ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ 50 ಸಾವಿರದವರೆಗೆ ಸಬ್ಸಿಡಿ

ಬೆಂಗಳೂರು, ಡಿಸೆಂಬರ್ 19: ಹೊಸ ವಾಹನಗಳ ಖರೀದಿಗೆ ಈ ವರ್ಷ 12 ಸಾವಿರ ರೂ ಹೆಚ್ಚುವರು ತೆರಿಗೆಯನ್ನು ಕಟ್ಟಬೇಕಾಗುತ್ತದೆ, ಆದರೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹೊಸ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ 50 ಸಾವಿರ ರೂ ಸಬ್ಸಿಡಿಯನ್ನು ನೀಡಲಾಗುತ್ತಿದೆ.

ನೀತಿ ಆಯೋಗವು ಹಲವು ಅಧಿಕಾರಿಗಳ ಜೊತೆ ನಡೆಸಿದ ಸಭೆಯ ಬಳಿಕ ಹೊಸ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ 25 ರಿಂದ 50 ಸಾವಿರ ರೂ ಸಬ್ಸಿಡಿ ನೀಡಬೇಕು ಎನ್ನುವ ತೀರ್ಮಾನಕ್ಕೆ ಬಂದಿದೆ. ಇದು ದ್ವಿಚಕ್ರ, ತ್ರಿಚಕ್ರ ಹಾಗೂ ಕಾರುಗಳಿಗೆ ಅನ್ವಯವಾಗುತ್ತದೆ.

ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ನೇರವಾಗಿ ಅನಕೂಲ ಕಲ್ಪಿಸುವು ಕುರಿತು ಚರ್ಚೆ ನಡೆದಿದೆ.2030ರ ವೇಳೆಗೆ ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ತೀವ್ರಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ಇದಕ್ಕೆ ಪ್ರಮುಖ ವಾಹನ ಉತ್ಪಾದಕರು ಸಹ ಸ್ಪಂದಿಸುತ್ತಿರುವ ಹೊಸ ಮುನ್ನುಡಿಗೆ ಕಾರಣವಾಗಿದೆ. ಹೀಗಾಗಿ ಪರಿಸರ ಸ್ನೇಹಿಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿಗೆ ಕೇಂದ್ರವು ವಿಶೇಷ ಸೌಲಭ್ಯಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.

Rs 50,000 Subsidy For Electric Cars In Draft Plan

ಹೆಚ್ಚುತ್ತಿರುವ ಜಾಗತಿಕ ತಾಪಮಾನದಿಂದ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆಗೆ ಬ್ರೇಕ್ ಹಾಕುವ ಉದ್ದೇಶದಿಂದ ಎಲ್ಲಾ ಆಟೋ ಉತ್ಪಾದಕರು ಬೃಹತ್ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಮಧ್ಯೆ ಎಲೆಕ್ಟ್ರಿಕ್ ಕಾರು ಮಾಲೀಕರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದೆ. ಇದು ಇವಿ ವಾಹನಗಳ ಉತ್ಪಾದನೆಗೆ ಮತ್ತಷ್ಟು ಬಲ ತುಂಬಲಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಉತ್ತೇಜಿಸಲು ಈ ಯೋಜನೆ ಭಾರೀ ಪ್ರಾಮುಖ್ಯತೆ ಪಡೆಯಲಿದೆ.

ಪೆಟ್ರೋಲ್, ಡೀಸೆಲ್ ಆಧರಿತ ವಾಹನಗಳಿಗೆ ಮೊದಲ ವರ್ಷ 500-25000 ರೂ ಹೆಚ್ಚುವರಿ ಶುಲ್ಕವನ್ನು ನೀಡಬೇಕಾಗುತ್ತದೆ. ಅದು ನಾಲ್ಕನೇ ವರ್ಷಕ್ಕೆ 4-90 ಸಾವಿರ ಹೆಚ್ಚುವರಿ ಶುಲ್ಕ ನೀಡಬೇಕಾಗುತ್ತದೆ, ಆದರೆ ಎಲೆಕ್ಟ್ರಿಕ್ ವಾಹನಗಳಿಗೆ ಮೊದಲ ವರ್ಷ 50 ಸಾವಿರ ರೂ ಬಳಿಕ 15 ಸಾವಿರಕ್ಕೆ ಶುಲ್ಕ ಕಡಿಮೆಯಾಗುತ್ತಾ ಹೋಗುತ್ತದೆ. ಸರಕು-ಸಾಗಾಣಿಕೆ ತೆರಿಗೆ, ಕಚ್ಚಾ ವಸ್ತುಗಳು, ಬ್ಯಾಟರಿ ಬ್ಯಾಕಪ್ಸ್ , ನೋಂದಣಿ ಶುಲ್ಕ ಎಲ್ಲವೂ ಸೇರಿ ಅಷ್ಟು ತೆರಿಗೆಯನ್ನು ಕಟ್ಟಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+