹಾಗೂ ಡಿಬಾಸ್‌ ಫ್ಯಾನ್ಸ್‌ಗಳಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಶಾಕ್‌ ಕೊಟ್ಟಿದೆ. ದರ್ಶನ್‌ ಅವರ ಆರೋಗ್ಯದಲ್ಲಿ ಈಗಷ್ಟೇ ಚೇತರಿಕೆ ಕಾಣಿಸಿಕೊಂಡಿದ್ದು, ಅವರು ಮತ್ತೆ ಸಿನಿಮಾಗಳಲ್ಲಿ ನಟಿಸಲಿದ್ದಾರೆ. ಸಿನಿಮಾಗಳ ಶೂಟಿಂಗ್ ಮರು ಪ್ರಾರಂಭವಾಗಲಿದೆ ಎನ್ನುವ ಸುದ್ದಿಗಳು ಬಂದಿದ್ದವು. ಈ ಸುದ್ದಿಯನ್ನು ಕೇಳಿ ಅವರ ಅಭಿಮಾನಿಗಳು ಸಂತೋಷಪಟ್ಟಿದ್ದರು.

Renukaswamy murder case Darshan bail likely to be cancelled Karnataka govt moves Supreme Court

ಆದರೆ, ಇದರ ಬೆನ್ನಲ್ಲೇ ದರ್ಶನ್ ಹಾಗೂ ದರ್ಶನ್‌ ಗ್ಯಾಂಗ್‌ಗೆ ಸಂಕಷ್ಟ ಎದುರಾಗಿದ್ದು. ಡಿ ಬಾಸ್‌ ಅಭಿಮಾನಿಗಳಿಗೂ ಹೊಸ ವರ್ಷದ ಸಂಭ್ರಮದಲ್ಲಿ ದೊಡ್ಡ ಶಾಕ್‌ ಎದುರಾಗಿದೆ.

ಜಾಮೀನು ರದ್ದಾಗುವ ಆತಂಕ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ಹಲವರಿಗೆ ಪೂರ್ಣ ಪ್ರಮಾಣದಲ್ಲಿ ಜಾಮೀನು ಸಿಕ್ಕಿದೆ. ಆದರೆ, ಇದೀಗ ಹೈಕೋರ್ಟ್‌ ತೀರ್ಪನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಹೋಗುವುದಕ್ಕೆ ರಾಜ್ಯ ಪೊಲೀಸ್‌ ಇಲಾಖೆ ಮುಂದಾಗಿದೆ. ಇದಕ್ಕೆ ರಾಜ್ಯ ಗೃಹ ಇಲಾಖೆ ಅನುಮತಿ ಕೊಟ್ಟಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಜಾಮೀನು ರದ್ದಾಗಲಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ.

ಗೃಹ ಇಲಾಖೆಯು ಈ ಕಡತವನ್ನು ಅನುಮತಿಸಿದ್ದು, ಬೆಂಗಳೂರು ಪೊಲೀಸರು ಇಷ್ಟರಲ್ಲೇ ಸುಪ್ರೀಂ ಕೋರ್ಟ್‌ನ ಮೊರೆ ಹೋಗಲಿದ್ದಾರೆ ಎಂದು ಹೇಳಲಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಪರಿಶೀಲನೆ ಮಾಡಿ ರದ್ದು ಮಾಡಿದರೆ. ದರ್ಶನ್‌ ಮತ್ತೆ ಜೈಲು ಸೇರಬೇಕಾಗುವ ಸಾಧ್ಯತೆ ಇದೆ. ದರ್ಶನ್‌ ಆಪರೇಷನ್‌ ಕಾರಣ ನೀಡಿ ಮಧ್ಯಂತರ ಜಾಮೀನು ನೀಡಲಾಗಿತ್ತು. ಅದಾದ ಮೇಲೆ ಅವರಿಗೆ ಇದೀಗ ಪೂರ್ಣ ಪ್ರಮಾಣದ ಜಾಮೀನು ಮಂಜೂರಾಗಿದೆ. ಪೂರ್ಣ ಪ್ರಮಾಣದ ಜಾಮೀನು ಮಂಜೂರಾಗುವ ಮುನ್ನವೇ ಸುಪ್ರೀಂಕೋರ್ಟ್‌ ಮೊರೆ ಹೋಗುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಅದು ಆಗಿರಲಿಲ್ಲ. ಎಫ್‌ಎಸ್‌ಎಲ್‌ ವರದಿಗಾಗಿ ಕಾಯಲಾಗಿತ್ತು. ಈಗ ಆ ಎಲ್ಲಾ ಪ್ರಕ್ರಿಯೆಗಳು ಸಹ ಮುಗಿದಿವೆ ಎನ್ನಲಾಗಿದ್ದು, ಸುಪ್ರೀಂ ಕೋರ್ಟ್‌ ಮೊರೆ ಹೋಗುವುದಕ್ಕೆ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಮುಂದಿನ ವಾರದಲ್ಲಿ ಸುಪ್ರೀಂ ಕೋರ್ಟ್‌ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+