• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜರಾಜೇಶ್ವರಿನಗರಕ್ಕೆ ಪ್ರಥಮ ಸಾಹಿತ್ಯ ಸಮ್ಮೇಳನದ ಸಂಭ್ರಮ

|
Google Oneindia Kannada News

ಬೆಂಗಳೂರು, ಸೆ.25:ರಾಜರಾಜೇಶ್ವರಿ ನಗರ ವಾರ್ಡ್ ಕನ್ನಡ ಸಾಹಿತ್ಯ ಪರಿಷತ್ ಘಟಕವು ಸೆ.30ರಂದು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಂಡಿದೆ. ಸಮ್ಮೇಳನಾಧ್ಯಕ್ಷರಾಗಿ ಸುಚೇಂದ್ರ ಪ್ರಸಾದ್ ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನವು ನಗರದ ಮೀನಾಕ್ಷಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮ ಬೆಳಗ್ಗೆ 7.30ರಿಂದ ಆರಂಭವಾಗಲಿದೆ. ಕಾರ್ಯಕ್ರಮವನ್ನು ಕೈಲಾಸ ಮಹಾಸಂಸ್ಥಾನದ ಜಯೇಂದ್ರಪುರಿ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ವ.ಚನ್ನೇಗೌಡ ಅವರ ಅಧ್ಯಕ್ಷತೆಯಲ್ಲಿ ವಿಚಾರಗೋಷ್ಠಿ ನಡೆಯಲಿದೆ. ಕನ್ನಡ ರಾಜ್ಯ ಭಾಷೆಯೂ ಅನ್ನ ಭಾಷೆಯೂ ಎನ್ನುವ ಕುರಿತು ಆರ್‌ಎನ್‌ಎಸ್‌ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಸಿಂಧುಶ್ರೀ ಉಪನ್ಯಾಸ ನೀಡಲಿದ್ದಾರೆ.

ಎರಡನೇ ವಿಚಾರ ಗೋಷ್ಠಿಯಲ್ಲಿ ಸಂಸ್ಕೃತಿ ಚಿಂತಕ ಡಾ. ಡಿ.ಸಿ. ಚಿತ್ರಲಿಂಗಯ್ಯ ಸಮೃದ್ಧ ಸಾಹಿತ್ಯ ಹಾಗೂ ರಂಗಭೂಮಿ ಒಂದು ಪರಾಮರ್ಶೆ ನಡೆಯಲಿದೆ. ಸಂಜೆ 5.30ಕ್ಕೆ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ.

English summary
Kannada sahithya parishat unit of Rajarajeshwari Nagar will celebrate its first Kannada literature festival on September 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X