• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಾಯುಕ್ತ ಮರುಸ್ಥಾಪನೆ: ಕೆಲಸವೂ ಇಲ್ಲ ವರ್ಗಾವಣೆಯೂ ಇಲ್ಲದೇ ಎಸಿಬಿ ಅಧಿಕಾರಿಗಳು ಕಂಗಾಲು!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 03: ಹೈಕೋರ್ಟ್‌ ಆದೇಶದ ಬಳಿಕ ಲೋಕಾಯುಕ್ತ ಸಂಸ್ಥೆಗೆ ಪವರ್ ಬಂತು. ಆದರೆ ಲೋಕಾಯುಕ್ತ ಸಂಸ್ಥೆಯ ಕಾರ್ಯವನ್ನೇ ಪಡೆದು ರಚನೆಯಾಗಿದ್ದ ಎಸಿಬಿ ರದ್ದಾಗಿಹೋಯ್ತು. ಇದೀಗ ಎಸಿಬಿಯಲ್ಲಿದ್ದ ಅಧಿಕಾರಿಗಳು ವರ್ಗಾವಣೆಯೂ ಆಗದೆ ಕೆಲಸವೂ ಇಲ್ಲದೆ ಕಾಲಹರಣ ಮಾಡಬೇಕಾದ ದುಸ್ಥಿತಿ ಎದುರಾಗಿದೆ.

ಅಂದಹಾಗೆ ಲೋಕಾಯುಕ್ತ ಮರುಸ್ಥಾಪನೆಯಾಗಿ ಈಗಾಗಲೇ ರದ್ದುಗೊಂಡಿರುವ ಎಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಅತಂತ್ರ ಸ್ಥಿತಿಯಲ್ಲಿದ್ದಾರೆ. ಸದಾ ತನಿಖೆ -ವಿಚಾರಣೆ ಎಂದು ಕರ್ತವ್ಯದಲ್ಲಿ ತಲ್ಲೀನರಾಗಿದ್ದ ಅಧಿಕಾರಿಗಳಿಗೆ ಕೆಲಸವೇ ಇಲ್ಲದಂತಾಗಿದೆ. ಸಿಬ್ಬಂದಿ ಕೊರತೆ ಎದುರಿಸುತ್ತಿರುವ ಲೋಕಾಯುಕ್ತಕ್ಕೂ ವರ್ಗಾಯಿಸದೆ ಬೇರೆ ಕಡೆಗೂ ನಿಯೋಜಿಸದೆ ರಾಜ್ಯ ಸರ್ಕಾರದ ವಿಳಂಬ ಧೋರಣೆ ಅನುಸರಿಸುತ್ತಿದೆ.

ಎಸಿಬಿಯಲ್ಲಿ ದಲಾಯತ್, ಲಿಪಿಕ ಸಿಬ್ಬಂದಿ‌ ಹುದ್ದೆಗಳು ಹೊರತುಪಡಿಸಿದರೆ ಒಟ್ಟು ಎಸಿಬಿಯಲ್ಲಿ 452 ಕಾರ್ಯಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳಿದ್ದಾರೆ. ಕಳೆದ ಆಗಸ್ಟ್ 26 ರಂದು ಎಲ್ಲಾ‌ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಹಸ್ತಾಂತರಿಸುವಂತೆ‌ ಎಸಿಬಿಗೆ ಸರ್ಕಾರ ಆದೇಶಿಸಿತ್ತು. ಇದರಂತೆ ರಾಜ್ಯದ ಎಲ್ಲಾ ಎಸಿಬಿ ಜಿಲ್ಲಾ ವಿಭಾಗಗಳಲ್ಲಿ ದಾಖಲಾಗಿದ್ದ ಪ್ರಕರಣಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿವೆ.

 ಎಸಿಬಿ ತನಿಖೆ ಮಾಡುವಂತಿಲ್ಲ ಸಿಬ್ಬಂದಿಗೆ ಕೆಲಸವಿಲ್ಲ

ಎಸಿಬಿ ತನಿಖೆ ಮಾಡುವಂತಿಲ್ಲ ಸಿಬ್ಬಂದಿಗೆ ಕೆಲಸವಿಲ್ಲ

ಬೆಂಗಳೂರು ನಗರದಲ್ಲಿ ದಾಖಲಾಗಿರುವ ಕೇಸ್‌ಗಳನ್ನ ಇನ್ನಷ್ಟೇ ಹಸ್ತಾಂತರ ಪ್ರಕ್ರಿಯೆ ಪೂರ್ಣವಾಗಬೇಕಿದೆ. ಲೋಕಾಯುಕ್ತಕ್ಕೆ ಬರುವ ದೂರುಗಳು ದಿನೇ‌ ದಿನೇ ಏರಿಕೆಯಾಗುತ್ತಿವೆ. ಜೊತೆಗೆ ವರ್ಗವಾದ ಪ್ರಕರಣಗಳನ್ನು ತನಿಖೆ ನಡೆಸಬೇಕಿದೆ. ಈ ನಡುವೆ ಎಸಿಬಿಯಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು‌ ಲೋಕಾಯುಕಕ್ಕೆ ವರ್ಗವಾದಾಗಿನಿಂದ ಎಸಿಬಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಕ್ಷರಶಃ ಕೆಲಸವೇ ಇಲ್ಲದಂತಾಗಿದೆ.

