ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಅಭ್ಯರ್ಥಿ ಮುನಿರತ್ನ ಕಣ್ಣೀರಿನ ಕಥೆ ಹೇಳಿದ ಡಿಕೆಶಿ!

|
Google Oneindia Kannada News

ಬೆಂಗಳೂರು, ಅ. 29: ಉಪ ಚುನಾವಣೆ ನಡೆಯುತ್ತಿರುವ ರಾಜರಾಜೇಶ್ವರಿ ನಗರದಲ್ಲಿ ನಿನ್ನೆಯಿಂದ ಕಣ್ಣೀರಿನದ್ದೆ ಮಾತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಾತಿನಿಂದ ನೊಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಕಣ್ಣೀರು ಹಾಕಿದ್ದರು. ಬಳಿಕ ತಮ್ಮ ಸ್ಥಿತಿಯನ್ನು ನೆನೆದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಕೂಡ ಕಣ್ಣೀರು ಹಾಕಿದ್ದರು. ಇದೀಗ ಅವರಿಬ್ಬರ ಕಣ್ಣೀರನ್ನು ಒರೆಗೆ ಹಚ್ಚುವ ಕೆಲಸ ಪ್ರಚಾರದಲ್ಲಿ ಶುರುವಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರಿಗೂ, ಮುನಿರತ್ನ ಕಣ್ಣೀರಿಗೂ ವ್ಯತ್ಯಾಸ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿದರು. ನಮ್ಮ ಅಭ್ಯರ್ಥಿ ಕುಸುಮಾ ಅವರು ತಮ್ಮ ಜೀವನ ನೆನೆಸಿಕೊಂಡು, ತಮಗಾದ ನಷ್ಟ, ನೋವುಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಆದರೆ, ಮುನಿರತ್ನ ಅವರು ತಮಗೆ ಇಂತಾ ಸ್ಥಿತಿ ತಂದುಕೊಂಡನಲ್ಲಾ ಅಂತಾ ಕಣ್ಣೀರು ಹಾಕುತ್ತಿದ್ದಾರೆ. ಕಾಂಗ್ರೆಸ್ ನನ್ನ ಉಸಿರು, ನನ್ನ ರಕ್ತ ಅಂತಾ ಹೇಳಿದ್ದ ಮುನಿರತ್ನ ಈಗ ಬಿಜೆಪಿಯಲ್ಲಿ ಮತ ಕೇಳುತ್ತಿದ್ದೇನಲ್ಲಾ ಅಂತಾ ನೆನೆಸಿಕೊಂಡು ಅತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಿದರು.

ಮುನಿರತ್ನ ಉತ್ತಮ ಆ್ಯಕ್ಟರ್

ಮುನಿರತ್ನ ಉತ್ತಮ ಆ್ಯಕ್ಟರ್

ಮುನಿರತ್ನ ಉತ್ತಮ ಆ್ಯಕ್ಟರ್, ಪ್ರೋಡ್ಯುಸರ್ ಅಲ್ವಾ? ಜನರು ಕೇಳುವ ಪ್ರಶ್ನೆಗೆ ಉತ್ತರ ಕೊಡಲಾಗದೆ ಕಣ್ಣೀರು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧ ಭಾಷಣ ಮಾಡಿದ್ದರು, ಈಗ ಅವರ ಪಕ್ಷ ಸೇರಿಕೊಂಡು ಚುನಾವಣೆ ಎದುರಿಸಬೇಕಾಗಿದೆಯಲ್ಲ ಅಂತಾ ಕಣ್ಣೀರು ಹಾಕಿರಬಹುದು.

ಸಿದ್ದರಾಮಯ್ಯ ಹೇಳಿಕೆಗೆ ಕಣ್ಣೀರು ಹಾಕಿದ ಬಿಜೆಪಿ ಅಭ್ಯರ್ಥಿ ಮುನಿರತ್ನ!ಸಿದ್ದರಾಮಯ್ಯ ಹೇಳಿಕೆಗೆ ಕಣ್ಣೀರು ಹಾಕಿದ ಬಿಜೆಪಿ ಅಭ್ಯರ್ಥಿ ಮುನಿರತ್ನ!

ಹಿಂದೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತಿದ್ದರು, ಈಗ ಡಿ.ಕೆ. ಶಿವಕುಮಾರ್ ಅವರ ಹಿಂದೆ ಯಾರೂ ಇಲ್ಲ ಅಂತಾ ಹೇಳಿದ್ದಾರೆ. ಒಟ್ಟಾರೆ ಅವರು ಪರಿಸ್ಥಿತಿಗೆ ತಕ್ಕಂತೆ ಅಭಿನಯಿಸುವ ಉತ್ತಮ ನಟ ಎಂದರು.

ನೋಡುತ್ತಿರುವ ಜನ ದಡ್ಡರಲ್ಲ!

ನೋಡುತ್ತಿರುವ ಜನ ದಡ್ಡರಲ್ಲ!

ಆದರೆ ಇದನ್ನೆಲ್ಲಾ ನೋಡುತ್ತಿರುವ ಜನ ದಡ್ಡರಲ್ಲ. ನಾನು ಕಣ್ಣೀರು ಹಾಕಿದರೂ ಬೇರೆಯವರು ಹಾಕಿದರೂ ಏನು ಆಗುವುದಿಲ್ಲ. ಈಗ ಕಣ್ಣೀರು ಹಾಕಿ ಪ್ರಯೋಜನ ಇಲ್ಲ.

ಇಂದು ದೇವಾಲಯಕ್ಕೆ ಹೋಗಿ ದೇವರ ಆಶೀರ್ವಾದ ಪಡೆದೆ ಹಾಗೂ ಚರ್ಚ್‌ಗೆ ಭೇಟಿ ಕೊಟ್ಟು ಪಾದ್ರಿಗಳನ್ನು ಭೇಟಿ ಮಾಡಿದೆ. ನೀವು ಆಶೀರ್ವಾದ ಮಾಡಿದರೂ ನಾನು ತೆಗೆದುಕೊಳ್ಳುತ್ತೇನೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದರು.

ನ. 3ರ ನಂತರ ಧರ್ಮದ ವಿಚಾರ

ನ. 3ರ ನಂತರ ಧರ್ಮದ ವಿಚಾರ

ಕಪಾಲಿ ಬೆಟ್ಟದ ವಿಚಾರವಾಗಿ ಬಿಜೆಪಿ ನಾಯಕರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್ ಅವರು ನೆವಂಬರ್‌ 3ರಂದು ನಡೆಯುವ ಚುನಾವಣೆ ಆಗಲಿ. ಆಮೇಲೆ ಧರ್ಮದ ವಿಚಾರವಾಗಿ ಮಾತನಾಡೋಣ ಎಂದರು. ಡಿ.ಕೆ. ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಅವರೂ ಕೂಡ ನಿನ್ನೆ (ಅ. 28) ಇದೇ ಮಾತನ್ನು ಹೇಳಿದ್ದರು.

ಯಾರ್ರಿ ಅವನು ಮುನಿರತ್ನ? ನಮಗೆ ಗಾಡ್‌ಫಾದರ್‌ ಆಗೋದಕ್ಕೆ!ಯಾರ್ರಿ ಅವನು ಮುನಿರತ್ನ? ನಮಗೆ ಗಾಡ್‌ಫಾದರ್‌ ಆಗೋದಕ್ಕೆ!

ಈ ಹಿಂದೆ ಆಡಿದ ಮಾತಿಗೆ ಬದ್ಧರಾ?

ಈ ಹಿಂದೆ ಆಡಿದ ಮಾತಿಗೆ ಬದ್ಧರಾ?

'ಮುನಿರತ್ನ ಅವರ ವಿರುದ್ಧ ಪ್ರಧಾನಿ ಮೋದಿ ಅವರು, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಡಿದ ಮಾತಿಗೆ ಈಗಲೂ ಬದ್ಧರಾಗಿದ್ದಾರಾ ಇಲ್ಲವಾ? ಎಂಬುದನ್ನು ಕೇಳಿ. ಇನ್ನು ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.

English summary
BJP candidate Munirathna's tears in RR Nagara by election campaign analyzed by KPCC president DK Shivakumar, Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X