ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ; ಭದ್ರತೆ ಹೇಗಿರಲಿದೆ?

|
Google Oneindia Kannada News

ಬೆಂಗಳೂರು, ಜನವರಿ 24: ಜನವರಿ 26ರ ಗಣರಾಜ್ಯೋತ್ಸವಕ್ಕೆ ಬೆಂಗಳೂರು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಎಲ್ಲ ಸಿದ್ಧತೆಗಳು ನಡೆಯುತ್ತಿವೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಸಿದ್ಧತೆಯನ್ನು ಪರಿಶೀಲನೆ ಮಾಡಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧಿಕಾರಿಗಳು, ಜ.26ರಂದು ಬೆಳಗ್ಗೆ 8.58ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆಗಮಿಸುತ್ತಾರೆ. ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರಿಂದ ರಾಷ್ಟ್ರ ಧ್ವಜಾರೋಹಣ ನೆರವೇರುತ್ತದೆ ಎಂದು ತಿಳಿಸಿದರು.

ಧ್ವಜಾರೋಹಣ ಬಳಿಕ ರಾಜ್ಯಪಾಲರು ಗೌರವ ವಂದನೆ ಸ್ವೀಕರಿಸುತ್ತಾರೆ. ನಾಡಿನ ಜನತೆಯನ್ನು ಉದ್ದೇಶಿಸಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಬಳಿಕ ನಾಡಗೀತೆ, ರೈತ ಗೀತೆಯನ್ನು ಹಾಡಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದರು.

Bengaluru: Republic Day Parade: Preparations In Full Swing At Manekshaw Parade Ground

ಪೊಲೀಸ್ ಬಿಗಿ ಬಂದೋಬಸ್ತ್
ಜ.26ರ ಗಣರಾಜ್ಯೋತ್ಸವ ದಿನದಂದು ಈ ಹಿಂದೆ ದೇಶದಲ್ಲಿ ಕೆಲ ಕಹಿ ಘಟನೆಗಳು ನಡೆದಿದ್ದು, ಅದರ ಆಧಾರದ ಮೇಲೆ ಈ ಬಾರಿ ಪೊಲೀಸ್ ಭದ್ರತೆ ನೀಡಲಾಗುತ್ತದೆ.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಒಟ್ಟು 16 ಪೊಲೀಸ್ ತುಕಡಿಗಳು, 5 ವಾದ್ಯ ವೃಂದ, 2 ಡಾಗ್ ಸ್ಕ್ವಾಡ್, 4 ಕ್ಯೂ ಆರ್​ಡಿ, 2 ಆರ್​ಐವಿ, 6 ಅಶ್ವ ತಂಡಗಳು ಪರೇಡ್​ನಲ್ಲಿ ಭಾಗಿಯಾಗಲಿವೆ ಅಂತ ಕಮಲ್ ಪಂತ್ ತಿಳಿಸಿದರು.

ಒಟ್ಟು 29 ಅಧಿಕಾರಿಗಳು, 464 ಸಿಬ್ಬಂದಿ ಕವಾಯಿತಿನಲ್ಲಿ ಭಾಗಿಯಾಗುತ್ತಾರೆ. ಪರೇಡ್ ಸುತ್ತಲೂ ಭದ್ರತೆಗೆ 11 ಡಿಸಿಪಿ, 20 ಎಸಿಪಿ, 60 ಪೊಲೀಸ್ ಇನ್ಸ್​ಪೆಕ್ಟರ್, 125 ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ಸೇರಿದಂತೆ ಒಟ್ಟು 1,400 ಜನ ಪೊಲೀಸರನ್ನು ಭದ್ರತೆ ನಿಯೋಜನೆ ಮಾಡಲಾಗಿದೆ ಎಂದರು.

ಇನ್ನು ಮೈದಾನದ ಸುತ್ತಲೂ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗುವುದು. ಪಾಸ್ ಇಲ್ಲದವರಿಗೆ ಪ್ರವೇಶ ಇರುವುದಿಲ್ಲ. ಈ ಬಾರಿ ಆಂಧ್ರಪ್ರದೇಶದ ಪೊಲೀಸರು ಕವಾಯತಿನಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಜನವರಿ 26ರಂದು ಮಾಣಿಕ್ ಷಾ ಪರೇಡ್ ಮೈದಾನದ ಸುತ್ತಲಿರುವ ಮಾರ್ಗಗಳನ್ನು ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಿದರು.

Recommended Video

Chahar got Emotional: ಭಾರತಕ್ಕೆ ಗೆಲುವಿನ ಅಂಚಿಗೆ ಕರ್ಕೊಂಡು ಹೋಗಿದ್ದು Deepak Chahar ! | Oneindia Kannada

English summary
Republic Day Parade 2022: Preparations in full swing at Manekshaw Parade Ground in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X