ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಿಗೆ 15 ದಿನಗಳ ರಜೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 6: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಿಗೆ 15 ದಿನಗಳ ರಜೆ ಘೋಷಿಸಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ವಿವಿ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ 15 ದಿನಗಳ ಕಾಲ ರಜೆ ನೀಡಲಾಗಿದೆ.

ಬೆಂಗಳೂರಲ್ಲಿ 3728 ಸೇರಿ ಕರ್ನಾಟಕದಲ್ಲಿ 5279 ಕೊರೊನಾ ಸೋಂಕಿತರು ಪತ್ತೆಬೆಂಗಳೂರಲ್ಲಿ 3728 ಸೇರಿ ಕರ್ನಾಟಕದಲ್ಲಿ 5279 ಕೊರೊನಾ ಸೋಂಕಿತರು ಪತ್ತೆ

ಈ ಕುರಿತು ಬೆಂಗಳೂರು ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಜ್ಯೋತಿ ಆದೇಶಿಸಿದ್ದಾರೆ, ಈ ಮೂಲಕ ಏಪ್ರಿಲ್ 20ರವರೆಗೂ ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿದಂತಾಗಿದೆ.

ಆನ್‌ಲೈನ್ ಮೂಲಕ ಪಾಠ

ಆನ್‌ಲೈನ್ ಮೂಲಕ ಪಾಠ

ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್‌ಗಳು ಕೂಡ 15 ದಿನಗಳ ಕಾಲ ಬಂದ್ ಆಗಿರಲಿವೆ. ಹಾಸ್ಟೆಲ್‌ನಲ್ಲಿ ವಾಸವಿರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ. ಬಾಕಿ ಉಳಿದಿರುವ ವಿಷಯಗಳನ್ನು ಆನ್‌ಲೈನ್ ಮೂಲಕ ಪಾಠ ಮಾಡುವಂತೆ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಪ್ರಾಯೋಗಿಕ ತರಗತಿಗಳು ಮಾತ್ರ ಎಂದಿನಂತೆ ನಡೆಯಲಿವೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ

ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ

ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ಆಫ್‌ಲೈನ್‌ನಲ್ಲೇ ನಡೆಯಲಿದ್ದು, ವಿಶ್ವವಿದ್ಯಾಲಯದ ವ್ಯಾಪ್ತಿಯ ಒಟ್ಟು 20 ವಿದ್ಯಾರ್ಥಿಗಳು ಹಾಗೂ ಪ್ರೊಫೆಸರ್‌ಗಳಿಗೆ ಕೊರೊನಾ ಸೋಂಕು ತಗುಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಲ್ಲಿ ಹೊಸದಾಗಿ 3728 ಮಂದಿಗೆ ಕೊರೊನಾ ಸೋಂಕು

ಬೆಂಗಳೂರಲ್ಲಿ ಹೊಸದಾಗಿ 3728 ಮಂದಿಗೆ ಕೊರೊನಾ ಸೋಂಕು

ಬೆಂಗಳೂರಿನಲ್ಲಿ ಇಂದು 3728 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,50,759ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 1856 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,65,275ಕ್ಕೆ ಏರಿಕೆಯಾಗಿದೆ. ಇನ್ನು 42483 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 345 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Recommended Video

#Covid19Update: 24 ಗಂಟೆಗಳಲ್ಲಿ ದೇಶದಲ್ಲಿ 96,982 ಜನರಿಗೆ ಕೊರೊನಾ ಸೋಂಕು ದೃಢ | Oneindia Kannada
ರಾಜ್ಯದಲ್ಲಿ 5279 ಮಂದಿಗೆ ಕೊರೊನಾ ಸೋಂಕು

ರಾಜ್ಯದಲ್ಲಿ 5279 ಮಂದಿಗೆ ಕೊರೊನಾ ಸೋಂಕು

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ಬರೋಬ್ಬರಿ 5279 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಇದರೊಂದಿಗೆ ಸೋಂಕಿತರ ಸಂಖ್ಯೆ 10,20,434ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

English summary
Due To Rise In Covid19 Cases, Bangalore University Announced 15 Days Holiday For All UG And PG Students Till April 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X