ಬ್ಯಾಂಕಿನೊಳಗೆ ನುಗ್ಗಿ ರೌಡಿ ಶೀಟರ್ ಬಬ್ಲಿ ಬರ್ಬರ ಹತ್ಯೆ
ಬೆಂಗಳೂರು, ಜು. 19: ರಾಜಧಾನಿಯಲ್ಲಿ ಹರಿಯುತ್ತಿರುವ ಪಾತಕ ಲೋಕದ ನೆತ್ತರು ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಬ್ಯಾಂಕ್ ಒಳಗೆ ನುಗ್ಗಿರುವ ಕಿರಾತಕರು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ನನ್ನು ಸೋಮವಾರ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಆಡುಗೋಡಿ ಪೊಲೀಸ್ ಠಾಣೆ ರೌಡಿ ಶೀಟರ್ ಬಬ್ಲಿ ಕೊಲೆಯಾದ ವ್ಯಕ್ತಿ. ಕೋರಮಂಗಲದ 8ನೇ ಬ್ಲಾಕ್‌ನಲ್ಲಿರುವ ಯೂನಿಯನ್ ಬ್ಯಾಂಕ್‌ನೊಳಗೆ ಈ ಕೃತ್ಯ ನಡೆದಿದ್ದು, ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಬ್ಯಾಂಕ್‌ನೊಳಗೆ ನುಗ್ಗಿ ಒಬ್ಬ ರೌಡಿಯನ್ನು ಸಾರ್ವಜನಿಕರ ಎದರುಲ್ಲಿ ಕೊಲೆ ಮಾಡಿರುವುದು ರಾಜ್ಯದ ಪೊಲೀಸ್ ವ್ಯವಸ್ಥೆಯ ಮೇಲಿನ ನಂಬಿಕೆ ಕಳೆದುಕೊಳ್ಳುವಂತಾಗಿದೆ. ಘಟನಾ ಸ್ಥಳಕ್ಕೆ ಆಗ್ನೇಯ ವಿಭಾಗದ ಡಿಸಿಪಿ ಜ್ಯೋಷಿ ಶ್ರೀನಾಥ್ ಮಹದೇವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡಸಿದ್ದಾರೆ.

ಮತಾಂತರ ಮಾಡ್ತಿದ್ದ ಆರೋಪ: ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿರುವ ಬಬ್ಲಿ ಇತ್ತೀಚೆಗೆ ಅಪರಾಧ ಚಟುವಟಿಕೆಯಿಂದ ದೂರ ಉಳಿದಿದ್ದ. ಕೆಲವು ಗುತ್ತಿಗೆ ಕಾಮಗಾರಿ ನಡೆಸುತ್ತಿದ್ದ. ಮಿಗಿಲಾಗಿ ಈತ ರಾಜೇಂದ್ರ ಸ್ಲಂನಲ್ಲಿ ಕಚೇರಿ ತೆರೆದು, ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಿಸುತ್ತಿದ್ದ ಎನ್ನಲಾಗಿದೆ.

Recommended Video
ಬಬ್ಲಿ ಕೂಡ ಮತಾಂತರಗೊಂಡಿದ್ದು, ಒಬ್ಬ ವ್ಯಕ್ತಿಯನ್ನು ಮತಾಂತರ ಮಾಡಿದರೆ ಮೂರು ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ಎನ್ನಲಾಗಿದೆ. ಇದನ್ನೇ ವ್ಯಾಪಾರ ಮಾಡಿಕೊಂಡಿದ್ದ ಬಬ್ಲಿ ಮೊದಲು ಹಿಂದೂವಾಗಿದ್ದ. ಆನಂತರ ಕ್ರಿಶ್ಚಿಯನ್ ಆಗಿ ಮತಾಂತರಗೊಂಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆಯಾಗಿರಬಹುದೇ ಅಥವಾ ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಿ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.












Click it and Unblock the Notifications