Rishabh Pant: ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ ಆರೋಗ್ಯ ಮಾಹಿತಿ ಇಲ್ಲಿದೆ

ನವದೆಹಲಿ, ಡಿ. 30: ಉತ್ತರಾಖಂಡದ ರೂರ್ಕಿ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಆರೋಗ್ಯದ ಮಾಹಿತಿ ಇಲ್ಲಿದೆ.

ರಿಷಬ್ ಪಂತ ಅವರ ಹಣೆಯ ಮೇಲೆ ಪೆಟ್ಟು ಬಿದ್ದಿದೆ. ಬಲಗಡೆಯ ಮೊಣಕಾಲಿಗೆ ಗಾಯಗಳಾಗಿವೆ ಎಂಬ ಮಾಹಿತಿ ಹೊರಬಿದ್ದಿದೆ. ಅಪಘಾತದ ದೃಶ್ಯಗಳಲ್ಲಿ ಅವರ ತಲೆಯಿಂದ ರಕ್ತ ಸೋರುತ್ತಿರುವುದನ್ನು ಕಂಡು ಅನೇಕರು ಗಾಬರಿಯಾಗಿದ್ದರು.

ಅವರ ಆರೋಗ್ಯದ ಬಗ್ಗೆ ಆಸ್ಪತ್ರೆ ಸೇರಿದಂತೆ ಸಹ ಆಟಗಾರರು ಕೂಡ ಮಾಹಿತಿ ಹಂಚಿಕೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆದಷ್ಟು ಬೇಗ ರಿಷಬ್ ಪಂತ್ ಚೇತರಿಸಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Rishabh Pant Car Accident : Pant Has Cuts On Forehead, Ligament Tear In Knee

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಒಬ್ಬರೇ ಇದ್ದ ಕ್ರಿಕೆಟಿಗ ರಿಷಬ್ ಪಂತ್ ಬೆಂಕಿ ಹೊತ್ತಿಕೊಂಡ ನಂತರ ವಾಹನದಿಂದ ತಪ್ಪಿಸಿಕೊಳ್ಳಲು ಮರ್ಸಿಡಿಸ್ ವಿಂಡ್‌ಸ್ಕ್ರೀನ್ ಅನ್ನು ಒಡೆದು ಹೊರ ಬಂದಿದ್ದಾರೆ.

"ರಿಷಭ್ ಅವರ ಹಣೆಯ ಮೇಲೆ ಎರಡು ಗಾಯಗಳಾಗಿವೆ. ಅವರ ಬಲ ಮೊಣಕಾಲಿಗೆ ಏಟು ಬಿದ್ದಿದೆ. ಬಲಗಾಲಿನ ಹಿಮ್ಮಡಿ, ಪಾದದ ಮೇಲೆ ಹೆಚ್ಚು ಗಾಯವಾಗಿದೆ. ಇದರ ಜೊತೆಗೆ ಅವರ ಬೆನ್ನಿನ ಮೇಲೆ ಸವೆತದ ಗಾಯಗಳಾಗಿವೆ" ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ರಿಷಬ್ ಪಂತ್ ಅವರ ಸ್ಥಿತಿ ಸ್ಥಿರವಾಗಿದೆ. ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರ ಗಾಯಗಳ ಪ್ರಮಾಣವನ್ನು ನಿರ್ಧರಿಸಲು ಎಂಆರ್‌ಐ ಸ್ಕ್ಯಾನ್‌ ಮಾಡಲಾಗುತ್ತಿದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ರಿಷಭ್ ಪಂತ್ ಆರೋಗ್ಯದ ಕುರಿತು ವಿವಿಎಸ್ ಲಕ್ಷ್ಮಣ್ ಕೂಡ ಟ್ವೀಟ್ ಮಾಡಿದ್ದಾರೆ. "ರಿಷಭ್ ಪಂತ್‌ಗಾಗಿ ಪ್ರಾರ್ಥಿಸುತ್ತಿದ್ದೇನೆ. ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ರಿಷಭ್ ಪಂತ್‌ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಬೇಗ ಗುಣವಾಗಿ ಚಾಂಪಿಯನ್" ಎಂದು ಬರೆದಿದ್ದಾರೆ.

ಶುಕ್ರವಾರ ಮುಂಜಾನೆ ರಿಷಬ್ ಪಂತ್ ಉತ್ತರಾಖಂಡದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಅವಘಡ ಸಂಭವಿಸಿದೆ. ಹರಿದ್ವಾರ ಜಿಲ್ಲೆಯ ಮಂಗಳೌರ್ ಮತ್ತು ನರ್ಸನ್ ನಡುವೆ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿ ಸಿವಿಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ರಿಷಬ್ ಪಂತ್ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಗೆದ್ದಿದ್ದ ಭಾರತ ತಂಡದ ಭಾಗವಾಗಿದ್ದರು ರಿಷಬ್ ಪಂತ್. ಬಳಿಕ ಶ್ರೀಲಂಕಾ ವಿರುದ್ಧದ ಸರಣಿಗಾಗಿ ಪ್ರಕಟಿಸಲಾದ ಟಿ20ಐ ತಂಡದಿಂದ ಅವರನ್ನು ಇತ್ತೀಚೆಗೆ ಕೈಬಿಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+