• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದ್ವೇಷ ರಾಜಕಾರಣ ಸಹಿಸಲು ಸಾಧ್ಯವಿಲ್ಲ : ದಿನೇಶ್ ಗುಂಡೂರಾವ್

|

ಬೆಂಗಳೂರು, ಸೆಪ್ಟೆಂಬರ್ 11 : ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಂಧನವಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅವರನ್ನು ಬಂಧಿಸಿರುವುದು ಖಂಡಿಸಿ ಬೃಹತ್ ಪ್ರತಿಪಭಟನೆ ನಡೆಯುತ್ತಿದೆ.

ವಿಶ್ವ ಒಕ್ಕಲಿಗರ ಒಕ್ಕೂಟದಡಿ ವಿವಿಧ ಸಂಘಟನೆಗಳು ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಬಸನವಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿದರು.

ಡಿಕೆಶಿ ಪರ ಪ್ರತಿಭಟನೆ : ಒಕ್ಕಲಿಗರ ವಿರೋಧಿ ಬಿಜೆಪಿ ಎಂಬ ಘೋಷಣೆ

"ಕೇಂದ್ರ ಸರ್ಕಾರದ ದ್ವೇಷ ರಾಜಕಾರಣವನ್ನು ಮಾಡಬಾರದು ಎಂಬ ಸಂದೇಶ ಬೃಹತ್ ಜನಸಮೂಹದ ಮೂಲಕ ವ್ಯಕ್ತವಾಗಿದೆ. ದ್ವೇಷ ರಾಜಕೀಯವನ್ನು ಸಹಿಸಲು ಸಾಧ್ಯವೇ ಇಲ್ಲ" ಎಂದು ಹೇಳಿದರು.

ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ: ವಾಹನ ಮಾರ್ಗ ಬದಲಾವಣೆ

"ನ್ಯಾಷನಲ್ ಕಾಲೇಜು ಮೈದಾನದಲ್ಲಿ 50 ಸಾವಿರಕ್ಕೂ ಅಧಿಕ ಜನರು ಸೇರಿದ್ದಾರೆ. ಇದು ಕೇಂದ್ರ ಸರ್ಕಾರಕ್ಕೆ ನೀಡಿರುವ ಪ್ರತ್ಯುತ್ತರವಾಗಿದೆ. ವಿರೋಧ ಪಕ್ಷದವರನ್ನು ಮುಗಿಸುವ ತಂತ್ರವನ್ನು ಸಹಿಸಲು ಸಾಧ್ಯವಿಲ್ಲ" ಎಂದರು.

ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ : ಬಿಜೆಪಿ ನಾಯಕರು ಹೇಳಿದ್ದೇನು?

"ಕೇಂದ್ರ ಸರ್ಕಾರ ಇಡಿ, ಐಟಿಗಳನ್ನು ದುರ್ಬಳಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಡಿ. ಕೆ. ಶಿವಕುಮಾರ್ ತನಿಖೆಗೆ ಸಹಕಾರ ನೀಡಿದ ಮೇಲೂ ಅವರಿಗೆ ಕಿರುಕುಳ ನೀಡುವ ಸಲುವಾಗಿ ಬಂಧಿಸಲಾಗಿದೆ" ಎಂದು ಆರೋಪಿಸಿದರು.

"ಮೂರು ತಿಂಗಳಿನಲ್ಲಿ ಬ್ಯಾಂಕುಗಳಿಂದ 32 ಸಾವಿರ ಕೋಟಿ ಲೂಟಿಯಾಗಿದೆ. ಅದನ್ನು ತಡೆಯಲು ಏನು ಕ್ರಮ ಕೈಗೊಂಡಿದ್ದೀರಿ. ಜನರು ನಿಮ್ಮ ವಿರುದ್ಧ ಎದ್ದು ನಿಂತಿದ್ದಾರೆ. ಇದನ್ನು ತಡೆಯಲು ಸಾಧ್ಯವಿಲ್ಲ" ಎಂದು ಹೇಳಿದರು.

English summary
Revenge politics by the BJP government not tolerated said Karnataka Pradesh Congress Committee (KPCC) president Dinesh Gundu Rao. He participate in the protest in Bengaluru against arrest of D.K.Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X