 ಲೋಕಾಯುಕ್ತರು ಪತ್ರ ಬರೆದರು ಪ್ರಯೋಜನವಾಗಿಲ್ಲ

ಲೋಕಾಯುಕ್ತರು ಪತ್ರ ಬರೆದರು ಪ್ರಯೋಜನವಾಗಿಲ್ಲ

ಎಸಿಬಿಯಲ್ಲಿರುವ ಅಧಿಕಾರಿ-ಸಿಬ್ಬಂದಿ ಹಾಗೂ ಕಚೇರಿ ಸೇರಿ ವಿವಿಧ ಸೌಕರ್ಯಗಳನ್ನ ಯಥಾವತ್ ನೀಡುವಂತೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಪತ್ರ ಬರೆದು ತಿಂಗಳಾದರೂ ಸರ್ಕಾರ ಗಮನಹರಿಸಿಲ್ಲ. ಲೋಕಾಯುಕ್ತ ಹಾಗೂ ರದ್ದುಗೊಂಡಿರುವ ಎಸಿಬಿಯು ಸಿಬ್ಬಂದಿ ಹಾಗೂ ಆಡಳಿತ ಸೇವಾ ಸುಧಾರಣೆ ಇಲಾಖೆ ವ್ಯಾಪ್ತಿಗೆ ಬರಲಿದೆ. ಎಸಿಬಿ ರದ್ದುಗೊಂಡರೂ‌ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿ ಬೇರೆ ಕಡೆ ನಿಯೋಜಿಸುವ ಗೋಜಿಗೆ ಇಲಾಖೆ ಮುಂದಾಗಿಲ್ಲ. ಈ ಬಗ್ಗೆ ಗಮನಹರಿಸಬೇಕಾದ ಸರ್ಕಾರ ಒಮ್ಮೆಯೂ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಸಂಬಂಧಿಸಿದ ರಾಜ್ಯ ಮುಖ್ಯಕಾರ್ಯದರ್ಶಿಗಳು ಅಧಿಕಾರಿಗಳ ಜೊತೆಯಲ್ಲಿ ಒಮ್ಮೆಯೂ ಸಭೆ ನಡೆಸಿಲ್ಲ.

 ಸೇವಾ ಹಿರಿತನ ಆಧಾರದಲ್ಲಿ ವರ್ಗಾವಣೆ ಮಾಡಬೇಕು

ಸೇವಾ ಹಿರಿತನ ಆಧಾರದಲ್ಲಿ ವರ್ಗಾವಣೆ ಮಾಡಬೇಕು

ಲೋಕಾಯುಕ್ತ ಮರುಸ್ಥಾಪನೆಯಿಂದ ಎಸಿಬಿ ನೇಪಥ್ಯಕ್ಕೆ ಸರಿದಿದೆ. ಎಸಿಬಿಯಲ್ಲಿರುವ ಐಪಿಎಸ್ ಅಧಿಕಾರಿಗಳು, ಡಿವೈಎಸ್ಪಿ, ಇನ್ ಸ್ಪೆಕ್ಟರ್ ಗಳನ್ನ ಮರುನಿಯುಕ್ತಿಗೊಳಿಸುವುದೇ ಸರ್ಕಾರಕ್ಕೆ ಸವಾಲಾಗಿದೆ. ಹಿರಿತನ ಅಥವಾ ಗ್ರೇಡ್ ಆಧಾರದ ಮೇಲೆ ಹುದ್ದೆ ತೋರಿಸಬೇಕು. ಬೆರಳಣಿಕೆ ಕಡೆ ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಪೂರ್ಣ‌ ಪ್ರಮಾಣದಲ್ಲಿ ಅಧಿಕಾರಿಗಳಿದ್ದಾರೆ. ಲೋಕಾಯುಕ್ತಕ್ಕೆ ಕೆಲವು ಅಧಿಕಾರಿ ಸಿಬ್ಬಂದಿಯನ್ನ ವರ್ಗಾಯಿಸಬಹುದು. ಇನ್ನುಳಿದ ಸಿಬ್ಬಂದಿಯನ್ನು ಬೇರೆ ಕಡೆ ನಿಯೋಜಿಸಬೇಕಿದೆ.

 ಆರಗ ಜ್ಞಾನೇಂದ್ರ ಮಾಹಿತಿ

ಆರಗ ಜ್ಞಾನೇಂದ್ರ ಮಾಹಿತಿ

ಗೃಹ ಸಚಿವ ಆರಗ ಜ್ಞಾನೇಂದ್ರ 'ಲೋಕಾಯುಕ್ತ ಹಾಗೂ ರದ್ದುಗೊಂಡಿರುವ ಎಸಿಬಿ ಗೃಹ ಇಲಾಖೆ ಅಧೀನಕ್ಕೆ ಬರುವುದಿಲ್ಲ. ಅಧಿಕಾರಿ ಹಾಗೂ‌ ಸಿಬ್ಬಂದಿಯನ್ನ ಮರುನಿಯೋಜನೆ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಂಬಂಧಿಸಿದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ‌. ಆದಷ್ಟು ಬೇಗ ಎಸಿಬಿಯಲ್ಲಿರುವ ಅಧಿಕಾರಿ ಹಾಗೂ ಅಧಿಕಾರಿಯೇತರನ್ನು ಮರುನಿಯುಕ್ತಿಗೊಳಿಸಲಾಗುವುದು' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

English summary
Lokayukta got power after High Court order. But the ACB, which was formed after taking over the functions of the Lokayukta, was cancelled. Now the officers in ACB are facing a situation where they have to linger without any transfer or work, Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X