E-Khata: ಒಂದೇ ದಿನ 10 ಲಕ್ಷ ಇ-ಖಾತಾ ವಿತರಣೆ: ಏಪ್ರಿಲ್‌ಗೆ ನಗರದ ಹೊಸ ರಸ್ತೆಗಳಲ್ಲಿ ಸಂಚಾರ: ಡಿಕೆ ಶಿವಕುಮಾರ್
ಬೆಂಗಳೂರು: ಬೆಂಗಳೂರು ವಾಹನ ಸವಾರರು ನಿತ್ಯ ಒಂದಿಲ್ಲೊಂದು ಕಡೆಗಳಲ್ಲಿ ರಸ್ತೆ ಕಾಮಗಾರಿಗೆ ಹೈರಾಣಾಗಿದ್ದರು. ಇದೀಗ ಆ ಸಂಚಾರ ಚಿಂತೆ ತಪ್ಪಲಿದೆ. ಇದೇ ಏಪ್ರಿಲ್ ಅಂತ್ಯದ ವೇಳೆಗೆ 5065 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಬೆಂಗಳೂರಿನ ಎಲ್ಲ ವಿಧದ ರಸ್ತೆಗಳನ್ನು ಪೂರ್ಣಗಳಿಸಲು ಸ್ವತಃ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಡೆಡ್‌ಲೈನ್ ನೀಡಿದ್ದಾರೆ.
ಜಿಬಿಎ ಕಚೇರಿಯಲ್ಲಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶನಿವಾರ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಸುದ್ದಿಗಾರರ ಜೊತೆಗೆ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡರು. ಈ ಬಹುಕೋಟಿ ವೆಚ್ಚದಲ್ಲಿ ಮಾಡಲಾಗುತ್ತಿರುವ ಬೆಂಗಳೂರಿನ ಬ್ಲಾಕ್ ಟಾಪಿಂಗ್ ಹಾಗೂ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

10 ಲಕ್ಷ ಆಸ್ತಿಗಳ ಸ್ಕ್ಯಾನಿಂಗ್ ಪೂರ್ಣ, ಏಪ್ರಿಲ್‌ಗೆ ವಿತರಣೆ
ಸುಮಾರು 10 ಲಕ್ಷಕ್ಕೂ ಹೆಚ್ಚು ನಾಗರಿಕರ ಆಸ್ತಿಗಳನ್ನು ಸ್ಕ್ಯಾನ್ ಮಾಡಿಸಿದ್ದು, ಒಂದೇ ದಿನ ಈ ನಾಗರಕರಿಗೆ ಇ-ಖಾತಾ ನೀಡಲಾಗುವುದು. ಏಪ್ರಿಲ್ ತಿಂಗಳ ಮೂರನೇ ಭಾನುವಾರದಂದು ಈ ಕಾರ್ಯಕ್ರಮ ಮಾಡಲು ದಿನಾಂಕ ನಿಗದಿ ಮಾಡಿದ್ದೇನೆ. ಬೆಂಗಳೂರು ನಗರದಲ್ಲಿ ಬಿ-ಯಿಂದ ಎ-ಖಾತಾ ಪರಿವರ್ತನೆ ಆರಂಭವಾಗಿದೆ. ಅವರ ಆಸ್ತಿಗಳನ್ನು ಕಂದಾಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಖಾತಾ ಪರಿವರ್ತನೆ ಮಾಡಲಾಗುವುದು. ಎಲ್ಲಾ ಕಂದಾಯ ಜಾಗದಲ್ಲಿ ಮಾಡಲಾಗಿರುವ ಬಡಾವಣೆ ರಸ್ತೆಗಳನ್ನು ಪಾಲಿಕೆ ರಸ್ತೆಗಳನ್ನಾಗಿ ಮಾಡಿದ್ದೇವೆ.
