ಶಂಕರ್ ಬಿದರಿ ಇ ಮೇಲ್ ಹ್ಯಾಕ್: ನಾಗಾಲ್ಯಾಂಡ್ ಮೂಲದ 3 ಬಂಧನ
ಬೆಂಗಳೂರು, ಮಾರ್ಚ್ 10: ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಇಮೇಲ್ ಹ್ಯಾಕ್ ಮಾಡಿ ಅವರ ಅಪ್ತರಿಂದ ಹಣ ವಸೂಲಿ ಮಾಡಿದ್ದ ನಾಗಾಲ್ಯಾಂಡ್ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಸಾರ್ವಜನಿಕರನ್ನು ವಂಚಿಸುವ ದೊಡ್ಡ ಜಾಲ ಸೃಷ್ಟಿ ಮಾಡಿದ್ದ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ನಾಗಾಲ್ಯಾಂಡ್ ಮಲದ ಥಿಯಾ (31), ಸೆರೋಸಾ (27) ಇಸ್ಟರ್ ಕೊನ್ಯಾಕ್ ಅಲಿಯಾಸ್ ರುಚಿಕಾ ಬಂಧಿತ ಆರೋಪಿಗಳು. ಬೆಂಗಳೂರಿನ ಹೊರಮಾವು ಸಮೀಪ ಮನೆ ಮಾಡಿಕೊಂಡಿದ್ದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅವರ ಇಮೇಲ್ ಖಾತೆಯನ್ನು ಹ್ಯಾಕ್ ಮಾಡಿದ್ದ ಈ ಕಿರಾತಕರು ಬಿದರಿ ಆಪ್ತರಿಗೆ ಇ ಮೇಲ್ ಸಂದೇಶ ರವಾನಿಸಿದ್ದರು.
ನನಗೆ ತುರ್ತಾಗಿ 25 ಸಾವಿರ ಹಣ ಬೇಕಿದೆ. ನನ್ನ ಈ ನಂಬರ್ ಗೆ ಕಳಿಸಿ, ಒಂದು ದಿನದಲ್ಲಿ ವಾಪಸು ಕಳಿಸುತ್ತೇನೆ ಎಂಬ ಸಂದೇಶಯುಳ್ಳ ಮಾಹಿತಿ ಕಳುಹಿಸಿದ್ದರು. ಇದನ್ನು ನಂಬಿ ಬದರಿ ಆಪ್ತರೊಬ್ಬರು ಹಣವನ್ನು ಹಾಕಿ ಪೋನ್ ಮಾಡಿ ತಿಳಿಸಿದ್ದಾರೆ. ಈ ವೇಳೆ ಯಾರೋ ಸೈಬರ್ ವಂಚಕರು ಬಿದರಿ ಹೆಸರಿನಲ್ಲಿ ಮೋಸ ಮಾಡಿದ್ದಾರೆ ಎಂಬುದು ಗೊತ್ತಾಗಿದೆ. ಈ ಕುರಿತು ಶಂಕರಿ ಬಿದರಿ ಆಪ್ತರು ಸೈಬರ್ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ತನಿಖೆ ನಡೆಸಿದ ಸೈಬರ್ ಪೊಲೀಸರು, ನಾಗಾಲ್ಯಾಂಡ್ ಮೂಲದ ರುಚಿಕಾ ಅಲಿಯಾಸ್ ಇಸ್ಟರ್ ಕೊನ್ಯಾಕ್ ಳನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದಾಗ ನಾಲ್ಕು ವರ್ಷದ ಹಿಂದೆ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದಳು. ಅಂತರ್ಜಾಲದಲ್ಲಿ ಪೀಟರ್ ಮತ್ತು ಜೇಮ್ಸ್ ಎಂಬ ಸೈಬರ್ ವಂಚಕರು ಪರಿಚಿತರಾಗಿ, ಸಾರ್ವಜನಿಕರಿಗೆ ವಂಚಿಸುವ ಯೋಜನೆ ರೂಪಿಸಿದ್ದಾರೆ.ಇದಕ್ಕಾಗಿ ಅಗತ್ಯವಿರುವ ಬ್ಯಾಂಕ್ ಖಾತೆ ಬೇಕಿತ್ತು. ನಾಗಾಲ್ಯಾಂಡ್ ನಿರುದ್ಯೋಗಿ ಯುವಕರಿಗೆ ಹಣದ ಅಮಿಷೆ ಒಡ್ಡಿ ಅವರ ಆಧಾರ್ ಪಾನ್ ಕಾರ್ಡ್ ವಿವರ ಪಡೆದು ಬೋಗಸ್ ಬ್ಯಾಂಕ್ ಖಾತೆ ತೆರೆದಿದ್ದರು. ವಿವಿಧ ಬ್ಯಾಂಕ್ ಗಳಲ್ಲಿ 6 ಕ್ಕೂ ಹೆಚ್ಚು ಬ್ಯಾಂಕ್ ಖಾತೆ ತೆರೆದಿದ್ದರು.
ಸಾರ್ವಜನಿಕರ ಸಾಮಾಜಿಕ ಜಾಲ ತಾಣಗಳನ್ನು ಹ್ಯಾಕ್ ಮಾಡಿ, ಅವರ ಆಪ್ತ ವರ್ಗಕ್ಕೆ ಹಣ ಕಳಿಸುವಂತೆ ಸಂದೇಶ ರವಾನಿಸುತ್ತಿದ್ದರು. ಹ್ಯಾಕ್ ಮಾಡಲಿಕ್ಕೆ ಪ್ರಮುಖ ವ್ಯಕ್ತಿಗಳ ಸಾಮಾಜಿಕ ಜಾಲ ತಾಣದ ಖಾತೆಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ಬಂದ ಹಣವನ್ನು ಈ ಖಾತೆಗಳಿಗೆ ಹಾಕಿಸಿಕೊಂಡು ವಂಚನೆ ಮಾಡುತ್ತಿದ್ದರು. ಈ ಕುರಿತು ಶಂಕರ್ ಬಿದರಿ ಅವರ ಆಪ್ತ ನೀಡಿದ ದೂರಿನ ಮೇರೆಗೆ ಮೂವರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿಗಳಾದ ಜೇಮ್ಸ್ ಮತ್ತು ಪೀಟರ್ ತಲೆ ಮರೆಸಿಕೊಂಡಿದ್ದಾರೆ. ಆಗ್ನೇಯ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್ ಎಲ್.ವೈ. ರಾಜೇಶ್ ಮತ್ತು ತಂಡ ಈ ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications