ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್ ಅಶೋಕ್‌ಗೆ ಕೊರೊನಾ ನೆಗಿಟಿವ್, ಪ್ರವಾಹ ಪರಿಹಾರ ಕಾರ್ಯಕ್ಕೆ ಹಾಜರ್!

|
Google Oneindia Kannada News

ಬೆಂಗಳೂರು, ಆಗಸ್ಟ್ 6: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆ ಕಂದಾಯ ಸಚಿವ ಆರ್ ಅಶೋಕ್ ಕ್ವಾರಂಟೈನ್‌ಗೆ ಒಳಪಟ್ಟಿದ್ದರು.

Recommended Video

ರಸಗೊಬ್ಬರ ಮತ್ತು ಬಾಂಬ್ ಬಳಕೆಯಲ್ಲಿ ಬಳಸುವ ಅಮೋನಿಯಂ ನೈಟ್ರೇಟ್ ಸ್ಪೋ | Oneindia Kannada

ಇದೀಗ, ಕೊವಿಡ್ ಪರೀಕ್ಷೆಗೆ ಒಳಗಾಗಿದ್ದ ಆರ್ ಅಶೋಕ್ ಅವರಿಗೆ ಕೊರೊನಾ ನೆಗಿಟಿವ್ ಬಂದಿದೆ. ಈ ಕುರಿತು ಸ್ವತಃ ಅಶೋಕ್ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಪ್ರವಾಹ ಭೀತಿ: ಯಡಿಯೂರಪ್ಪ ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಪ್ರವಾಹ ಭೀತಿ: ಯಡಿಯೂರಪ್ಪ ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ

'ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಅವರನ್ನು ಭೇಟಿಯಾಗಿ 8 ದಿನಗಳ ನಂತರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆನು. ಈ ಪರೀಕ್ಷೆಯ ವರದಿ ಕೋವಿಡ್-ನೆಗಟಿವ್ ಬಂದಿರುವುದು ನಮಗೆ ನೆಮ್ಮದಿ ತಂದಿದ್ದು, ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣೆ ಹಾಗೂ ಪ್ರವಾಹ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ' ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆ ಹೆಚ್ಚಾಗಿ ಹಲವು ಕಡೆ ಪ್ರವಾಹ ಭೀತಿ ಎದುರಾಗಿದೆ. ಇಂತಹ ಸಮಯದಲ್ಲಿ ಸಿಎಂಗೆ ಕೊರೊನಾ ತಗುಲಿದ್ದು, ಆಸ್ಪತ್ರೆಯಲ್ಲಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್ ಅಶೋಕ್ ಸಹ ಕ್ವಾರಂಟೈನ್ ಗೆ ಒಳಗಾಗಿದ್ದರು.

Revenue Minister R Ashok Tested Negative For Coronavirus

ಈ ಹಿನ್ನೆಲೆ ವಿಪಕ್ಷ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ 'ಹಿರಿಯ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ವಹಿಸಿ ಎಂದು ಸಲಹೆ ನೀಡಿದ್ದರು.

ಇದೀಗ, ಆರ್ ಅಶೋಕ್ ಅವರಿಗೆ ಕೊರೊನಾ ನೆಗಿಟಿವ್ ಬಂದಿದ್ದು, 'ಪ್ರವಾಹ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ' ಎಂದು ತಿಳಿಸಿದ್ದಾರೆ.

English summary
Revenue Minister and State Disaster Management Authority President R Ashok tested negative for Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X