• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಪ ಚುನಾವಣೆ: ಸ್ಟಾರ್ ಪ್ರಚಾರಕರ ಕುರಿತು ಚುನಾವಣಾ ಆಯೋಗ ಮಹತ್ವದ ಆದೇಶ!

|

ಬೆಂಗಳೂರು, ಅ. 08: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು ಮಿತಿಗೊಳಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ಭಾರತ ಚುನಾವಣಾ ಆಯೋಗವು ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪಕ್ಷಗಳಿಗೆ 40 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳುವ ಅವಕಾಶ ನೀಡಲಾಗಿತ್ತು. ಆದರೆ, ಈ ಸಂಖ್ಯೆಯಲ್ಲಿ ಬದಲಾವಣೆ ಮಾಡಿ 30 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಅದೇ ರೀತಿಯಲ್ಲಿ ನೊಂದಾಯಿತ ರಾಜಕೀಯ ಪಕ್ಷಗಳಿಗೆ ನೀಡಲಾಗಿದ್ದ 20 ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು 15ಕ್ಕೆ ಇಳಿಸಿ ಪರಿಷ್ಕೃತ ಆದೇಶವನ್ನು ನೀಡಿದೆ.

ಆರ್. ಆರ್. ನಗರ ಉಪ ಚುನಾವಣೆ; ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

ರಾಜ್ಯದಲ್ಲಿ ಪ್ರಸ್ತುತ ಘೋಷಣೆಯಾಗಿರುವ ವಿಧಾನ ಸಭಾ ಉಪ ಚುನಾವಣೆಗಳಿಗೆ ಈ ಪರಿಷ್ಕೃತ ಆದೇಶ ಅನ್ವಯವಾಗಲಿದ್ದು, ರಾಜಕೀಯ ಪಕ್ಷಗಳು ಸ್ಟಾರ್ ಪ್ರಚಾರಕರ ಸಭೆಗಳ ಕುರಿತು ಮುಖ್ಯ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಲು ಚುನಾವಣೆ ಅಧಿಸೂಚನೆಯ ದಿನಾಂಕದಿಂದ ಇದ್ದ ಒಂದು ವಾರದ ಗಡುವನ್ನು 10 ದಿನಗಳಿಗೆ ವಿಸ್ತರಿಸಲಾಗಿದೆ.

   Kusuma : ರಾಜಕೀಯ ವ್ಯಾಪಾರ ಅಲ್ಲ ,ಪ್ರತಿ ಸ್ಪರ್ಧಿ ಬಗ್ಗೆ NO TENSION | Oneindia Kannada

   ಸ್ಟಾರ್ ಪ್ರಚಾರಕರ ಸಭೆಗಳಿಗೆ ಕನಿಷ್ಠ 48 ಗಂಟೆಗಳ ಮುಂಚೆ ಅನುಮತಿಗಾಗಿ ರಾಜಕೀಯ ಪಕ್ಷಗಳು ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

   English summary
   The maximum limit on the number of star campaigners for recognized National / State polical parties shall be 30 in place of 40 and for unrecognized registered political parties it shall be 15 in place of 20 during the period of pandemic.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X