ಲಾಲ್‌ಬಾಗ್ ಅಭಿವೃದ್ಧಿಗೆ ₹10 ಕೋಟಿ ಗ್ರಾಂಟ್: ನಾಗರಿಕರಿಂದ ಅಹವಾಲು ಸ್ವೀಕರಿಸಿ ಡಿಕೆಶಿ ಕೊಟ್ರು ಭರವಸೆ
ಬೆಂಗಳೂರು, ಅಕ್ಟೋಬರ್ 11: ಕರ್ನಾಟಕದ ಪ್ರಮುಖ ಉದ್ಯಾನವನ, ಸಸ್ಯಕಾಶಿ ಲಾಲ್ ಬಾಗ್ ಅಭಿವೃದ್ಧಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) 10 ಕೋಟಿ ರೂ. ಅನುದಾನ ನೀಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಈ ಮೂಲಕ ಸಾರ್ವಜನಿಕರು ಬಯಸಿದಂತೆ ಲಾಲ್ ಬಾಗ್ ಮತ್ತಷ್ಟು ಸೌಲಭ್ಯಗಳನ್ನು ಹೊಂದಲಿದೆ.
ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. "ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರು ಆಲಿಸಿದ್ದೇನೆ. ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಿದ್ದೇವೆ. ಹಿರಿಯರು ಹಾಗೂ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಮ್ ಮಾಡಲಾಗುವುದು ಎಂದರು.

ಲಾಲ್ ಬಾಗ್ ಮಾದರಿಯಲ್ಲಿ ನಗರದಲ್ಲಿ ಟ್ರೀಪಾರ್ಕ್
ಬೆಂಗಳೂರಿನಲ್ಲಿ ಅವಕಾಶ ಇರುವೆಡೆ ಲಾಲ್ ಬಾಗ್ ಮಾದರಿಯಲ್ಲಿ ಟ್ರೀಪಾರ್ಕ್ ಮಾಡಲು ಅರಣ್ಯ ಇಲಾಖೆ ಜೊತೆ ಚರ್ಚೆ ಮಾಡುತ್ತೇನೆ. ಅದಕ್ಕೆ ಆರ್ಥಿಕ ಬೆಂಬಲವನ್ನು ನೀಡಲಾಗುವುದು. ಇಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯರು ಹಾಗೂ ಆಂಬುಲೆನ್ಸ್ ಸೇವೆ ನಿಯೋಜನೆಗೆ ತೀರ್ಮಾನಿಸಿದ್ದೇವೆ. ಇನ್ನು ಮುಂದೆ ಇಲ್ಲಿನ ಶೌಚಾಲಯಗಳ ಸೌಲಭ್ಯವನ್ನು ಉಚಿತವಾಗಿ ಒದಗಿಸಲಾಗುವುದು. ಬೆಂಗಳೂರಿನ ಕಸ ವಿಲೇವಾರಿ, ವಾಹನ ನಿಲುಗಡೆ, ಸೇರಿದಂತೆ ಅನೇಕ ವಿಚಾರವಾಗಿ ಸಲಹೆ, ಅಭಿಪ್ರಾಯಗಳು ಬಂದಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಲಾಲ್‌ಬಾಗ್ ರಕ್ಷಣೆಗೆ ನಾವು ಬದ್ಧ!
— DK Shivakumar (@DKShivakumar) October 11, 2025
ಲಾಲ್ಬಾಗ್ನ ಅಭಿವೃದ್ಧಿಗೆ ₹10 ಕೋಟಿ ಅನುದಾನವನ್ನು ಜಿಬಿಎ ವತಿಯಿಂದ ಘೋಷಿಸಲಾಗಿದೆ. ಸಾರ್ವಜನಿಕರ ಮನವಿ ಮೇರೆಗೆ ಇಲ್ಲಿ ಇನ್ನು ಮುಂದೆ ಉಚಿತ ಶೌಚಾಲಯ, ಜಿಮ್ ವ್ಯವಸ್ಥೆ ಹಾಗೂ ಬೆಳಗ್ಗೆಯಿಂದ ಸಂಜೆಯವರೆಗೂ ವೈದ್ಯರು ಮತ್ತು ಆಂಬುಲೆನ್ಸ್ ಸೇವೆ ನಿಯೋಜಿಸಲಾಗುವುದು. ಅಲ್ಲದೆ, ಬೆಂಗಳೂರಿನ ಇತರೆಡೆಗಳಲ್ಲಿಯೂ… pic.twitter.com/oWQhfgvjxU
ಟನಲ್ ರಸ್ತೆ: ಲಾಲ್ ಬಾಗ್ ಭೂಮಿ ಬೇಕಿಲ್ಲ
ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಟನಲ್ ರಸ್ತೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಆಸ್ತಿ ಉಳಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಲಾಲ್ ಬಾಗ್‌ನ ಆರು ಎಕರೆ ಭೂಮಿ ವಶಪಡಿಸಿಕೊಳ್ಳುವ ಅಗತ್ಯವಿಲ್ಲ. ಅರ್ಧ ಎಕರೆ ಪ್ರದೇಶದಲ್ಲಿ ಅಶೋಕ ಪಿಲ್ಲರ್ ಕಡೆ ಟನಲ್ ರಸ್ತೆಗೆ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶ ಕಲ್ಪಿಸಲಾಗುವುದು. ಪಾರ್ಕಿಂಗ್ ಗಾಗಿ ಇರುವ ಜಾಗದಲ್ಲಿ ಸುಮಾರು ಒಂದು ಎಕರೆ ಜಾಗವನ್ನು ಸ್ಟೋರೇಜ್ ಗೆ ಬಳಸಿಕೊಳ್ಳುತ್ತೇವೆ. ನಂತರ ಅದನ್ನು ತೆರವುಗೊಳಿಸಿ ಲಾಲ್ ಬಾಗ್ ಗೆ ಕೊಡುತ್ತೇವೆ. ಸಣ್ಣದಾಗಿರುವ ಗಿಡಗಳನ್ನು ತೆರವುಗೊಳಿಸಿ, ಮತ್ತೆ ಗಿಡ ನೆಡುತ್ತೇವೆ. ಉಳಿದಂತೆ ಲಾಲ್ ಬಾಗ್ ಉದ್ಯಾನಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಈ ಯೋಜನೆ ಆರಂಭ ಯಾವಾಗ ಎಂದು ಕೇಳಿದಾಗ, "ನಾವು ಯೋಜನೆಯ ಟೆಂಡರ್ ಕರೆಯಲಾಗಿದೆ. ಬಿಡ್ ನಲ್ಲಿ ಯಾರು ಭಾಗವಹಿಸುತ್ತಾರೆ ಎಂದು ನೋಡಿ, ನಂತರ ಅತ್ಯುತ್ತಮ ಬಿಡ್ ಮಾಡಿದವರಿಗೆ ನೀಡಲಾಗುವುದು. ಮುಂದಿನ ದಿನಗಳಲ್ಲೂ ಉದ್ಯಾನಗಳಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಮುಂದುವರಿಸುತ್ತೀರಾ ಎಂದು ಕೇಳಿದಾಗ, ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಭಿಪ್ರಾಯ, ಸಲಹೆ, ಅಹವಾಲು ಆಲಿಸಲಾಗುವುದು ಎಂದರು.
ನಾಗರಿಕರಿಂದ ಅಹವಾಲು ಸ್ವೀಕಾರ
ಬೆಂಗಳೂರಿನ ನಾಗರಿಕರ ಬಳಿಗೆ ಹೋಗಿ, ಅವರ ಅಭಿಪ್ರಾಯ, ಸಲಹೆ, ಅಹವಾಲುಗಳನ್ನು ಸ್ವೀಕರಿಸಲು ಹಮ್ಮಿಕೊಂಡಿರುವ ಬೆಂಗಳೂರು ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ಅವರು ಶನಿವಾರ ಮುಂಜಾನೆ ಲಾಲ್ ಬಾಗ್ ಉದ್ಯಾನದಲ್ಲಿ ನಡಿಗೆ ಜೊತೆಗೆ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು.
ಜನರು ಬೆಂಗಳೂರಿನ ಕಸದ ಸಮಸ್ಯೆ ಬಗ್ಗೆ ನಿಮ್ಮ ಬಳಿ ಚರ್ಚಿಸಿದ್ದಾರೆ ಎಂದು ಕೇಳಿದಾಗ, "ಈ ವಿಚಾರವಾಗಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು, ಎಲ್ಲೆಲ್ಲಿ ಬ್ಲಾಕ್ ಸ್ಪಾಟ್ ಇದೆಯೋ ಅಲ್ಲಿ ಕ್ಯಾಮೆರಾ ಅಳವಡಿಸಿ, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದರು.
30x50 ನಿವೇಶನದಲ್ಲಿ ಮನೆ ಕಟ್ಟುತ್ತಿದ್ದು ಓಸಿ ಮತ್ತು ಸಿಸಿ ಸಮಸ್ಯೆ ಇದೆ ಎಂದರು, ಮತ್ತೊಬ್ಬರು 40x60 ನಿವೇಶನದಲ್ಲಿ ಮನೆ ಕಟ್ಟುತ್ತಿದ್ದೇವೆ ಎಂದು ಓಸಿ ಸಿಸಿ ವಿನಾಯಿತಿ ನೀಡಿ ಎಂದು ಮತ್ತೊಬ್ಬ ನಾಗರಿಕರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಅವರು, "ನಿನ್ನೆಯಷ್ಟೇ 30x40 ನಿವೇಶನಕ್ಕೆ ವಿನಾಯಿತಿ ನೀಡಿದ್ದೇವೆ. ಉಳಿದಂತೆ ಎರಡನೇ ಹಂತದಲ್ಲಿ ಇತರೆ ಕಟ್ಟಡಗಳ ಬಗ್ಗೆ ತೀರ್ಮಾನ ಮಾಡುತ್ತೇವೆ' ಎಂದು ಭರವಸೆ ನೀಡಿದರು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications