ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಸಿಲಿಕಾನ್ ಸಿಟಿ ಬೆಂಗಳೂರಿನ ಮೇಲೆ ನೆರೆಹೊರೆ ರಾಜ್ಯಗಳ ಸಿಎಂ ಕಣ್ಣು ಮೊದಲಿನಿಂದಲೂ ಇದೆ. ಆಂಧ್ರ ಸಚಿವ ನಾರಾ ಲೋಕೇಶ್ ಅವಕಾಶ ಸಿಕ್ಕಿದಾಗಲೆಲ್ಲ ಬೆಂಗಳೂರಿನ ಸಮಸ್ಯೆಗಳನ್ನು ಅಣಕಿಸುತ್ತಾ ಇಲ್ಲಿನ ಕಂಪನಿಗಳನ್ನು ತಮ್ಮ ರಾಜ್ಯಕ್ಕೆ ಬರುವಂತೆ ಆಹ್ವಾನಿಸಿದ್ದರು. ಈಗ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಲೇವಡಿ ಮಾಡುವ ಮೂಲಕ ಹೈದರಾಬಾದ್ ನಗರವೇ ಅತ್ಯಂತ ಸುಂದರ ಮತ್ತು ಅಭಿವೃದ್ಧಿ ಹೊಂದಿದ ನಗರ ಎಂದು ಬೆನ್ನುತಟ್ಟಿಕೊಂಡಿದ್ದಾರೆ.
ವಿಮಾನ ನಿಲ್ದಾಣ ತಲುಪಲು ಹೆಚ್ಚು ಸಮಯ ಹಿಡಿಯುತ್ತೆ
ಹೈದರಾಬಾದ್ನ ಕೆರೆಗಳ ಪುನಶ್ಚೇತನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದ ಇತರ ಪ್ರಮುಖ ನಗರಗಳ ಅಭಿವೃದ್ಧಿ ಕುಂಠಿತವಾಗಿರುವುದಕ್ಕೆ ಬೆಂಗಳೂರಿನ ಟ್ರಾಫಿಕ್ ವ್ಯವಸ್ಥೆಯನ್ನು ಉದಾಹರಣೆಯಾಗಿ ನೀಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ಉಲ್ಲೇಖಿಸಿದ ಅವರು, "ದಕ್ಷಿಣದ ಪ್ರಮುಖ ನಗರವಾದ ಬೆಂಗಳೂರಿನಲ್ಲಿ ಯಾರೂ ಸಹ ವಿಮಾನ ನಿಲ್ದಾಣ ತಲುಪಲು ಎಷ್ಟು ಸಮಯ ಬೇಕಾಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಅಲ್ಲಿನ ಟ್ರಾಫಿಕ್ ಸಮಸ್ಯೆ ಅಷ್ಟರಮಟ್ಟಿಗೆ ಹದಗೆಟ್ಟಿದೆ" ಎಂದು ಅಣಕಿಸಿದ್ದಾರೆ.

ಅಲ್ಲದೆ ದೆಹಲಿಯ ಮಾಲಿನ್ಯ ನಿಯಂತ್ರಣಕ್ಕೆ ಮೀರಿ ಹೋಗಿದೆ, ಮುಂಬೈ ಮತ್ತು ಚೆನ್ನೈ ನಗರಗಳು ಸ್ವಲ್ಪ ಮಳೆಯಾದರೂ ಮುಳುಗಿ ಹೋಗುತ್ತವೆ. ಆದರೆ ಇವೆಲ್ಲದಕ್ಕೂ ಹೋಲಿಸಿದರೆ ಹೈದರಾಬಾದ್ ಅತ್ಯಂತ ಸುರಕ್ಷಿತ ನಗರ ಎಂದು ಅವರು ಹೇಳಿದ್ದಾರೆ. ಸಬರಮತಿ, ಯಮುನಾ ಮತ್ತು ಗಂಗಾ ನದಿಗಳ ಮಾದರಿಯಲ್ಲಿ ಹೈದರಾಬಾದ್ನ ಮೂಸಿ ನದಿಯನ್ನು ಪುನಶ್ಚೇತನಗೊಳಿಸಿ ನದಿ ಆರ್ಥಿಕತೆ ಬೆಳೆಸಬೇಕು. ಇದಕ್ಕೆ ಅಡ್ಡಿಪಡಿಸುವವರು ನಗರಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.
ರೇವಂತ್ ರೆಡ್ಡಿ ಹೇಳಿಕೆಗೆ ಖಂಡನೆ
ರೇವಂತ್ ರೆಡ್ಡಿ ಅವರ ಈ ಹೇಳಿಕೆಯು ಕರ್ನಾಟಕದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು ಜಾಗತಿಕ ಮಟ್ಟದ ಐಟಿ ಹಬ್ ಆಗಿ ಗುರುತಿಸಿಕೊಂಡಿದ್ದು, ಅತಿ ಹೆಚ್ಚು ತೆರಿಗೆ ಪಾವತಿಸುವ ನಗರವಾಗಿದೆ. ರೇವಂತ್ ರೆಡ್ಡಿ ಅವರು ಹೈದರಾಬಾದ್ಗೆ ಹೂಡಿಕೆದಾರರನ್ನು ಸೆಳೆಯಲು ಬೆಂಗಳೂರಿನಂತಹ ಬಲಿಷ್ಠ ನಗರವನ್ನು ಟೀಕಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರು ಟ್ರಾಫಿಕ್ ಸಮಸ್ಯೆಯನ್ನು ಎದುರಿಸುತ್ತಿರುವುದು ನಿಜವಾದರೂ, ಕರ್ನಾಟಕ ಸರ್ಕಾರವು ಮೆಟ್ರೋ ವಿಸ್ತರಣೆ, ಸುರಂಗ ರಸ್ತೆಗಳು ಮತ್ತು ಪೆರಿಫೆರಲ್ ರಿಂಗ್ ರೋಡ್ಗಳ ಮೂಲಕ ಸಮಸ್ಯೆಯನ್ನು ಹಂತಹಂತವಾಗಿ ಪರಿಹರಿಸಲು ಮುಂದಾಗಿದೆ. ರೇವಂತ್ ರೆಡ್ಡಿ ಅವರ ಟೀಕೆಗೆ ಪ್ರತಿಕ್ರಿಯಿಸಿರುವ ಹಲವು ಕನ್ನಡಿಗರು, "ಬೆಂಗಳೂರಿನ ಬೆಳವಣಿಗೆಯ ವೇಗ ಮತ್ತು ಹೂಡಿಕೆಯ ಪ್ರಮಾಣವನ್ನು ಹೈದರಾಬಾದ್ ಮುಟ್ಟಲು ಸಾಧ್ಯವಿಲ್ಲ" ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಿರುಗೇಟು ನೀಡುತ್ತಿದ್ದಾರೆ.
ಆರ್.ಅಶೋಕ್ ಕಿಡಿ
ರೇವಂತ್ ರೆಡ್ಡಿ ಹೇಳಿಕೆ ಉಲ್ಲೇಖಿಸಿ, ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಸ್ವಂತ ಪಕ್ಷದ ಸಿಎಂ ಕೂಡ ಒಪ್ಪದ 'ಬ್ರ್ಯಾಂಡ್ ಬೆಂಗಳೂರು' ಎಂದು ಗೇಲಿ ಮಾಡಿದ್ದಾರೆ. ಪಾರ್ಟ್ ಟೈಂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರೇ, ನಿಮ್ಮದೇ ಕಾಂಗ್ರೆಸ್ ಪಕ್ಷದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಹೈದರಾಬಾದ್ ಎದುರು ಬೆಂಗಳೂರಿನ ಟ್ರಾಫಿಕ್ ಮತ್ತು ಮಾಲಿನ್ಯವನ್ನು ಬಹಿರಂಗವಾಗಿ ಲೇವಡಿ ಮಾಡಿದ್ದಾರೆ. ಬ್ರ್ಯಾಂಡ್, ಗ್ರೇಟರ್ ಮಾಡಲು ಹೋಗಿ, ನಮ್ಮ ಹೆಮ್ಮೆಯ ಸಿಲಿಕಾನ್ ಸಿಟಿಯನ್ನು "ಬ್ಲ್ಯಾಕ್ ಲಿಸ್ಟ್" ಮಾಡಿದ್ದೇ ನಿಮ್ಮ ದೊಡ್ಡ ಸಾಧನೆ. ಗುಂಡಿಬಿದ್ದ ರಸ್ತೆಗಳು ಮತ್ತು ಕಸದ ರಾಶಿಗಳೇ ನಿಮ್ಮ ಜಾಗತಿಕ ಮಟ್ಟದ ಯೋಜನೆಗಳೇ? ಎಂದು ಕುಟುಕಿದ್ದಾರೆ.
-
ಗಂಟೆಗಟ್ಟಲೆ ಕ್ಯೂ ನಿಂತರೂ ಸಿಗದ ಗ್ಯಾಸ್: ಮೊಬೈಲ್ ಟವರ್ ಏರಿ ಆಟೋ ಚಾಲಕನ ಆಕ್ರೋಶ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ











Click it and Unblock the Notifications