ಆರ್. ಆರ್. ನಗರ; ಅ.27ರಂದು ನಿಖಿಲ್ ಕುಮಾರಸ್ವಾಮಿ ಪ್ರಚಾರ

ಬೆಂಗಳೂರು, ಅಕ್ಟೋಬರ್ 26: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆ ನಿಖಿಲ್ ಕುಮಾರಸ್ವಾಮಿ ಧುಮುಕಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಪರವಾಗಿ ಅವರು ಪ್ರಚಾರ ನಡೆಸಲಿದ್ದಾರೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.

ಜೆಡಿಎಸ್ ಯವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಕ್ಟೋಬರ್ 27ರಂದು ರಾಜರಾಜೇಶ್ವರಿ ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ. ಇದೇ ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಆರ್. ಆರ್. ನಗರದಲ್ಲಿ ಪ್ರಚಾರ ಮಾಡಲಿದ್ದಾರೆ.

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಶನಿವಾರ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಉಪ ಚುನಾವಣಾ ಪ್ರಚಾರ ನಡೆಸಿದ್ದರು. ಆರ್. ಆರ್. ನಗರದಲ್ಲಿ ಮಂಗಳವಾರ ಮತ ಯಾಚನೆ ಮಾಡಲಿದ್ದಾರೆ.

 RR Nagar By Poll Nikhil Kumaraswamy Campaign On October 27

ಬೆಂಗಳೂರು ಮಹಾನಗರ ಯುವ ಜನತಾದಳ ವತಿಯಿಂದ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಆರ್. ಆರ್. ನಗರದಲ್ಲಿ ಬೃಹತ್ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಗೆ ರಾಜರಾಜೇಶ್ವರಿ ದೇವಾಲಯದ ಬಳಿ ಜಾಥಾ ಆರಂಭವಾಗಲಿದೆ.

ನವೆಂಬರ್ 3ರಂದು ಆರ್. ಆರ್. ನಗರ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್‌ನಿಂದ ಹೆಚ್. ಕುಸುಮಾ ಮತ್ತು ಜೆಡಿಎಸ್‌ನಿಂದ ವಿ. ಕೃಷ್ಣಮೂರ್ತಿ ಸೇರಿ 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಹ ಅಕ್ಟೋಬರ್ 31ರಂದು ಆರ್. ಆರ್. ನಗರ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ಸೋಮವಾರ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಪ್ರಚಾರವನ್ನು ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+