ಮೆಟ್ರೋ ಡಿಪೋಗಾಗಿ 16 ಎಕರೆ ಭೂಮಿ ನೀಡಲು ಕಂದಾಯ ಇಲಾಖೆ ಒಪ್ಪಿಗೆ
ಬೆಂಗಳೂರು, ಡಿಸೆಂಬರ್ 7: ತಿಪ್ಪಗೊಂಡನಹಳ್ಳಿಯಲ್ಲಿರುವ 16 ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲು ಕಂದಾಯ ಇಲಾಖೆ ಒಪ್ಪಿಗೆ ನೀಡಿದೆ.
ಮೆಟ್ರೋ ಎರಡನೇ ಹಂತದ ಕಾಮಗಾರಿಗಾಗಿ ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಕಾಡುಗೋಡಿ ಡಿಪೋ ನಿರ್ಮಾಣ ಮಾಡಲು ಅರಣ್ಯ ಇಲಾಖೆಯು 45 ಎಕರೆ ಜಮೀನು ನೀಡಿತ್ತು. ಅದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ತಿಪ್ಪಗೊಂಡನಹಳ್ಳಿಯಲ್ಲಿ 16 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ನೀಡಲು ಒಪ್ಪಿಗೆ ಸೂಚಿಸಿದೆ.
ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಎರಡನೇ ಹಂತದ ಮೆಟ್ರೋ ಕಾಮಗಾರಿ 72ಕಿ.ಮೀ ವ್ಯಾಪ್ತಿಯದ್ದಾಗಿದೆ.

ಅದಕ್ಕೆ ಸುಮಾರು 32,000 ಕೋಟಿ ರೂ ವೆಚ್ಚವಾಗಲಿದೆ. ಹಾಗೆಯೇ 13.26 ಸ್ಕ್ವೇರ್ ಮೀ ಬೇಕಾಗುತ್ತದೆ. ಈಗಾಗಲೇ 8.6 ಕಿಮೀ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಮೀನು ಮಾಲೀಕರಿಗೆ 6293 ಕೋಟಿ ರೂ ನೀಡಲಾಗಿದೆ.
20 ದಿನಗಳೊಳಗಾಗಿ ತಿಪ್ಪಗೊಂಡನಹಳ್ಳಿ ಜಮೀನನ್ನು ಅರಣ್ಯ ಇಲಾಖೆಗೆ ಒಪ್ಪಿಸುವುದಾಗಿ ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications