ಬೆಂಗಳೂರಲ್ಲಿ ಇನ್ಸ್ ಪೆಕ್ಟರ್ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ
ಬೆಂಗಳೂರು, ಆಗಸ್ಟ್ 26: ನಗರದಲ್ಲಿ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ಒಂದು ಪುಡಿರೌಡಿ ಗ್ಯಾಂಗ್ ಶುಕ್ರವಾರ ಡಿ.ಜೆ. ಹಳ್ಳಿಯಲ್ಲಿ ನದೀಮ್ ಗ್ಯಾಂಗ್ ರೌಡಿಶೀಟರ್ ಉಮರ್ ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ. ಇದನ್ನು ತಡೆಯಲು ಯತ್ನಿಸಿದ ಡಿ.ಜೆ. ಹಳ್ಳಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಯಾಜ್ ಅಹಮ್ಮದ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ನಡು ರಸ್ತೆಯಲ್ಲೇ ಮಾರಕಾಸ್ತ್ರಗಳೊಂದಿಗೆ ಉಮರ್ ನನ್ನು ಅಟ್ಟಾಡಿಸಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಡಿ.ಜೆ. ಹಳ್ಳಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಯಾಜ್ ಅಹಮ್ಮದ್ ತಡೆಯಲು ಹೋಗಿದ್ದಾರೆ.
ಆಗ ಪುಡಿ ರೌಡಿಗಳು ನಯಾಜ್ ಅಹಮ್ಮದ್ ಅವರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ನಯಾಜ್ ರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.












Click it and Unblock the Notifications