ಬೆಂಗಳೂರು ನೈಸ್ ರಸ್ತೆಯಲ್ಲಿ ದರೋಡೆ ವದಂತಿ:ದೂರು ನೀಡಿದ ಅಶೋಕ್ ಖೇಣಿ
ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ ನೈಸ್ ರಸ್ತೆಯಲ್ಲಿ ದರೋಡೆ ನಡೆಯುತ್ತೆ ಎನ್ನುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಶೋಕ್ ಖೇಣಿ ಈ ವಿಡಿಯೋ ವಿರುದ್ಧ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ನೈಸ್ ರಸ್ತೆಯಲ್ಲಿ ಈ ರೀತಿಯ ಯಾವುದೇ ಘಟನೆಗಳು ನಡೆದಿಲ್ಲ. ಇದುವರೆಗೂ ಇದರ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ, ಯಾವುದೇ ಪ್ರಕರಣ ಕೂಡ ದಾಖಲಾಗಿಲ್ಲ.
ಕಂಪನಿಗೆ ಕೆಟ್ಟ ಹೆಸರು ತರಲು ಈ ರೀತಿ ಮಾಡಿದ್ದಾರೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಪೊಲೀಸರಿಗೆ ಖೇಣಿ ಮನವಿ ಮಾಡಿದ್ದಾರೆ.

ವಿಡಿಯೋದಲ್ಲಿ ನೈಸ್ ರಸ್ತೆಯಲ್ಲಿ ಕಳ್ಳತನ ಮತ್ತು ದರೋಡೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡಿತ್ತು. ಮಾರಕಾಸ್ತ್ರಗಳನ್ನು ಹಿಡಿದಿದ್ದ ಯುವಕರ ತಂಡ ಕಾರೊಂದನ್ನು ಅಡ್ಡಗಟ್ಟಿ ದೋಚಲು ಮುಂದಾಗಿದ್ದರು.
ಆದರೆ ಕಾರು ಚಾಲಕ ಕೂಡಲೇ ಎಚ್ಚೆತ್ತು ಕಾರನ್ನು ರಿವರ್ಸ್ ಗೇರ್ ನಲ್ಲಿ ವೇಗವಾಗಿ ಹಿಂದಕ್ಕೆ ತೆಗೆದುಕೊಂಡು ಹೋಗಿದ್ದ. ಕಾರನ್ನು ಅಟ್ಟಾಡಿಸಿದ್ದ ದುಷ್ಕರ್ಮಿಗಳು ಕಾರಿನ ಮೇಲೆ ದೊಣ್ಣೆಗಳನ್ನು ಎಸೆದಿದ್ದರು. 25 ಸೆಕೆಂಡ್ ಗಳ ಈ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.
ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಿಬಿಟ್ಟಿರುವ ವಿಡಿಯೋ ,ಆಡಿಯೋದಲ್ಲಿ ಕಲ್ಲು ಎಸೆಯುತ್ತಾರೆ, ನೈಸ್ ರಸ್ತೆ ಬಳಿ ಕಾದು ಕಳಿತು ಕಲ್ಲು ಎಸೆದು ಗಮನ ಬೇರೆಡೆ ಸೆಳೆದು (ಡೈವರ್ಟ್) ಮಾಡುತ್ತಾರೆ. ಕಾರು ನಿಲ್ಲಿಸಿದ ತಕ್ಷಣ ತಮ್ಮ ವರಸೆಯನ್ನು ಕಳ್ಳರು ತೋರಿಸುತ್ತಾರೆ ಎನ್ನುವ ಸಂದೇಶ ಹರಿಬಿಡಲಾಗಿದೆ.
Recommended Video
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ











Click it and Unblock the Notifications