ರಾಜಧಾನಿಯಲ್ಲಿ 2 ಕೋಟಿ ಮೌಲ್ಯದ ಹ್ಯಾಷಿಶ್ ಆಯಿಲ್ ಪತ್ತೆ

ಬೆಂಗಳೂರು, ಜು. 17: ರಾಜಧಾನಿ ಬೆಂಗಳೂರಿನಲ್ಲಿ ಮಾದಕ ಲೋಕದ ಮತ್ತು ದಿನೇ ದಿನೇ ಏರುತ್ತಲೇ ಇದೆ. ಸಿಸಿಬಿ ಪೊಲೀಸರು ಸರಣಿ ಪ್ರಕರಣ ದಾಖಲಿಸಿದ ಬಳಿಕವೂ ಡ್ರಗ್ ಜಾಲ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ ಸುಮಾರು ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸುದ್ದುಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಮಹಮದ್ ಇರ್ಫಾನ್ ಮತ್ತು ಥಾರಿಂ ಬಂಧಿತ ಆರೋಪಿಗಳು. ಇವರಿಂದ ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಈ ಮಾದಕ ವಸ್ತುವನ್ನು ಬೆಂಗಳೂರಿಗೆ ರವಾನಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಬಂದ ಹಣದಲ್ಲಿ ಐಶರಾಮಿ ಜೀವನ ಸಾಗಿಸುತ್ತಿದ್ದರು. ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕೋಟ್ಯಂತರ ಬೆಲೆ ಬಾಳುವ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

ಕೋಣನಕುಂಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶ ಮೂಲದ ಸೇಮಂತ, ಸಿದಾರಿ ಬೊಂಜಿ ಬಾಬು, ವಂತಲ ನಾಗೇಶ್, ಸಿದಾರಿ ಮಹೇಶ್ ಬಂಧಿತ ಆರೋಪಿಗಳು. ನಾಲ್ವರಿಂದ ಒಟ್ಟು 134 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸೇಮಂತ ಎಂಬಾತ ಕಾರಿನಲ್ಲಿ 41 ಕೆ.ಜಿ. ಗಾಂಜಾ ಮಾರಾಟ ಮಾಡಲು ಯತ್ನಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತನಿಂದ 41 ಕೆ.ಜಿ. ಗಾಂಜಾ ಸಿಕ್ಕಿದ್ದು, ಈತ ನೀಡಿದ ಮಾಹಿತಿಮೇರೆಗೆ ಇತರೆ ಮೂವರು ಆರೋಪಿಗಳನ್ನು ಲಾಡ್ಜ್ ನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 93 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Rs 2 Crore Worth Hashish Oil Seized in Bengaluru

Recommended Video

      Virat Kohli ಪ್ರಕಾರ ಈ ಬಾರಿ ವಿಶ್ವಕಪ್ ಗೆಲ್ಲೋದು ಇವರೇ | Team To Beat | Oneindia Kannada

      ಆಂಧ್ರದಿಂದ ಸಾಗಣೆ: ರಾಜಧಾನಿ ಬೆಂಗಳೂರು ಮಾದಕ ವ್ಯಸನಿಗಳ ತವರೂರಾರಿ ಪರಿವರ್ತನೆಯಾಗುತ್ತಿದೆ. ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ 2 ಸಾವಿರ ಕೆ.ಜಿ. ಗಾಂಜಾ ಸಾಗಿಸುತ್ತಿದ್ದ ಲಾರಿಯನ್ನೇ ಪತ್ತೆ ಮಾಡಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಹೆಚ್ಚು ಮಾದಕ ವಸ್ತು ಪರಕರಣಗಳೇ ದಾಖಲಾಗುತ್ತಿವೆ. ಬಹುತೇಕ ಪ್ರಕರಣಗಳ ಗಾಂಜಾ ಮೂಲ ಆಂಧ್ರ ಪ್ರದೇಶ ಎಂಬುದು ದೃಢಪಟ್ಟಿದೆ. ಪೊಲೀಸರು ಸತತ ಪ್ರಕರಣ ದಾಖಲಿಸುತ್ತಿರುವ ನಡುವೆಯೂ ಗಾಂಜಾ ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+