ಬೆಂಗಳೂರಲ್ಲಿ ರಾತ್ರೋ ರಾತ್ರಿ ರೌಡಿ ಶೀಟರ್ ಪ್ರಶಾಂತ್ ಬರ್ಬರ ಕೊಲೆ
ಬೆಂಗಳೂರು, ಫೆಬ್ರವರಿ 28: ನಗರದಲ್ಲಿ ರಾತ್ರೋ ರಾತ್ರಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಲಾಗಿದೆ. ಹೊರಮಾವಿನ ವಿಚಾರ ಮಾಡಲಾಗಿದೆ.
ಹೊರಮಾವಿನ ಇಂಡಸ್ ಬ್ಯಾಂಕ್ ಎಟಿಎಂ ಬಳಿ ರೌಡಿಶೀಟರ್ ಕೊಲೆಯಾಗಿದೆ. ಹಳೆ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ. ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿದ ಬಳಿಕ ದುಷ್ಕರ್ಮಿಗಳು ಪ್ರಶಾಂತ್ನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ.
ಕಾರಿನಲ್ಲಿ ಬಂದಿದ್ದ ಐದಾರು ಮುಸುಕುಧಾರಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಪ್ರಶಾಂತ್ ಎಂಬಾತನನ್ನು ಹತ್ಯೆ ಮಾಡಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಅಂಬೇಡ್ಕರ ಆಸ್ಪತ್ರೆಗೆ ರವಾನಿಸಲಾಗಿದೆ.

ಹಾಗೆಯೇ ರೌಡಿ ಶೀಟರ್ ದಿನೇಶ್ ಮೇಲೆ ಪೊಲೀಸರ ಗುಂಡಿನ ದಾಳಿ ನಡೆದಿದೆ. ಹೆಣ್ಣೂರು ರೈಲ್ವೆ ನಿಲ್ದಾಣದ ಬಳಿ ಇರುವ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಲು ಅಲ್ಲಿಗೆ ತೆರಳಿದ್ದರು, ಪೊಲೀಸರ ಮೇಲೆ ದಾಳಿ ನಡೆಸಿದಾಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.












Click it and Unblock the Notifications