ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಲ್ ಬಾಗ್‌ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

|
Google Oneindia Kannada News

ಬೆಂಗಳೂರು, ನವೆಂಬರ್ 03 : ಕೋವಿಡ್ ಕಾರಣದಿಂದಾಗಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ನಡೆಸುತ್ತಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ಇದೇ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಮತ್ತು ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿದ್ದ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ ಇಲಾಖೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಬೆಂಗಳೂರು; ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ ಭಾರಿ ಇಳಿಕೆ ಬೆಂಗಳೂರು; ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ ಭಾರಿ ಇಳಿಕೆ

ಬೆಂಗಳೂರು ನಗರದಲ್ಲಿ ನಡೆಯುವ ಪ್ರಮುಖ ಕಾರ್ಯಕ್ರಮಗಳಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವೂ ಒಂದಾಗಿದೆ. ಲಕ್ಷಾಂತರ ಜನರು ಪ್ರದರ್ಶನ ವೀಕ್ಷಣೆಗಾಗಿ ಆಗಮಿಸುತ್ತಿದ್ದರು.

ಸ್ವಾತಂತ್ರೋತ್ಸವ; ಲಾಲ್ ಬಾಗ್ ಫ್ಲವರ್ ಶೋ ರದ್ದು ಸ್ವಾತಂತ್ರೋತ್ಸವ; ಲಾಲ್ ಬಾಗ್ ಫ್ಲವರ್ ಶೋ ರದ್ದು

Republic Day Flower Show 2021 Cancelled

ಈ ಬಾರಿ ಕೋವಿಡ್ ಸೋಂಕಿನ ಹಿನ್ನಲೆಯಲ್ಲಿ ಹೆಚ್ಚು ಜನರು ಸೇರಿದರೆ ಕೋವಿಡ್ ಮಾರ್ಗಸೂಚಿಗಳ ಪಾಲನೆ ಕಷ್ಟವಾಗಲಿದೆ. ಆದ್ದರಿಂದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ಕೋವಿಡ್ ಸೋಂಕಿತರ ಸಂಖ್ಯೆ; ಕರ್ನಾಟಕಕ್ಕೆ 2ನೇ ಸ್ಥಾನ ಕೋವಿಡ್ ಸೋಂಕಿತರ ಸಂಖ್ಯೆ; ಕರ್ನಾಟಕಕ್ಕೆ 2ನೇ ಸ್ಥಾನ

ಮೈಸೂರು ತೋಟಗಾರಿಕಾ ಸಂಘದ ಖಜಾಂಚಿ ಎಂ. ಕುಪ್ಪುಸ್ವಾಮಿ ಈ ಕುರಿತು ಮಾತನಾಡಿದ್ದಾರೆ. "ತೋಟಗಾರಿಕಾ ಇಲಾಖೆ ಜೊತೆ ಸೇರಿ ಇನ್ನೊಮ್ಮೆ ಸರ್ಕಾರಕ್ಕೆ ಪ್ರದರ್ಶನವನ್ನು ಆಯೋಜನೆ ಮಾಡಲು ಅನುಮತಿ ನೀಡುವಂತೆ ಮನವಿ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.

ತೋಟಗಾರಿಕಾ ಇಲಾಖೆ ಹೆಚ್ಚುವರಿ ನಿರ್ದೇಶಕ ಎಂ. ಜಗದೀಶ್ ಈ ಕುರಿತು ಮಾತನಾಡಿದ್ದು, "ಫಲಪುಷ್ಪ ಪ್ರದರ್ಶನ ಮುಂದಿನ ವರ್ಷದ ಜನವರಿಯಲ್ಲಿ ನಡೆಯಲಿದೆ. ಆದರೆ ಈಗಿನಿಂದಲೇ ತಯಾರಿ ಆರಂಭಿಸಬೇಕು. ಪ್ರದರ್ಶನ ನಡೆಸುವ ಕುರಿತು ಇನ್ನೂ ಖಚಿತವಾದ ಮಾಹಿತಿ ಸಿಕ್ಕಿಲ್ಲ" ಎಂದರು.

ಬೆಂಗಳೂರು ನಗರದಲ್ಲಿ ನವೆಂಬರ್ 1ರಂದು 1439 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 3,40,075.

English summary
Bengaluru Lalbagh Republic day flower show 2021 cancelled due to COVID 19 pandemic. Independence flower shows also cancelled in the year 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X