• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಲ್ಲಿ ಹಾಡಹಗಲೇ ಕುಖ್ಯಾತ ರೌಡಿ ಲಕ್ಷ್ಮಣ ಹತ್ಯೆ

|

ಬೆಂಗಳೂರು, ಮಾರ್ಚ್ 7: ಮತ್ತೊಮ್ಮೆ ಯಶವಂತಪುರ ಜನತೆಯನ್ನು ಬೆಚ್ಚಿಬೀಳಿಸುವ ಘಟನೆಯೊಂದು ಬೆಂಗಳೂರಲ್ಲಿ ನಡದಿದೆ. ಕುಖ್ಯಾತ ರೌಡಿ ಲಕ್ಷ್ಮಣನನ್ನು ಹಾಡಹಗಲೇ ಹತ್ಯೆ ಮಾಡಲಾಗಿದೆ.

ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

ಕುಖ್ಯಾತ ರೌಡಿ ಲಕ್ಷ್ಮಣ ಅಲಿಯಾಸ್ ರಾಮ ಲಕ್ಷ್ಮಣನನ್ನು ಯಶವಂತಪುರ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಬಳಿ ಮಧ್ಯಾಹ್ನ 12.45ರ ಸುಮಾರಿಗೆ ಎದುರಾಳಿ ಗುಂಪಿನ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಇತ್ತೀಚೆಗಷ್ಟೇ ಲಕ್ಷ್ಮಣ ಸಿಸಿಬಿಯ ಪರೇಡ್ ನಲ್ಲೂ ಭಾಗಿಯಾಗಿದ್ದ.ಕೊಲೆಯಾಗಿರುವ ಲಕ್ಷ್ಮಣನ ವಿರುದ್ಧ ಕೆಂಗೇರಿ, ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದವು.

ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

ಕಣ್ಣಿಗೆ ಕಾರದ ಪುಡಿ ಎರಚಿ , ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯದಲ್ಲೂ ರೌಡಿ ಲಕ್ಷ್ಮಣ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆ, ಕೊಲೆ ಯತ್ನ, ದರೋಡೆ, ಜಮೀನು ಕಬಳಿಕೆ ಸೇರಿದಂತೆ 20ಕ್ಕೂ ಹೆಚ್ಚು ಅಪರಾಧಗಳಲ್ಲಿ ಈತ ಭಾಗಿಯಾಗಿದ್ದ. ಎರಡು ದಿನಗಳ ಹಿಂದೆ ಆತ ಜೈಲಿನಿಂದ ಬಿಡುಗಡೆಯಾಗಿದ್ದ.

English summary
In a daring day light incident rowdy sheeter Lakshmana was brutally murdred in the city on Thursday by a gang who attacked him with lethal weapons after spraying chilly powder.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X