ಡಿ.ಜೆ ಹಳ್ಳಿ ಗಲಭೆ ಪ್ರಕರಣ: NIAಯಿಂದ 30 ಕಡೆ ದಾಳಿ, ಪ್ರಮುಖ ಆರೋಪಿ ಬಂಧನ
ಬೆಂಗಳೂರು, ಸೆಪ್ಟೆಂಬರ್ 24: ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಲಿಕಾನ್ ಸಿಟಿಯಲ್ಲಿ 30 ಕಡೆಯಲ್ಲಿ ಎನ್‌ಐಎ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಸೈಯದ್ ಸಾದಿಕ್ ಅಲಿ (44) ಎಂಬಾತನ್ನು ಬಂಧಿಸಿದ್ದಾರೆ.
ನವೀನ್ ಎಂಬಾತನು ಪ್ರವಾದಿ ಮೊಹಮ್ಮದರ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದನ್ನು ಖಂಡಿಸಿ, ಮುಸ್ಲಿಂ ಸಮುದಾಯದವರು ಆಗಸ್ಟ್ 11 ರಾತ್ರಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ತೀವ್ರಗೊಂಡು ಡಿ.ಜೆ ಹಳ್ಳಿ ಮತ್ತು ಕೆ.ಜಿ. ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗಲಭೆಗೆ ಕಾರಣವಾಗಿತ್ತು. ಇದರ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ.
ಡಿಜೆ ಹಳ್ಳಿ ಗಲಭೆಯಲ್ಲಿ ಮೂವರು ಬಲಿಯಾಗಿದ್ದರ ಜೊತೆಗೆ 40ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಈ ಘಟನೆ ಸಂಬಂಧ ಪ್ರಮುಖ ಆರೋಪಿಯ ಬಂಧನವಾಗಿದೆ.

ಬೆಂಗಳೂರಿನ 30 ಕಡೆಯ ಎನ್‌ಐಎ ದಾಳಿಯಲ್ಲಿ ಏರ್‌ಗನ್, ಅದಕ್ಕೆ ಬಳಸುವ ಗುಂಡುಗಳು, ಹರಿತ ಆಯುಧ, ಕಬ್ಬಿಣದ ರಾಡ್‌ಗಳು, ವಿದ್ಯುನ್ಮಾನ ಉಪಕರಣಗಳು ಸಿಕ್ಕಿವೆ.
Recommended Video
ಸಿದ್ದು ಹೊಸ ತಂತ್ರಗಾರಿಕೆ | Siddaramaiah | Oneindia Kannada












Click it and Unblock the Notifications