ಜಿಬಿಎ ಚಿಹ್ನೆ ಅಂತಿಮ
ಜಿಬಿಎ ಚಿಹ್ನೆಯನ್ನು ಅಂತಿಮಗೊಳಿಸಲಾಗಿದೆ. ಆಯುಕ್ತರು ಅದನ್ನು ಬಿಡುಗಡೆ ಮಾಡಲಿದ್ದಾರೆ. ಇನ್ನು ಬೆಂಗಳೂರು ದಕ್ಷಿಣ ಪಾಲಿಕೆಯಲ್ಲಿ ಮಾದರಿ ಕಟ್ಟಡ ಅಂತಿಮಗೊಳಿಸಿದ್ದೇವೆ. ಆದಷ್ಟು ಬೇಗ ಟೆಂಡರ್ ಕರೆದು ಗುದ್ದಲಿ ಪೂಜೆ ಮಾಡಿ ಕೆಲಸ ಆರಂಭಿಸಬೇಕಿದೆ. ಯಾವ ಶಾಸಕರು ಮಂತ್ರಿ ಬರಲಿ ಎಂದು ಕಾಯಬೇಡಿ, ನಿಮ್ಮ ಪಾಡಿಗೆ ನಿಮ್ಮ ಕೆಲಸ ಆರಂಭಿಸಿ, ಆಮೇಲೆ ಅವರನ್ನು ಕರೆದುಕೊಂಡು ಹೋಗಿ ಪೂಜೆ ಮಾಡಿಸಿ ಎಂದು ಹೇಳಿದ್ದೇನೆ. ಪ್ರತಿನಿತ್ಯ ಕಾಮಗಾರಿ ಪ್ರಗತಿ ಫೋಟೋ ಸಮೇತ ಮಾಹಿತಿ ರವಾನಿಸಬೇಕು ಎಂದು ಅಧಿಕಾರಿಗಳಿಗೆ ಒಂದಷ್ಟು ಜವಾಬ್ದಾರಿ ನೀಡಿದರು.
2671 ಕೋಟಿ ರೂ.ವೆಚ್ಚದಲ್ಲಿ ನಗರ ರಸ್ತೆ ಅಭಿವೃದ್ಧಿ
ಎರಡು ಪ್ಯಾಕೇಜ್ ಗಳಲ್ಲಿ ಹೊರ ವರ್ತುಲ ರಸ್ತೆಗೆ 420 ಕೋಟಿ, ವಾರ್ಡ್ ರಸ್ತೆಗಳಿಗೆ 82 ಪ್ಯಾಕೇಜ್ ಗಳಲ್ಲಿ 1000 ಕೋಟಿ, ಕರ್ನಾಟಕ ಸರ್ಕಾರದ ಅನುದಾನದ 81 ಪ್ಯಾಕೇಜ್ ಗಳಲ್ಲಿ 1241 ಕೋಟಿ ಸೇರಿದಂತೆ 2671 ಕೋಟಿ ರೂ. ಮೊತ್ತದ ರಸ್ತೆ ಅಭಿವೃದ್ಧಿ ಕೆಲಸ ಆರಂಭಿಸಲಾಗಿದ್ದು, ಈ ಕಾಮಗಾರಿ ಕೆಲಸಗಳು ಮಳೆಗಾಲ ಮುನ್ನವೇ ಪೂರ್ಣಗೊಳಿಸುವಂತೆ ಡೆಡಲೈನ್ ನೀಡಿದರು.
