ಬೆಂಗಳೂರಿಗರಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಇಲ್ಲ

ಬೆಂಗಳೂರು, ಫೆ.21 : ಬೇಸಿಗೆಯಲ್ಲಿ ಬೆಂಗಳೂರು ನಗರಕ್ಕೆ ನೀರಿನ ಕೊರತೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಟ್ಯಾಂಕರ್ ಮೂಲಕ ನೀರು ಸರಬರಾಜು ಮುಂತಾದ ಕ್ರಮಗಳನ್ನು ಕೈಗೊಳ್ಳಲು 66 ಕೋಟಿ ರೂ.ಗಳನ್ನು ಸರ್ಕಾರ ಮೀಸಲಾಗಿಟ್ಟಿದೆ ಎಂದು ಅವರು ಹೇಳಿದ್ದಾರೆ.

ಗುರುವಾರದ ವಿಧಾನಪರಿಷತ್ತಿನ ಕಲಾಪದಲ್ಲಿ ಡಿಎಸ್ ವೀರಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಬೇಸಿಗೆಯಲ್ಲಿ ಬೆಂಗಳೂರು ನಗರದಲ್ಲಿ ನೀರಿನ ಕೊರತೆ ಉಂಟಾದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿರು ಕಡೆ ಬೋರ್ ವೆಲ್ ಕೊರೆಸಲಾಗುತ್ತದೆ ಮತ್ತು ಟ್ಯಾಂಕರ್ ಮೂಲಕ ಸಹ ನೀರು ಸರಬರಾಜು ಮಾಡಲಾಗುತ್ತದೆ ಎಂದ ತಿಳಿಸಿದರು.[ನೀರಿನ ಸಮಸ್ಯೆ ಉಲ್ಬಣ]

Water

ಬೇಸಿಗೆಯಲ್ಲಿ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಉದ್ದೇಶದಿಂದಲೇ 66 ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಬೆಂಗಳೂರು ಜಲಮಂಡಳಿ ಜೊತೆ ಸೇರಿ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದರು. [ಬಜೆಟ್ ಮಂಡಿಸುವಾಗ ಸದನದಲ್ಲಿದ್ದ ಮಹಿಳೆ ಯಾರು]

ನೀರಿನ ಕೊರತೆ ನಿವಾರಿಸಲು ಮೀಸಲಾಗಿಟ್ಟಿರುವ ಅನುದಾನವನ್ನು ಪೂರ್ವ, ಪಶ್ಚಿಮ, ಮತ್ತು ದಕ್ಷಿಣ ಭಾಗಗಳಿಗೆ ಹಂಚಿಕೆ ಮಾಡಲಾಗುತ್ತದೆ. ಉಳಿದ ಹಣವನ್ನು ಬೊಮ್ಮನಹಳ್ಳಿ, ದಾಸರಹಳ್ಳಿ, ಯಲಹಂಕ, ರಾಜರಾಜೇಶ್ವರಿ ನಗರ ಮತ್ತು ಮಹದೇವಪುರಗಳಿಗೆ ಹಂಚಲಾಗುತ್ತದೆ ಎಂದು ಸಿಎಂ ಮಾಹಿತಿ ನೀಡಿದರು.[ಗುರುವಾರ ಸದನಲ್ಲಿ ನಡೆದಿದ್ದೇನು]

ಈ ಅನುದಾನದಲ್ಲಿ ಅಗತ್ಯವಿರುವ ಕಡೆ ಹೊ ಬೋರ್ ವೆಲ್ ಕೊರೆಯಲಾಗುವುದು ಮತ್ತು ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಕಳೆದ ಐದು ವರ್ಷಗಳಲ್ಲಿ ನಗರದಲ್ಲಿ 7,241 ಬೋರ್ ವೆಲ್ ಕೊರೆಯಲಾಗಿದೆ. ಅವುಗಳಲ್ಲಿ 1,204 ಕೊಳವೆ ಬಾವಿಗಳು ಬತ್ತಿ ಹೋಗಿವೆ ಎಂದು ಸಿಎಂ ಸನದಕ್ಕೆ ಹೇಳಿದ್ದಾರೆ. ಪಿಟಿಐ ಚಿತ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+