ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೆರವಣಿಗೆ ಬೆಂಗಳೂರು ಪೊಲೀಸರ ಮಹತ್ವದ ಸೂಚನೆ! ಆರ್‌ಸಿಬಿ ಅಭಿಮಾನಿಗಳೇ ಗಮನಿಸಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಆರ್‌ಸಿಬಿ ಅಭಿಮಾನಿಗಳಿಗೆ ಸಣ್ಣ ನಿರಾಸೆ ಎದುರಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅದ್ಧೂರಿ ಮೆರವಣಿಗೆಗೆ ಬ್ರೇಕ್ ಹಾಕಲಾಗಿದೆ. ಕಾನೂನು ಹಾಗೂ ಭದ್ರತೆಯ ದೃಷ್ಟಿಯಿಂದ ಮೆರವಣಿಗೆ ಇರುವುದಿಲ್ಲ ಎಂದು ರಾಜ್ಯ ಸರ್ಕಾರವು ಹೇಳಿದೆ. ಆದರೆ, ಆರ್‌ಸಿಬಿ ಕಪ್‌ನೊಂದಿಗೆ ಬೆಂಗಳೂರಿನಲ್ಲಿ ಮೆರವಣಿಗೆ ನಡೆಸಬೇಕು ಎನ್ನುವುದು ಲಕ್ಷಾಂತರ ಜನ ಆರ್‌ಸಿಬಿ ಅಭಿಮಾನಿಗಳ ಕನಸಾಗಿತ್ತು. ಆದರೆ, ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮೆರವಣಿಗೆಯನ್ನು ರದ್ದುಪಡಿಸಿರುವುದಾಗಿ ಕರ್ನಾಟಕ ಸರ್ಕಾರವು ಹೇಳಿದೆ. ಆರ್‌ಸಿಬಿ ತಂಡ ಬೆಂಗಳೂರಿಗೆ ಬರುವುದು ಹಾಗೂ ಸಂಭ್ರಮಾಚರಣೆಯ ಬಗ್ಗೆ ಬೆಂಗಳೂರು ಪೊಲೀಸರು ನೀಡಿರುವ ಮುನ್ಸೂಚನೆಗಳೇನು ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಅವರು ಹೇಳಿದ್ದೇನು ಎನ್ನುವ ವಿವರ ನೋಡೋಣ.
ತೆರೆದ ವಾಹನದಲ್ಲಿ ಆರ್‌ಸಿಬಿ ಮೆರವಣಿಗೆ ಇಲ್ಲ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರು ಸಂಚಾರ ಎಚ್ಚರಿಕೆ
* ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ 5 ರಿಂದ 6 ರವರೆಗೆ ಆರ್‌ಸಿಬಿ ತಂಡಕ್ಕೆ ಅಭಿನಂದನಾ ಕಾರ್ಯಕ್ರಮ.
* ಟಿಕೆಟ್ / ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಇರಲಿದೆ.
* ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ.
* ಸೀಮಿತ ಪಾರ್ಕಿಂಗ್ ಇರುವುದರಿಂದ, ಸಾರ್ವಜನಿಕರು ಮೆಟ್ರೋ ಹಾಗೂ ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚನೆ ನೀಡಲಾಗಿದೆ.
* ಸಾರ್ವಜನಿಕರು ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ (ಇಂದು, ಬುಧವಾರ) ಬೆಂಗಳೂರು ಕೇಂದ್ರ ಪ್ರದೇಶದಲ್ಲಿ ಸಂಚಾರವನ್ನ ತಪ್ಪಿಸಲು ಬೆಂಗಳೂರು ಸಂಚಾರ ಪೊಲೀಸರು ಹೇಳಿದ್ದಾರೆ.
ಬೆಂಗಳೂರು ಸಂಚಾರ ಪೊಲೀಸರ ಟ್ವೀಟ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕ್ರಿಕೆಟ್ ತಂಡವು 2025 ರ ಐಪಿಎಲ್ ಟ್ರೋಫಿಯನ್ನು ಗೆದ್ದಿದೆ. ತಂಡವು ಟ್ರೋಫಿಯೊಂದಿಗೆ 04-06-2025 ರಂದು ಬೆಂಗಳೂರಿಗೆ ಆಗಮಿಸಲಿದೆ. ಈ ಸಂದರ್ಭದಲ್ಲಿ, ಎಲ್ಲಾ RCB ಆಟಗಾರರಿಗಾಗಿ ಇಂದು ಸಂಜೆ 5:00 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ KSCA ವಿಶೇಷ ಅಭಿನಂದನಾ ಸಮಾರಂಭವನ್ನು ಆಯೋಜಿಸಿದೆ.
"TRAFFIC ADVISORY"
— DCP TRAFFIC WEST (@DCPTrWestBCP) June 4, 2025
The Public is Requested To Cooperate @CPBlr @Jointcptraffic @blrcitytraffic @BlrCityPolice pic.twitter.com/vY5RNiH49g
ಟಿಕೆಟ್‌ಗಳು ಮತ್ತು ಪಾಸ್‌ಗಳನ್ನು ಹೊಂದಿರುವವರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶವನ್ನು ನೀಡಲಾಗುತ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೀಮಿತ ಪಾರ್ಕಿಂಗ್ ಸೌಲಭ್ಯ ಲಭ್ಯವಿರುವುದರಿಂದ, ಕಾರ್ಯಕ್ರಮಕ್ಕೆ ಹಾಜರಾಗುವವರು ಸಾರ್ವಜನಿಕ ಸಾರಿಗೆ ಮತ್ತು ಮೆಟ್ರೋವನ್ನು ಬಳಸಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.












Click it and Unblock the Notifications