Government Employee: ಸರ್ಕಾರಿ ನೌಕರರ ಈ ಸೌಲಭ್ಯ ಸಕಾಲ ವ್ಯಾಪ್ತಿಗೆ ತರಲು ಮನವಿ: ಸರ್ಕಾರಕ್ಕೆ ಪತ್ರ
ಸರ್ಕಾರಿ ನೌಕರರು ಸರ್ಕಾರದ ಸೇವೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಅದೇ ರೀತಿ ಸರ್ಕಾರವೂ ಸಹ ಸರ್ಕಾರಿ ನೌಕರರಿಗೆ ಇರುವ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಸರ್ಕಾರದ ನೌಕರರು ಹಾಗೂ ಸಿಬ್ಬಂದಿಗೂ ಸಕಾಲದಲ್ಲಿ ನೀಡಬೇಕು ಎಂದು ಸರ್ಕಾರಿ ನೌಕರರು ಮನವಿ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ವಿಸ್ತೃತ ಹಾಗೂ ಸುದೀರ್ಘ ಪತ್ರವನ್ನು ಬರೆಯಲಾಗಿದೆ. ಈ ಸಂಬಂಧ ರಾಜ್ಯದ ವಿವಿಧ ಮಹಾನಗರ ಪಾಲಿಕೆ ಹಾಗೂ ಪಾಲಿಕೆಗಳಿಂದ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ನೌಕರರ ಆಡಳಿತ ಸೌಲಭ್ಯವನ್ನು ಸಹ ಸಕಾಲ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರಿ ನೌಕರರು ವಿವಿಧ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸುತ್ತಿದ್ದಾರೆ. ಅದರಲ್ಲಿ ಪ್ರಮುಖವಾಗಿ 7ನೇ ವೇತನ ಆಯೋಗ ಸೇರಿದಂತೆ ಹಲವು ಬೇಡಿಕೆಗಳು ಇವೆ. ಕೆಲವು ಬೇಡಿಕೆಗಳು ಈಡೇರಿದರೆ ಇನ್ನೂ ಹಲವು ಬೇಡಿಕೆಗಳು ಕನಸಾಗೇ ಉಳಿದಿದೆ.
ರಾಜ್ಯದಲ್ಲಿ ಸರ್ಕಾರಿ ನೌಕರರು ಸರ್ಕಾರಕ್ಕೆ ಕಾಲಕಾಲಕ್ಕೆ ವಿವಿಧ ಬೇಡಿಕೆಗಳನ್ನು ಸಲ್ಲಿಸುವುದು ಇದೆ. ಆದರೆ ಸರ್ಕಾರಿ ನೌಕರರ ಹಲವು ಬೇಡಿಕೆಗಳು ಆರ್ಥಿಕ ದೃಷ್ಟಿಯಿಂದ ಮುಂದೂಡಿರುವುದು ಇದೆ. ಸರ್ಕಾರಿ ನೌಕರರ ವೇತನ ಹೆಚ್ಚಳ ವಿಷಯದಲ್ಲಿ ಸರ್ಕಾರ ಹಾಗೂ ಸರ್ಕಾರಿ ನೌಕರರ ನಡುವೆ ಮುಸುಕಿನ ಗುದ್ದಾಟ ಮುಂದುವರಿಯುತ್ತಲ್ಲೇ ಇದೆ. ಇದೀಗ ವಿವಿಧ ಸರ್ಕಾರಿ ನೌಕರರು ಸರ್ಕಾರಕ್ಕೆ ಪತ್ರ ಬರೆದು ತಮ್ಮ ಬೇಡಿಕೆಯನ್ನು ಇರಿಸಿದ್ದಾರೆ. ರಾಜ್ಯ ಸರ್ಕಾರವು ಪರಿಚಯಿಸುವ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಸರ್ಕಾರಿ ನೌಕರರು ರಾಜ್ಯದ ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಸರ್ಕಾರದ ಸೌಲಭ್ಯವನ್ನು ಸಾರ್ವಜನಿಕರಿಗೆ ಸಕಾಲ ವ್ಯಾಪ್ತಿಯಲ್ಲಿ ತಂದು ಯಶಸ್ವಿಯಾಗಲು ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಸರ್ಕಾರದ ಅಧಿಕಾರಿ ನೌಕರರು ಕಾರಣರಾಗಿದ್ದೇವೆ ಎಂದು ಈಗ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮುಂದುವರಿದು ಈ ರೀತಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ಮುಂಬಡ್ತಿ, ವರ್ಗಾವಣೆ, ವಾರ್ಷಿಕ ವೇತನ ಬಡ್ತಿ, ಅನುಕಂಪದ ಆಧಾರದ ಮೇಲೆ ನೌಕರಿ, ನಿವೃತ್ತಿ ವೇತನ ಉಪದಾನ, ಗಳಿಕೆ ರಜೆ, ವೃಂದ ಮತ್ತು ನೇಮಕಾತಿ ನಿಯಮಾವಳಿ (ತಿದ್ದುಪಡಿ) ಮತ್ತು ವೈದ್ಯಕೀಯ ವೆಚ್ಚ ಮರುಪಾವತಿ ತೊಂದರೆ ಆಗುತ್ತಿದೆ. ಮುಂದುವರಿದು ಕರ್ತವ್ಯ ಲೋಪದ ಮೇಲೆ ಅಮಾನತು ತೆರವುಗೊಳಿಸುವುದು ಸೇರಿದಂತೆ ಇನ್ನಿತರೆ ಆಡಳಿತ ಸೌಲಭ್ಯವನ್ನು ಪಡೆಯಲು, ಸರ್ಕಾರಿ ನೌಕರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವು ತಿಂಗಳಾದರೂ, ಇಲ್ಲ ವರ್ಷಗಳಾದರು ಆಡಳಿತ ಸೌಲಭ್ಯ ಪಡೆಯಲು ವಿಳಂಬವಾಗುತ್ತಿದೆ. ಇಲ್ಲವೇ ಈ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ.

ಹೀಗಾಗಿ, ಈ ಸಮಸ್ಯೆಗಳನ್ನು ಸರ್ಕಾರ ತಪ್ಪಿಸಬೇಕು ಎಂದು ಮನವಿ ಮಾಡಲಾಗಿದೆ. ಮುಂದುವರಿದು ಸರ್ಕಾರವು ಸಾರ್ವಜನಿಕರಿಗೆ ಮೂಲಭೂತ ಸೇವೆಯನ್ನು ಸಕಾಲ ವ್ಯಾಪ್ತಿಯಲ್ಲಿ ನೀಡುತ್ತಿರುವಂತೆ ಸರ್ಕಾರಿ ನೌಕರರಿಗೆ ಸಹ ಆಡಳಿತ ಸೌಲಭ್ಯವನ್ನು ಪಡೆಯಲು ಸಕಾಲ ವ್ಯಾಪ್ತಿಗೆ ತರಬೇಕು ಎಂದು ಮನವಿ ಮಾಡಲಾಗಿದೆ. ಈ ಸಂಬಂಧ ರಾಜ್ಯದ ವಿವಿಧ ಮಹಾನಗರ ಹಾಗೂ ಪಾಲಿಕೆಯ ಸರ್ಕಾರಿ ನೌಕರರ ಸಂಘ ಸಹಮತ ಸೂಚಿಸಿದೆ. ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎ. ಅಮೃತ್ ರಾಜ್ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
-
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ












Click it and Unblock the Notifications