ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ರಸ್ತೆ ಸುರಕ್ಷತಾ ಮಾಸ ಅಂಗವಾಗಿ ಕಾಲ್ನಡಿಗೆ ಜಾಥಾ !

|
Google Oneindia Kannada News

ಬೆಂಗಳೂರು, ಫೆಬ್ರವರಿ 20: 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಬೆಂಗಳೂರು ಸಂಚಾರ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಆಯೋಜಿಸಿದ್ದ ಕಾಲ್ನಡಿಗೆ ಜಾಥಾಗೆ ಕ್ರಿಡಾಪಟು ಅರ್ಜುನ್ ದೇವಯ್ಯ ಚಾಲನೆ ನೀಡಿದರು. ಸಂಚಾರ ವಿಭಾಗದ ಸಿಬ್ಬಂದಿ ಹಾಗೂ ಸಾರಿಗೆ ಇಲಾಖೆಯ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಮಾಸ ಜಾಗೃತಿ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಭಾಗವಾಗಿ ಈ ಜಾಗೃತಿ ಸಪ್ತಾಹ ಹಮ್ಮಿಕೊಳ್ಳಲಾಗುತ್ತಿದೆ. ಕ್ರೀಡಾಪಟು ಅರ್ಜುನ್ ದೇವಯ್ಯ ಮಾತನಾಡಿ, ಜೀವ ಅಮೂಲ್ಯವಾದುದು. ಸಂಚಾರ ನಿಯಮಗಳನ್ನು ಎಲ್ಲರೂ ಕಡ್ಡಾಯ ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕು. ಪ್ರತಿ ಜೀವವೂ ಅಮೂಲ್ಯವೇ. ಅಫಘಾತಗಳು ಕಡಿಮೆಯಾಗಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಕರೆ ನೀಡಿದರು.

Road safety month walk than in Bengaluru

Recommended Video

ಸಿಲಿಕಾನ್ ಸಿಟಿಯಲ್ಲಿ ಇಂದು ವರುಣಾರ್ಭಟ-ವಾಹನ ಸವಾರರ ಪರದಾಟ | Oneindia Kannada

ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ, ಸಾರಿಗೆ ಇಲಾಖೆ ಆಯುಕ್ತ ಶಿವಕುಮಾರ್, ಅಂತಾರಾಷ್ಟ್ರೀಯ ಮಟ್ಟದ ಕ್ರಿಡಾಪಟು ಅರ್ಜುನ್ ದೇವಯ್ಯ ಮತ್ತಿತರರು ಪಾಲ್ಗೊಂಡಿದ್ದರು. ಪ್ರತಿ ವರ್ಷವೂ ಫೆಬ್ರವರಿ ಮಾಹೆಯಲ್ಲಿ ರಸ್ತೆ ಸುರಕ್ಷತಾ ಮಾಸ ಜಾಗೃತಿ ಅಭಿಯಾನ ಕೈಗೊಳ್ಳಲಾಗುತ್ತದೆ.

English summary
International athletic Arjuna devaiah inaugurated 32nd National Road safety month awareness program in Bengaluru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X