ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ಅನರ್ಹಗೊಳಿಸಲು ದೂರು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 20 : ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಚುನಾವಣೆಗೆ ಮುನಿರತ್ನ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದ ನಿಯೋಗ ಮಂಗಳವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಉಪ ಚುನಾವಣೆ ವೇಳೆ ಮತದಾರರಿಗೆ ಆಮಿಷವನ್ನು ಬಿಜೆಪಿ ಅಭ್ಯರ್ಥಿ ವೊಡ್ಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ನಾಮಪತ್ರ ವಾಪಸ್! ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ನಾಮಪತ್ರ ವಾಪಸ್!

ಬಿಜೆಪಿ ಅಭ್ಯರ್ಥಿ ಮುನಿರತ್ನ ಅಕ್ರಮವಾಗಿ ಮತದಾರರ ಗುರುತಿನ ಚೀಟಿಯನ್ನು ಸಂಗ್ರಹ ಮಾಡಿದ್ದಾರೆ. ತಲಾ 5 ಸಾವಿರ ರೂ. ನೀಡಿ ಗುರುತಿನ ಚೀಟಿಯನ್ನು ಸಂಗ್ರಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಆಯೋಗಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರ್. ಆರ್. ನಗರ ಚುನಾವಣೆ; ವೋಟರ್ ಐಡಿ ಕೊಡಿ ಎಂದು ಬೇಡಿಕೆ!ಆರ್. ಆರ್. ನಗರ ಚುನಾವಣೆ; ವೋಟರ್ ಐಡಿ ಕೊಡಿ ಎಂದು ಬೇಡಿಕೆ!

RR Nagar By Election: KPCC Writes To CEO Seeking Disqualification Of BJP Candidate Munirathna

ಮುನಿರತ್ನ ಅವರು ಹಣ ಮತ್ತು ಉಡುಗೊರೆಗಳ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ. ಆದ್ದರಿಂದ, ಅವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಆರ್. ಆರ್. ನಗರ ಉಪ ಚುನಾವಣೆ ಚಿತ್ರಣ; ಗೆಲುವಿಗಾಗಿ ಪಕ್ಷಗಳ ಕಸರತ್ತು! ಆರ್. ಆರ್. ನಗರ ಉಪ ಚುನಾವಣೆ ಚಿತ್ರಣ; ಗೆಲುವಿಗಾಗಿ ಪಕ್ಷಗಳ ಕಸರತ್ತು!

ನವೆಂಬರ್ 3ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿ. ಕಾಂಗ್ರೆಸ್‌ನಿಂದ ಎಚ್‌. ಕುಸುಮಾ, ಜೆಡಿಎಸ್‌ನಿಂದ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ.

ನವೆಂಬರ್ 3ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ. ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ.

ವೋಟರ್ ಐಡಿ ಕೊಡಬೇಡಿ : "ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನಲೆಯಲ್ಲಿ ನಿಮ್ಮ ವೋಟರ್ ಐಡಿ ಮತ್ತು ಮೊಬೈಲ್‌ ನಂಬರ್‌ಗಳನ್ನು ಯಾರಿಗೂ ನೀಡಬೇಡಿ. ವೋಟರ್ ಐಡಿ ನೀಡುವಂತೆ ಕೇಳುತ್ತಿರುವ ಬಗ್ಗೆ ದೂರುಗಳು ಬರುತ್ತವೆ" ಎಂದು ಬಿಬಿಎಂಪಿ ಆಯುಕ್ತ ಮತ್ತು ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್ ಜನರಿಗೆ ಮನವಿ ಮಾಡಿದ್ದರು.

Recommended Video

ಛಿ.. ಥೂ ಅಂತ ಬೈಯೋಕು ಮುಂಚೆ ಈ ವಿಷಯ ನೋಡಿ | Mumbai Heavy Rains | Oneindia Kannada

"ಮತದಾರರ ಗುರುತಿನ ಚೀಟಿ, ದೂರವಾಣಿ ಸಂಖ್ಯೆ ಕೇಳುವುದು ಅಪರಾಧವಾಗಿದೆ. ಅಪರಾಧ ಸಾಬೀತಾದರೆ ವ್ಯಕ್ತಿಗೆ ಒಂದು ವರ್ಷ ಜೈಲು ಶಿಕ್ಷೆಯಾಗುತ್ತದೆ. ಈ ಬಗ್ಗೆ ನಿಗಾ ಇಡುವಂತೆ ಪೊಲೀಸರಿಗೆ ಸಹ ಸೂಚನೆ ಕೊಡಲಾಗಿದೆ" ಎಂದು ಮಂಜುನಾಥ ಪ್ರಸಾದ್ ಹೇಳಿದ್ದಾರೆ.

English summary
KPCC writes to Cheif Election Commissioner seeking disqualification of BJP's RR Nagar assembly by-poll candidate Munirathna, alleging that he is unduly influencing voters with money and gifts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X