ಈ ರಸ್ತೆಗಳ ಅಭಿವೃದ್ಧಿಗಾಗಿ ಕಳೆದ ಮೂರು ತಿಂಗಳಲ್ಲಿ ಈ 2671 ಕೋಟಿ ರೂ. ಅನುದಾನ ನೀಡಲಾಗಿದೆ. ಶೇ. 80 ಟೆಂಡರ್ ಕರೆಯಲಾಗಿದೆ. ಕಳೆದ ವರ್ಷ 389 ಕಿ. ಮೀ. ರಸ್ತೆಗಳ ಬ್ಲಾಕ್ ಟಾಪಿಂಗ್ ಗೆ 694 ಕೋಟಿ ರೂ. ಹಾಗೂ ವೈಟ್ ಟಾಪಿಂಗ್ ಗೆ 1700 ಕೋಟಿ ಸೇರಿ 2394 ಕೋಟಿ ರೂ. ವೆಚ್ಚ ಮಾಡಲಾಗಿದೆ. ವಿಶ್ವ ಬ್ಯಾಂಕ್ ನಿಂದ ಕೆನಾಲ್ ಲಿಂಕ್ ಲೈನಿಂಗ್ ಕೆಲಸಕ್ಕೆ 1600 ಕೋಟಿ ರೂ. ಟೆಂಡರ್ ಕರೆದು ಕೆಲಸ ಆರಂಭವಾಗಿದೆ ಎಂದು ವಿವರಿಸಿದರು.
ಬೀದಿ ವ್ಯಾಪಾರಿಗಳಿಗೆ ಗುಡ್‌ನ್ಯೂಸ್
ಇನ್ನು ಬೀದಿ ವ್ಯಾಪಾರಿಗಳು, ನಾಗರಕರಿಗೆ ಸಹಾಯ ಮಾಡುವ ಕಲ್ಯಾಣ ಯೋಜನೆಗಳನ್ನು ಪ್ರತಿ ಪಾಲಿಕೆಯಲ್ಲಿ ಪ್ರತ್ಯೇಕ ಕಾರ್ಯಕ್ರಮ ಮಾಡಿ ಫಲಾನುಭವಿಗಳಿಗೆ ವಿತರಣೆ ಮಾಡಲಾಗುವುದು. 30 ಸಾವಿರ ಬೀದಿ ವ್ಯಾಪಾರಿಗಳು ನೋಂದಣಿ ಮಾಡಿಸಿಕೊಂಡಿದ್ದು, ತಳ್ಳುವಗಾಡಿ, ತ್ರಿಚಕ್ರ ಹಾಗೂ ನಾಲ್ಕು ಚಕ್ರ ವಾಹನ ನೀಡಲಾಗುವುದು. ಬೀದಿ ವ್ಯಾಪಾರಿಗಳು ಪಾದಚಾರಿ ಮಾರ್ಗದ ಬದಲು ವಾಹನಗಳಲ್ಲಿ ವ್ಯಾಪಾರ ಮಾಡುವಂತೆ ಮಾಡಲು ತೀರ್ಮಾನಿಸಿದ್ದೇವೆ. ಮುಂದಿನ 2 ತಿಂಗಳ ಒಳಗೆ ಈ ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಹಾಗೂ ವಾಹನ ವಿತರಣೆ ಮಾಡಲಾಗುವುದು.
ಬೆಂಗಳೂರು ಬಿಸಿನೆಸ್ ಕಾರಿಡಾರ್: ಟಿಡಿಆರ್ ಅಪ್ಡೇಟ್ಸ್
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆ ಭೂ ಸಂತ್ರಸ್ತರಿಗೆ ಪರಿಹಾರ ರೂಪವಾಗಿ ಕೆಲವು ಕಡೆ ಜಿಬಿಎ ವತಿಯಿಂದ ಟಿಡಿಆರ್ ನೀಡಬೇಕಾಗಿದೆ. ಪಾಲಿಕೆ ವತಿಯಿಂದ ಒಂದು ಕೇಂದ್ರ ಆರಂಭಿಸಿ ಸಂತ್ರಸ್ತರು ಅರ್ಜಿ ಕೊಟ್ಟ ಬಳಿಕ ಕೂಡಲೇ ಸ್ಥಳ ಪರಿಶೀಲನೆ ಮಾಡಿ ಎರಡು ಮೂರು ದಿನಗಳಲ್ಲಿ ಟಿಡಿಆರ್ ನೀಡಲು ತೀರ್ಮಾನಿಸಲಾಗಿದೆ. ಟಿಡಿಆರ್ ವಿನಿಮಯ ಬಗ್ಗೆ ಮುಂದಿನ ಎರಡು ವಾರದಲ್ಲಿ ಮಾಹಿತಿ ನೀಡಲಾಗುವುದು.
