ರೇಣುಕಾಸ್ವಾಮಿ ಕೊಲೆ ಕೇಸ್‌: ಪವಿತ್ರಾ ಗೌಡ ಜೈಲುಪಾಲು.. ದರ್ಶನ್‌ಗೆ ಮತ್ತೆ ಪೊಲೀಸ್ ಕಸ್ಟಡಿ

ಬೆಂಗಳೂರು, ಜೂನ್‌ 20: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ-೧ ಆರೋಪಿ ಪವಿತ್ರಾ ಗೌಡ ಹಾಗೂ ನಟ ದರ್ಶನ್‌ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ವಾದ-ಪ್ರತಿವಾದ ಆಲಿಸಿದ ಕೋರ್ಟ್ ನಟ ದರ್ಶನ್‌ ಹಾಗೂ ಕೆಲವು ಆರೋಪಿಗಳನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಎ-೧ ಆರೋಪಿ ಪವಿತ್ರಾ ಗೌಡ ಹಾಗೂ ಕೆಲವು ಆರೋಪಿಗಳು ಜೈಲುಪಾಲಾಗಿದ್ದಾರೆ. ಕೋರ್ಟ್ ಆದೇಶದ ಮೇರೆಗೆ ಪ್ರರಕಣದ ವಿಚಾರಣೆ ಸಲುವಾಗಿ ಆರೋಪಿಗಳನ್ನು ಪೊಲೀಸರು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ಕ್ಕೆ ಕರೆದೊಯಲು ಸಜ್ಜಾಗಿದ್ದಾರೆ.

Renukaswamy murder case Sandalwood Actor Darshan May Again Go To Police Custody

ಪ್ರಕರಣದ ಹಿನ್ನೆಲೆ ಏನು..?

ಚಿತ್ರದುರ್ಗದ ಎಂಬಾತನ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸಿನಿಮಾವೊಂದರ ಚಿತ್ರೀಕರಣಕ್ಕೆ ತೆರಳಿದ್ದ ದರ್ಶನ್ ಅವರು ಮೈಸೂರಿನಲ್ಲಿ ಕಳೆದ ಮಂಗಳವಾರ ಬೆಳಗ್ಗೆ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದರು. ನಂತರ ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡರನ್ನು ಬಂಧಿಸಿದರು. ಮೊದಲು ಐದಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಒಬ್ಬೊಬ್ಬರಂತೆ ಬರೋಬ್ಬರಿ ಹತ್ತೊಂಬತ್ತು ಆರೋಪಿಗಳನ್ನು ಬಂಧಿಸಲಾಗಿತ್ತು.

ಚಿತ್ರದುರ್ಗದ ಫಾರ್ಮಸಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿ ನಿಂದನೆ ಮಾಡಿದ್ದನು ಎನ್ನಲಾಗಿದೆ. ಈ ವಿಚಾರವನ್ನು ಪವಿತ್ರಾ ಹಾಗೂ ಆಪ್ತರು ನಟ ದರ್ಶನ್‌ಗೆ ತಿಳಿಸಿದ್ದು, ಇದರಿಂದ ಸಿಟ್ಟಿಗೆದ್ದ ದರ್ಶನ್‌ ಹಾಗೂ ತಂಡವು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಬಂಧಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+