ಆರ್. ಆರ್. ನಗರ ಉಪ ಚನಾವಣೆ; ಮುನಿರತ್ನಗೆ ಆರಂಭಿಕ ಮುನ್ನಡೆ
ಬೆಂಗಳೂರು, ನವೆಂಬರ್ 10 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಮುನಿರತ್ನ ಅವರು ಆರಂಭಿಕ ಮುನ್ನಡೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ 2 ಮತ್ತು ಜೆಡಿಎಸ್ 3ನೇ ಸ್ಥಾನದಲ್ಲಿದೆ. 2 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ.
Recommended Video
ಮಂಗಳವಾರ ಬೆಳಗ್ಗೆ ಆರ್. ಆರ್. ನಗರ ಕ್ಷೇತ್ರದ ಮತ ಎಣಿಕೆ ಕಾರ್ಯ ಹಲಗೆವಡೇರಹಳ್ಳಿ ಮುಖ್ಯ ರಸ್ತೆಯಲ್ಲಿರುವ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ನಡೆಯುತ್ತಿದೆ. ಮತ ಎಣಿಕೆಗೆ 4 ಕೊಠಡಿ 28 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ.

ಅಂಚೆಮತಗಳ ಎಣಿಕೆಯಿಂದಲೂ ಬಿಜೆಪಿಯ ಮುನಿರತ್ನ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಸದ್ಯದ ಮಾಹಿತಿಯಂತೆ ಮುನಿರತ್ನ ಅವರು 5,716 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್‌ನ ಹೆಚ್. ಕುಸುಮಾ 2ನೇ ಸ್ಥಾನದಲ್ಲಿದ್ದಾರೆ.
ಬೆಳಗ್ಗೆ 9.20ರ ಮಾಹಿತಿಯಂತೆ ಮುನಿರತ್ನ 11,675, ಹೆಚ್. ಕುಸುಮಾ 5,956, ಜೆಡಿಎಸ್‌ನ ಕೃಷ್ಣಮೂರ್ತಿ 2500 ಮತಗಳನ್ನು ಪಡೆದಿದ್ದಾರೆ. ಅಂಚೆ ಮತಗಳ ಎಣಿಕೆ ಪೂರ್ಣಗೊಂಡು ಇವಿಎಂನಲ್ಲಿ 2 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ.
ಮುನಿರತ್ನ ಅವರು 2013, 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಆರ್. ಆರ್. ನಗರದಲ್ಲಿ ಗೆದ್ದಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಸೇರಿದ್ದಾರೆ. ಉಪ ಚುನಾವಣೆಯಲ್ಲಿ ಅವರಿಗೆ ಪಕ್ಷ ಟಿಕೆಟ್ ನೀಡಿತ್ತು.












Click it and Unblock the Notifications