ಇನ್ನು ಆಯಾ ಪಾಲಿಕೆಗಳಿಗೆ ಸಣ್ಣ ಪ್ರಮಾಣದ ಕಸ ಗುಡಿಸುವ ಯಂತ್ರ ಖರೀದಿಗೆ ಸೂಚಿಸಿದ್ದೇವೆ. ಕಸ ವಿಲೇವಾರಿಗೆ ಜಮೀನು ಖರೀದಿ ಮಾಡಲು ತೀರ್ಮಾನ. ಕಸ ವಿಲೇವಾರಿಗೆ ಬೆಂಗಳೂರಿನ 40 ಕಿ.ಮೀ ಒಳಗೆ ಗುಡ್ಡ ಪ್ರದೇಶದ ಅಕ್ಕಪಕ್ಕ 100 ಎಕರೆ ಭೂಮಿ ಸಿಕ್ಕರೆ, ಅದನ್ನು ಒಪ್ಪಿತ ಆಧಾರದ ಮೇಲೆ ಖರೀದಿ ಮಾಡಿ ಸ್ವಾಧೀನಪಡಿಸಿಕೊಳ್ಳಲು ಸಿದ್ಧವಿದ್ದೇವೆ. ಈ ಬಗ್ಗೆಯೂ ನಾವು ತೀರ್ಮಾನ ಮಾಡಿದ್ದೇವೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿದ್ದೇವೆ. ಈ ಬಗ್ಗೆ ಭೂ ಮಾಲೀಕರು, ರೈತರು, ವ್ಯಾಪಾರಿಗಳು ಮುಂದೆ ಬಂದು ಜಮೀನು ನೀಡಬಹುದು ಇದಕ್ಕೆ ನಾವು ಪ್ರತ್ಯೇಕ ರಸ್ತೆ ಮಾಡಿಕೊಳ್ಳುತ್ತೇವೆ.
7 ಸಾವಿರ ಅರ್ಜಿ ಎ-ಖಾತಾ ಪರಿವರ್ತನೆ
ಬಿ-ಯಿಂದ ಎ-ಖಾತಾ ಪರಿವರ್ತನೆಗೆ ಎಷ್ಟು ಅರ್ಜಿ ಬಂದಿವೆ ಆಗಿದೆ ಎಂದು ಕೇಳಿದಾಗ, "ಸುಮಾರು 7 ಸಾವಿರ ಅರ್ಜಿಗಳು ಬಂದಿವೆ. ಎಲ್ಲರ ಅರ್ಜಿಗಳನ್ನು ಸ್ಥಳ ಪರಿಶೀಲನೆ ಮಾಡಿ ಅವರ ಆಸ್ತಿ ಮುಂದೆ ಇರುವುದು ಸರ್ಕಾರಿ ರಸ್ತೆಯೇ ಎಂದು ಪರಿಶೀಲಿಸಿ. ಆ ಆಸ್ತಿಗೆ ಜಿಪಿಎಸ್ ನಿಗದಿಪಡಿಸುತ್ತಿರುವ ಕಾರಣ ಇದು ವಿಳಂಬವಾಗುತ್ತಿದೆ ಎಂದು ಹೇಳಿದರು.
-
Bengaluru Waste: ಬೆಂಗಳೂರಲ್ಲಿ ಕಸ ಸಂಗ್ರಹ ವ್ಯವಸ್ಥೆಯಲ್ಲಿ ಹೊಸ ಸುಧಾರಣೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ












Click it and Unblock the Notifications