Renukaswamy Murder Case: ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದಿಡ್ತಾ FSL ವರದಿ.?-ಅದರಲ್ಲೇನಿದೆ.?-ಮಾಹಿತಿ
ಬೆಂಗಳೂರು, ಜುಲೈ, 07: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ & ಪಟಾಲಂ ಗ್ಯಾಂಗ್ ಈಗಾಗಲೇ ಜೈಲು ಸೇರಿದೆ. ಇನ್ನೂ ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮಹತ್ವದ ಸಾಕ್ಷ್ಯಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈ ನಡುವೆಯೇ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಸೇರಿ 10 ಜನರ ಬೆರಳಚ್ಚು ಹೋಲಿಕೆ ಆಗಿದೆ ಎನ್ನುವ ಮಾಹಿತಿ ಎಫ್‌ಎಸ್‌ಎಲ್ ವರದಿಯಾಗಿದೆ ಬಯಲಾಗಿದೆ ಎನ್ನುವ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಎಫ್‌ಎಸ್‌ಎಲ್ ಪರೀಕ್ಷೆಯಲ್ಲಿ ನಟ ದರ್ಶನ್ ಸೇರಿ ಇತರೆ 10 ಆರೋಪಿಗಳ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ ಎಂದು ವರದಿ ಆಗಿದೆ ಎಂದು ತಿಳಿದುಬಂದಿದೆ. ಪಟ್ಟಣಗೆರೆ ಶೆಡ್, ಶವ ಎಸೆದ ಜಾಗ, ಶವ ಸಾಗಿಸಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್ ಕೊಠಡಿಯಲ್ಲಿ ಸಿಕ್ಕ ಬೆರಳಚ್ಚಿಗೂ ಆರೋಪಿಗಳ ಬೆರಳಚ್ಚು ಒಂದೇ ಆಗಿದೆ ಎನ್ನುವ ಮಾಹಿತಿ ವರದಿಯಲ್ಲಿ ಬಯಲಾಗಿದೆ ಎಂದು ತಿಳಿದುಬಂದಿದೆ.
ಕೊಲೆಯಾದ ರೇಣುಕಾಸ್ವಾಮಿ ದೇಹ, ಬಟ್ಟೆ ಮೇಲೂ ಬೆರಳಚ್ಚು ಸಂಗ್ರಹಿಸಿದ್ದ ಎಫ್‌ಎಸ್ ಎಲ್ ಇದೀಗ ವರದಿ ನೀಡಿದ್ದು, ರೇಣುಕಾಸ್ವಾಮಿ ಬಟ್ಟೆ ಹಾಗೂ ದೇಹದ ಮೇಲೆ ಆರೋಪಿಗಳ ಫಿಂಗರ್ ಪ್ರಿಂಟ್ ಹೋಲಿಕೆ ಕಂಡುಬಂದಿದೆ ಎನ್ನುವ ಸ್ಫೋಟಕ ವಿಚಾರ ಬಯಲಾಗಿದೆ ಎಂದು ತಿಳಿದುಬಂದಿದೆ.
ಸುಷ್ಮಾ ವೀರ್ ಹೇಳಿದ್ದೇನು?: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾದಾಗಿನಿಂದ, ದರ್ಶನ್ ಪರ-ವಿರೋಧ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಆಗುತ್ತಿವೆ. ಹಾಗೆಯೇ ಸುಷ್ಮಾ ವೀರ್ ಜೈನ್ ದರ್ಶನ್ ಅಂಧಾಭಿಮಾನಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
2024ನೇ ಸಾಲಿನ ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲಲು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಕಾರಣ, ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ಗೆ ಅವರನ್ನು ಕರೆಸಿದ್ದಕ್ಕೇ ತಂಡ ಸೋಲನುಭವಿಸಿತು ಎಂದು ಗಜಪಡೆ ಹೆಸರಿನ ಟ್ವಿಟರ್ ಖಾತೆಯಿಂದ ಕೀಳು ಮಟ್ಟದ ಪೋಸ್ಟ್‌ವೊಂದನ್ನು ಮಾಡಿದ್ದರು. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ, ದರ್ಶನ್ ಅಭಿಮಾನಿಗಳ ಬಗ್ಗೆ ವ್ಯಾಪಕ ಟೀಕೆಗಲು ಸಹ ಕೇಳಿಬಂದಿದ್ದು, ಆಗ ಕೆಲವರು ಸ್ವತಃ ನಟ ದರ್ಶನ್ ವಿರುದ್ಧವೇ ಧ್ವನಿ ಎತ್ತಿ, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಬಾರದೇ ಎಂದು ಹೇಳಿದ್ದರು.
