ಸಂಚಾರ ನಿಯಮ ಇರುವುದು ಪೊಲೀಸರಿಗಲ್ಲ ಸ್ವಾಮಿ ನಿಮಗೆ
ಬೆಂಗಳೂರು, ಜು.20: ರಸ್ತೆ ಸುರಕ್ಷತಾ , ಸಂಚಾರಿ ನಿಯಮಗಳು ನಿಯಮಗಳು ಎಷ್ಟು ಮಂದಿಗೆ ಗೊತ್ತು, ಆ ನಿಯಮಗಳನ್ನು ಎಷ್ಟು ಜನ ಪಾಲನೆ ಮಾಡ್ತೀರಾ ಎಂದು ಪ್ರಶ್ನಿಸಿದರೆ ಯಾರಲ್ಲೂ ಉತ್ತರವಿಲ್ಲ.
ಪ್ರತಿನಿತ್ಯ ನಗರದಲ್ಲಿ ರಸ್ತೆ ಸುರಕ್ಷತಾ ನಿಯಮವನ್ನು ಉಲ್ಲಂಘಿಸಿ ನೂರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಹೆಲ್ಮೆಟ್ ಹಾಕಿಕೊಂಡು ಬೈಕ್ ಚಲಾಯಿಸಿ ಎಂದರೆ ಹೆಲ್ಮೆಟ್ನ್ನು ಕೈಯಲ್ಲಿಟ್ಟುಕೊಂಡು ಓಡಾಡುತ್ತಾರೆ, ಸಿಗ್ನಲ್ಲ್ಲಿ ಕೆಂಪು ಲೈಟ್ ಬಂದಾಗ ನಿಲ್ಲಿ ಎಂದರೆ ನಿಯಮವಿರುವುದು ನಮಗಲ್ಲ ಎನ್ನುವ ಹಾಗೆ ಕ್ರಾಸ್ ಮಾಡಿಕೊಂಡು ಹೋಗುತ್ತಾರೆ.

ಹಾಗಾದರೆ ಈ ಎಲ್ಲಾ ಸುರಕ್ಷತಾ ನಿಯಮವಿರುವುದು ಕೇವಲ ಪೊಲೀಸರಿಗಾಗಿಯೇ ಎನ್ನುವ ಅನುಮಾನಗಳು ಕಾಡುತ್ತಿವೆ. ಈ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಲು ನೂರಾರು ಅಭಿಯಾನಗಳನ್ನು ಹಮ್ಮಿಕೊಳ್ಳುತ್ತಿದೆ.

ನಗರದ ಹಲಸೂರು, ಟ್ರಿನಿಟಿ ಸರ್ಕಲ್, ಚಾಲುಕ್ಯ ಸರ್ಕಲ್ ಮುಂತಾದ ಕಡೆ ಹೆಲ್ಮೆಟ್ ಹಾಕದಿದ್ರೆ ಯಮ ಬರ್ತಾನೆ ಎನ್ನುವ ವಿಷಯವನ್ನಿಟ್ಟುಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಇನ್ನು ಕೆಲವೆಡೆ ಶಾಲಾ ಮಕ್ಕಳಿಗೆ ಈ ಸಂಚಾರ ನಿಯಮಗಳು, ಅದು ಯಾವ ರೀತಿಯಲ್ಲಿ ಉಲ್ಲಂಘನೆಯಾಗುತ್ತಿದೆ ಯಾವ ತಪ್ಪನ್ನು ಮಕ್ಕಳು ಮಾಡಬಾರದು ಎನ್ನುವ ಕುರಿತು ತಿಳಿ ಹೇಳಲಾಗುತ್ತಿದೆ.

ಇನ್ನು ಆಟೋ ಚಾಲಕರು, ಸಾರ್ವಜನಿಕರಿಗೆ ಸಂಚಾರ ನಿಯಮಗಳುಳ್ಳ ಕರಪತ್ರಗಳನ್ನು ಹಂಚಲಾಗುತ್ತಿದೆ, ಕರಪತ್ರದಲ್ಲಿರುವ ನಿಯಮಗಳನ್ನು ಓದಿರಿ, ಸಂಚಾರಿ ನಿಯಮವನ್ನು ಪಾಲಿಸಿರಿ ಎಂದು ಜಾಗೃತಿ ಮೂಡಿಸುತ್ತಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications