ರೋಹಿಣಿ ಅವರಿಗೆ ಅಧಿಕಾರ ಹಸ್ತಾಂತರಿಸಿದ ಡಿಸಿಪಿ ಅಣ್ಣಮಲೈ
ಬೆಂಗಳೂರು, ಜೂನ್ 10 : ರೋಹಿಣಿ ಕಟೋಚ್ ಸೆಪಟ್ ಅವರು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದರು. ಶುಕ್ರವಾರ ಡಿಸಿಪಿಯಾಗಿದ್ದ ಅಣ್ಣಾಮಲೈ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು.
ಸೋಮವಾರ ರೋಹಿಣಿ ಕಟೋಚ್ ಸೆಪಟ್ ಅವರಿಗೆ ಕೆ.ಅಣ್ಣಾಮಲೈ ಅವರು ಅಧಿಕಾರ ಹಸ್ತಾಂತರ ಮಾಡಿದರು. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರೋಹಿಣಿ ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು.
ರೋಹಿಣಿ ಕಟೋಚ್ ಸೆಪಟ್ ಅವರು ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅವರನ್ನು ಅಣ್ಣಾಮಲೈ ಅವರ ರಾಜೀನಾಮೆ ಬಳಿಕ ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.

ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದ ಅಣ್ಣಾಮಲೈ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಆದರೆ, ಅವರಿಗೆ ಯಾವುದೇ ಹುದ್ದೆಯನ್ನು ನೀಡಿಲ್ಲ. ಅವರು ಈಗಾಗಲೇ ರಾಜೀನಾಮೆ ನೀಡಿದ್ದು, ಅದು ಇನ್ನೂ ಅಂಗೀಕಾರಗೊಂಡಿಲ್ಲ.
ರೋಹಿಣಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಕಚೇರಿಯ ಸಿಬ್ಬಂದಿ ಅಣ್ಣಾಮಲೈ ಅವರೊಂದಿಗೆ ಸೆಲ್ಫೀ ತೆಗಿಸಿಕೊಂಡು ಸಂಭ್ರಮಪಟ್ಟರು. ಪೊಲೀಸ್ ಕೆಲಸಕ್ಕೆ ರಾಜೀನಾಮೆ ನೀಡಿರುವ ಅಣ್ಣಾಮಲೈ ಅವರು ರಾಜಕೀಯ ಅಥವ ಕೃಷಿಯಲ್ಲಿ ತೊಡಗುವ ಸಾಧ್ಯತೆ ಇದೆ.












Click it and Unblock the Notifications