ಸುಷ್ಮಾ ವೀರ್ ಮಾತನಾಡಿದ್ದು, ಕಾನೂನು ಮೂಲಕ ಕ್ರಮ ಕೈಗೊಂಡಿದ್ದರೆ, ಎಲ್ಲರಿಗೂ ಇದೊಂದು ನಿದರ್ಶನ ಆಗುತ್ತಿತ್ತು. ಕೊಲೆ ಮಾಡುವ ಹಂತಕ್ಕೆ ಇಳಿಯಬಾರದಿತ್ತು ಎಂದು ನಟ ದರ್ಶನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
"ನಟ ದರ್ಶನ್ ಅವರ ಕೆಲವು ಹುಡುಗರು ಆರ್‌ಸಿಬಿ ಸೋಲನ್ನು ಇಟ್ಟುಕೊಂಡು ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು ಸರೀನಾ? ಅವರು ಕೂಡ ಹೆಣ್ಣಲ್ಲವಾ? ಬೇರೆ ಹೆಣ್ಣುಮಕ್ಕಳು ಹೆಣ್ಮಕ್ಕಳಲ್ಲ, ನಿಮಗೆ ಇಷ್ಟ ಆದವರಷ್ಟೇ ಹೆಣ್ಣುಮಕ್ಕಳಾ? ದರ್ಶನ್ ಬಗ್ಗೆ ಪ್ರೀತಿ ಕಡಿಮೆಯಾಗಿಲ್ಲ, ಆದರೆ ನಿಮ್ಮ ಬಗ್ಗೆ ಕಾಳಜಿ ಕಡಿಮೆಯಾಗುತ್ತಿದೆ. ನಿಮ್ಮನ್ನು ನೀವೆ ಹಾಳು ಮಾಡಿಕೊಳ್ಳುತ್ತಿದ್ದೀರ. ಇನ್ನೂ ಇನ್ನಾದರೂ ಸುಧಾರಿಸಿಕೊಂಡರೆ ಒಳ್ಳೆಯದು. ಅದು ನಿಮ್ಮ ಕೈಯಲ್ಲಿದೆ", ಎಂದು ಬುದ್ಧಿವಾದ ಹೇಳಿದ್ಧಾರೆ.
ಇನ್ನು "ಅಶ್ವಿನಿ ಪುನೀತ್ ರಾಜ್‌ಕುಮಾರ್ ಆವತ್ತು ಅದೇ ವಿಚಾರವನ್ನು ಬೇರೆ ಹಂತಕ್ಕೆ ತೆಗೆದುಕೊಂಡು ಹೋಗಬಹುದಾಗಿತ್ತು. ಆದರೆ, ಅವರು ಹಾಗೆ ಮಾಡಲಿಲ್ಲ," ಎಂದರು. "ನಟ ದರ್ಶನ್ ಕೂಡ ಇನ್ನೊಬ್ಬರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡೊದಾದ್ರೆ, ನೀವು ನನ್ನ ಅಭಿಮಾನಿಗಳೇ ಅಲ್ಲ," ಎಂದು ಹೇಳಿ ಬುದ್ಧಿವಾದ ಹೇಳಬೇಕಿತ್ತು ಎಂದರು.
ಮತ್ತೊಂದೆಡೆ "ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ರೇಣುಕಾಸ್ವಾಮಿಯದ್ದು ತಪ್ಪು. ಹಾಗಂತ ಕೊಲೆ ಮಾಡುವ ಹಂತಕ್ಕೆ ಇಳಿದಿರುವುದು ಸರಿಯಲ್ಲ. ಅದರಲ್ಲೂ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿರುವುದು ದೊಡ್ಡ ತಪ್ಪು. ಕೊಲೆ ಮಾಡುವ ಹಂತಕ್ಕೆ ಇಳಿಯದೇ, ಕಾನೂನು ಮೂಲಕವೇ ಈ ಸಮಸ್ಯೆಯನ್ನು ಬಗೆಹರಿಸಬಹುದಿತ್ತು," ಎಂದರು.












Click it and Unblock the Notifications