ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಿಗೆ 15 ದಿನಗಳ ರಜೆ
ಬೆಂಗಳೂರು, ಏಪ್ರಿಲ್ 6: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಿಗೆ 15 ದಿನಗಳ ರಜೆ ಘೋಷಿಸಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ವಿವಿ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ 15 ದಿನಗಳ ಕಾಲ ರಜೆ ನೀಡಲಾಗಿದೆ.
ಈ ಕುರಿತು ಬೆಂಗಳೂರು ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಜ್ಯೋತಿ ಆದೇಶಿಸಿದ್ದಾರೆ, ಈ ಮೂಲಕ ಏಪ್ರಿಲ್ 20ರವರೆಗೂ ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿದಂತಾಗಿದೆ.

ಆನ್‌ಲೈನ್ ಮೂಲಕ ಪಾಠ
ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್‌ಗಳು ಕೂಡ 15 ದಿನಗಳ ಕಾಲ ಬಂದ್ ಆಗಿರಲಿವೆ. ಹಾಸ್ಟೆಲ್‌ನಲ್ಲಿ ವಾಸವಿರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ. ಬಾಕಿ ಉಳಿದಿರುವ ವಿಷಯಗಳನ್ನು ಆನ್‌ಲೈನ್ ಮೂಲಕ ಪಾಠ ಮಾಡುವಂತೆ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಪ್ರಾಯೋಗಿಕ ತರಗತಿಗಳು ಮಾತ್ರ ಎಂದಿನಂತೆ ನಡೆಯಲಿವೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ
ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ಆಫ್‌ಲೈನ್‌ನಲ್ಲೇ ನಡೆಯಲಿದ್ದು, ವಿಶ್ವವಿದ್ಯಾಲಯದ ವ್ಯಾಪ್ತಿಯ ಒಟ್ಟು 20 ವಿದ್ಯಾರ್ಥಿಗಳು ಹಾಗೂ ಪ್ರೊಫೆಸರ್‌ಗಳಿಗೆ ಕೊರೊನಾ ಸೋಂಕು ತಗುಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಲ್ಲಿ ಹೊಸದಾಗಿ 3728 ಮಂದಿಗೆ ಕೊರೊನಾ ಸೋಂಕು
ಬೆಂಗಳೂರಿನಲ್ಲಿ ಇಂದು 3728 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,50,759ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 1856 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,65,275ಕ್ಕೆ ಏರಿಕೆಯಾಗಿದೆ. ಇನ್ನು 42483 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 345 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Recommended Video

ರಾಜ್ಯದಲ್ಲಿ 5279 ಮಂದಿಗೆ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ಬರೋಬ್ಬರಿ 5279 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಇದರೊಂದಿಗೆ ಸೋಂಕಿತರ ಸಂಖ್ಯೆ 10,20,434ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications