ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸೌಧದಲ್ಲಿ 25.76ಲಕ್ಷ ಹಣ ಪತ್ತೆ, ವ್ಯಕ್ತಿ ವಶಕ್ಕೆ

|
Google Oneindia Kannada News

ಬೆಂಗಳೂರು, ಜನವರಿ 04 : ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ 25.76 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ವಿಧಾನಸೌಧ ಪೊಲೀಸರು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಶುಕ್ರವಾರ ಸಂಜೆ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಮೋಹನ್ ಎಂಬ ವ್ಯಕ್ತಿಯ ಬಳಿ ಇದ್ದ 25.76ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಮೋಹನ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಪುಟ್ಟರಂಗ ಶೆಟ್ಟಿ ಅವರ ಕಚೇರಿಯ ಸಿಬ್ಬಂದಿ ಎಂದು ತಿಳಿದುಬಂದಿದೆ.

ಬೌರಿಂಗ್ ಲಾಕರ್ ಪ್ರಕರಣ: ಸಿಸಿಟಿವಿ ಪರಿಶೀಲಿಸುತ್ತಿರುವ ಐಟಿ ಅಧಿಕಾರಿಗಳುಬೌರಿಂಗ್ ಲಾಕರ್ ಪ್ರಕರಣ: ಸಿಸಿಟಿವಿ ಪರಿಶೀಲಿಸುತ್ತಿರುವ ಐಟಿ ಅಧಿಕಾರಿಗಳು

ಕಪ್ಪು ಬಣ್ಣದ ಬ್ಯಾಗ್‌ನಲ್ಲಿ ಮೋಹನ್ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದರು. ಅನುಮಾನ ಬಂದು ಪೊಲೀಸರು ಬ್ಯಾಗ್ ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಇದು ನನ್ನ ಸ್ವಂತ ಹಣ ಎಂದು ಮೋಹನ್ ಹೇಳುತ್ತಿದ್ದಾರೆ.

ಮೃತಭಿಕ್ಷುಕನ ಕೃತಕ ಕಾಲಿನಲ್ಲಿತ್ತು 96 ಸಾವಿರಮೃತಭಿಕ್ಷುಕನ ಕೃತಕ ಕಾಲಿನಲ್ಲಿತ್ತು 96 ಸಾವಿರ

Rs 14 lakh cash seized in Vidhana Soudha, Bengaluru

ಗುತ್ತಿಗೆದಾರರಿಂದ ಸಂಗ್ರಹಿಸಿದ ಹಣ ಎಂದು ಹಲವರು ಆರೋಪ ಮಾಡುತ್ತಿದ್ದಾರೆ. ವಿಧಾನಸೌಧ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದು, ಮೋಹನ್‌ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಬ್ಯಾಂಕ್ ದರೋಡೆ ಪ್ರಕರಣಗಳಲ್ಲಿ ಕರ್ನಾಟಕ ನಂ.1ಬ್ಯಾಂಕ್ ದರೋಡೆ ಪ್ರಕರಣಗಳಲ್ಲಿ ಕರ್ನಾಟಕ ನಂ.1

ಮೋಹನ್ ಸಾಗಣೆ ಮಾಡುತ್ತಿದ್ದ ಹಣಕ್ಕೆ ಯಾವುದೇ ದಾಖಲೆ ಲಭ್ಯವಾಗಿಲ್ಲ. ವಿಧಾನಸೌಧ ಪೊಲೀಸರಿಗೆ ಯಾರಾದರೂ ದೂರು ನೀಡಿದರೆ ತನಿಖೆಯನ್ನು ಚುರುಕುಗೊಳಿಸಲಿದ್ದಾರೆ.

2017ರ ಡಿಸೆಂಬರ್‌ನಲ್ಲಿ ವಿಧಾನಸೌಧದ ಆವರಣದಲ್ಲಿ ನಿಂತಿದ್ದ ವಕೀಲರ ಕಾರಿನಲ್ಲಿ 1 ಕೋಟಿಗೂ ಅಧಿಕ ಮೊತ್ತದ ಹಣ ಪತ್ತೆಯಾಗಿತ್ತು.

English summary
Rs 14 lakh money seized in Vidhana Soudha west gate on Friday, January 4, 2019 evening. Mohan who carrying money detained by Vidhana Soudha police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X