ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಕೊಡದಂತೆ ಕೇಂದ್ರಕ್ಕೆ ಮನವಿ: ಚಿಮೂ

ಬೆಂಗಳೂರು, ಮಾರ್ಚ್ 19: "ಮುಂದಿನ ವಾರ ಪತ್ರಿಕಾಗೋಷ್ಠಿಯೊಂದನ್ನು ಮಾಡಿ, ಮನವಿ ಪತ್ರವೊಂದನ್ನು ಸಿದ್ಧಪಡಿಸುತ್ತೇನೆ. ಲಿಂಗಾಯತ ಪ್ರತ್ಯೇಕ ಧರ್ಮ ಎಂಬುದಕ್ಕೆ ಮಾನ್ಯತೆ ನೀಡಬಾರದು ಎಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಳ್ಳುತ್ತೇನೆ" ಎಂದು ಹಿರಿಯ ಸಂಶೋಧಕರಾದ ಚಿದಾನಂದ ಮೂರ್ತಿಯವರು ಒನ್ಇಂಡಿಯಾ ಕನ್ನಡಕ್ಕೆ ಪ್ರತಿಕ್ರಿಯಿಸಿದರು.

ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವಂತೆ ಶಿಫಾರಸು ಮಾಡಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನಿಂದ ಕೇಂದ್ರಕ್ಕೆ ಶಿಫಾರಸು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದರು. ಲಿಂಗಾಯತ ಹಾಗೂ ವೀರಶೈವ ಒಂದೇ. ಇದರಲ್ಲಿ ಯಾವ ಅನುಮಾನವೂ ಬೇಡ. ಶಿವಕುಮಾರ ಸ್ವಾಮೀಜಿಯಂಥ ಹಿರಿಯರೇ ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

Researcher Chidananda Murthy decides to write a letter to centre

ಹುಟ್ಟಿನಿಂದ ಶೈವ ಬ್ರಾಹ್ಮಣನಾಗಿದ್ದ ಬಸವಣ್ಣನೇ ಹೇಳಿದ್ದಾರೆ: ಚೆನ್ನಬಸವಣ್ಣನಿಂದ ಪ್ರೇರಿತನಾಗಿ, ಶೈವ ಬ್ರಾಹ್ಮಣನಾದ ನಾನು ವೀರಶೈವನಾದೆ ಎಂದು ಹೇಳಿಕೊಂಡಿದ್ದಾನೆ. ಅದೇ ರೀತಿ ಲಿಂಗಧಾರಣೆಯಿಂದ ಲಿಂಗಾಯತನಾಗಿದ್ದೇನೆ ಎಂದಿದ್ದಾನೆ. ಆದ್ದರಿಂದ ವೀರಶೈವ ಹಾಗೂ ಲಿಂಗಾಯತ ಎರಡೂ ಬೇರೆಬೇರೆಯಲ್ಲ ಎಂದು ತಮ್ಮ ನಿಲವನ್ನು ಚಿದಾನಂದ ಮೂರ್ತಿ ಮತ್ತೊಮ್ಮೆ ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+