ಬೆಂಗಳೂರು ಏರ್ ಪೋರ್ಟ್‌ನಲ್ಲಿ 1 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

ಬೆಂಗಳೂರು, ಸೆಪ್ಟೆಂಬರ್ 09: ಬೆಲ್ಜಿಯಂನಿಂದ ಭಾರತಕ್ಕೆ ಬಂದಿದ್ದ ಸುಮಾರು 1 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಎಂಡಿಎಂಎ, ಎಕ್ಸ್‌ಟಸಿ ಮಾತ್ರೆಗಳನ್ನು ರವಾನೆ ಮಾಡಲಾಗಿತ್ತು.

Recommended Video

      Congress ನಾಯಕರ ಜೊತೆ Ragini ಹಾಗು Sanjjanaa - BJP tweet | Oneindia Kannada

      ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮಸಾಜ್ ಮಾಡುವ ಮೆಷಿನ್ ಪಾರ್ಸೆಲ್‌ ಬಾಕ್ಸ್‌ನಲ್ಲಿ ಡ್ರಗ್ಸ್ ಕಳಿಸಲಾಗಿತ್ತು.

      ಪಾರ್ಸೆಲ್ ಬಾಕ್ಸ್‌ನಲ್ಲಿ ಸುಮಾರು 1980 ಗ್ರಾಂ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆಗಳಿದ್ದವು. ಮಾರುಕಟ್ಟೆಯಲ್ಲಿ ಇವುಗಳ ಮೌಲ್ಯ ಸುಮಾರು 1 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಪಾರ್ಸೆಲ್ ಬಂದ ವಿಳಾಸದ ಬಗ್ಗೆ ತನಿಖೆ ನಡೆಯುತ್ತಿದೆ.

      Rs 1 Crore Worth Ecstasy Pills And Other Drugs Seized In Bengaluru Airport

      ಕರ್ನಾಟಕದಲ್ಲಿ ಡ್ರಗ್ಸ್‌ ಪೂರೈಕೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಬೆಂಗಳೂರಿನ ಸಿಸಿಬಿ ಪೊಲೀಸರು ನಗರದಲ್ಲಿ ಡ್ರಗ್ಸ್ ಪೂರೈಕೆ ಜಾಲದ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿಯೇ ಏರ್ ಪೋರ್ಟ್‌ನಲ್ಲಿ ಡ್ರಗ್ಸ್ ಸಿಕ್ಕಿದೆ.

      ಕನ್ನಡ ಚಿತ್ರರಂಗದ ಕೆಲವು ನಟ, ನಟಿಯರು ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು ಎಂಬ ಆರೋಪವಿದೆ. ಸಿಸಿಬಿ ಪೊಲೀಸರು ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಯನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

      ಬೆಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುವ ಸೆಲೆಬ್ರಿಟಿ ಪಾರ್ಟಿಗಳ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಪಾರ್ಟಿಗಳನ್ನು ಆಯೋಜನೆ ಮಾಡುತ್ತಿದ್ದ ಟೆಕ್ಕಿ ವೀರೇನ್ ಖನ್ನಾರನ್ನು ಸಿಸಿಬಿ ಪೊಲೀಸರು ದೆಹಲಿಯಲ್ಲಿ ಬಂಧಿಸಿ, ನಗರಕ್ಕೆ ಕರೆತಂದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+