ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.ಜೆ ಹಳ್ಳಿ ಗಲಭೆ ಪ್ರಕರಣ: NIAಯಿಂದ 30 ಕಡೆ ದಾಳಿ, ಪ್ರಮುಖ ಆರೋಪಿ ಬಂಧನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 24: ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಲಿಕಾನ್ ಸಿಟಿಯಲ್ಲಿ 30 ಕಡೆಯಲ್ಲಿ ಎನ್‌ಐಎ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಸೈಯದ್ ಸಾದಿಕ್ ಅಲಿ (44) ಎಂಬಾತನ್ನು ಬಂಧಿಸಿದ್ದಾರೆ.

ನವೀನ್ ಎಂಬಾತನು ಪ್ರವಾದಿ ಮೊಹಮ್ಮದರ ಕುರಿತು ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದನ್ನು ಖಂಡಿಸಿ, ಮುಸ್ಲಿಂ ಸಮುದಾಯದವರು ಆಗಸ್ಟ್ 11 ರಾತ್ರಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ತೀವ್ರಗೊಂಡು ಡಿ.ಜೆ ಹಳ್ಳಿ ಮತ್ತು ಕೆ.ಜಿ. ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗಲಭೆಗೆ ಕಾರಣವಾಗಿತ್ತು. ಇದರ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ.

ಬೆಂಗಳೂರು ಗಲಭೆ: ಸತ್ಯ ಶೋಧನಾ ಸಮಿತಿ ವರದಿಯಲ್ಲಿ ಏನಿದೆ?ಬೆಂಗಳೂರು ಗಲಭೆ: ಸತ್ಯ ಶೋಧನಾ ಸಮಿತಿ ವರದಿಯಲ್ಲಿ ಏನಿದೆ?

ಡಿಜೆ ಹಳ್ಳಿ ಗಲಭೆಯಲ್ಲಿ ಮೂವರು ಬಲಿಯಾಗಿದ್ದರ ಜೊತೆಗೆ 40ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಈ ಘಟನೆ ಸಂಬಂಧ ಪ್ರಮುಖ ಆರೋಪಿಯ ಬಂಧನವಾಗಿದೆ.

Bengaluru Riots: NIA Searches 30 Loactions, Arrests Key Conspirator

Recommended Video

ಸಿದ್ದು ಹೊಸ ತಂತ್ರಗಾರಿಕೆ | Siddaramaiah | Oneindia Kannada

ಬೆಂಗಳೂರಿನ 30 ಕಡೆಯ ಎನ್‌ಐಎ ದಾಳಿಯಲ್ಲಿ ಏರ್‌ಗನ್, ಅದಕ್ಕೆ ಬಳಸುವ ಗುಂಡುಗಳು, ಹರಿತ ಆಯುಧ, ಕಬ್ಬಿಣದ ರಾಡ್‌ಗಳು, ವಿದ್ಯುನ್ಮಾನ ಉಪಕರಣಗಳು ಸಿಕ್ಕಿವೆ.

English summary
The National Investigation Agency (NIA) searched 30 locations in Bengaluru on Thursday in connection with the violence in the DJ Halli and KG Halli areas last month and arrested one Sayed Saddiq Ali.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X