ಎಚ್‌ಡಿಕೆ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಶಾಸಕರ ಖರೀದಿ ಪ್ರಕರಣ ತನಿಖೆಗೆ: ರಾಮಲಿಂಗಾ ರೆಡ್ಡಿ

Recommended Video

      ಎಚ್‌ಡಿಕೆ ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಈ ಕೆಲಸ ಮಾಡಬೇಕು ಅಂದ್ರು ರಾಮಲಿಂಗಾ ರೆಡ್ಡಿ

      ಬೆಂಗಳೂರು, ಮೇ 21: ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಬಿಜೆಪಿಯವರು ಮಾಡಿದ್ದಾರೆ ಎನ್ನಲಾಗುತ್ತಿರುವ ಶಾಸಕರ ಖರೀದಿ ಯತ್ನ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಮನವಿ ಮಾಡುತ್ತೇವೆ ಎಂದು ಶಾಸಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

      ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಣದ ಆಮೀಷ ಒಡ್ಡಿ ಆಮಪರೇಷನ್ ಕಮಲಕ್ಕೆ ಮುಂದಾಗಿರುವುದು ಆಡಿಯೋ ಕ್ಲಿಪ್‌ಗಳಿಂದ ಗೊತ್ತಾಗಿದೆ, ಆದರೆ ನಕಲಿ ಎಂದು ಅವರು ಹೇಳುತ್ತಿದ್ದಾರೆ ಸತ್ಯಾ ಸತ್ಯತೆ ತನಿಖೆಯಿಂದ ಹೊರ ಬರಲಿ ಎಂದು ಅವರು ಹೇಳಿದರು.

      '2008 ರಿಂದ 2013 ರವರೆಗೆ ಅವರು ಏನು ಮಾಡಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆಗ ಕೊಳ್ಳೆ ಹೊಡೆದ ದುಡ್ಡಲ್ಲಿ ಈಗ ಶಾಸಕರ ಖರೀದಿ ಮಾಡಲು ಮುಂದಾಗಿದ್ದಾರಾ?, ಅಥವಾ ದೆಹಲಿಯಿಂದ ಹಣ ಬರ್ತಾ ಇದೆಯಾ?' ಎಂದು‌ ಅವರು ಪ್ರಶ್ನಿಸಿದರು.

      Request to investigate MLA purchase issue: Ramalinga Reddy

      ಕಾಂಗ್ರೆಸ್ ಜೆಡಿಎಸ್ ನಾಯಕರನ್ನು ನಿದ್ದೆ ಮಾಡಲು ಬಿಡುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ, ಭ್ರಷ್ಟಾಚಾರ ಆರೋಪದಲ್ಲಿ ಸಿಲುಕಿರುವ ಯಡಿಯೂರಪ್ಪ ಹಾಗೂ ರೆಡ್ಡಿ ಸಹೋದರರು ಮತ್ತೆ ಅಧಿಕಾರ ಸಿಕ್ಕು ಕೊಳ್ಳೆಹೊಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಆ ಅವಕಾಶ ತಪ್ಪಿದೆ ಹಾಗಾಗಿ ಅವರಿಗೆ ನಿದ್ದೆ ಬರುತ್ತಿಲ್ಲ" ಎಂದು ಬಿಜೆಪಿ ನಾಯಕರನ್ನು ಟೀಕಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+